ಮೈಸೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಹೆಸರಿನ ದತ್ತಿ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ ಆರ್.ಜಯಕುಮಾರ್‌ರವರಿಗೆ ಮೈಸೂರಿನಲ್ಲಿ ಪ್ರದಾನ ಮಾಡಲಾಯಿತು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಅನಾರೋಗ್ಯದ ಕಾರಣ ಚಿತ್ರದುರ್ಗದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರಿಗೆ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಆಗಮಿಸಿದ KUWJ ರಾಜ್ಯ ಅಧ್ಯಕ್ಷ ಶಿವಾನಂದ್ ತಗಡೂರ್ ಹಾಗೂ ಸಂಘದ ಪದಾಧಿಕಾರಿಗಳ ತಂಡ ಮತ್ತು ಮೈಸೂರಿನ ಪತ್ರಕರ್ತ ಗೆಳೆಯರು ಜಯಕುಮಾರ್‌ರವರ ಮನೆಯಂಗಳಕ್ಕೇ ತೆರಳಿ (ಬಯಲು ತೋಟ) ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದ್ದು ವಿಶೇಷವಾಗಿತ್ತು.
ಇದೇ ಸಂದರ್ಭದಲ್ಲಿ ಜಯಕುಮಾರ್‌ರವರ ಸ್ನೇಹಿತ ಬಳಗ, ಕುಟುಂಬ ವರ್ಗ ಹಾಗೂ ಮಾನವ ಬಂಧುತ್ವ ವೇದಿಕೆಯ ಸಂಗಾತಿಗಳು ಉಪಸ್ಥಿತರಿದ್ದರು. ದೂರದಿಂದ ಬಂದು ಮನೆಯಂಗಳದಲ್ಲೇ ಪ್ರಶಸ್ತಿ ನೀಡಿ ಗೌರವಿಸಿದ KUWJ ಗೆ ಜಯಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ.




