ಬೆಂಗಳೂರು: ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯನ್ನು ಯಾರ ನೇತೃತ್ವದಲ್ಲಿ ಎದುರಿಸಬೇಕು ಅದನ್ನು ಹೈಕಮಾಂಡ್ ತೀರ್ಮಾನಿಸಲಿದೆ. ಅದನ್ನು ನಾವೆಲ್ಲರೂ ಪಾಲಿಸುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ತಮ್ಮ ನೇತೃತ್ವದಲ್ಲಿಯೇ ಮುಂಬರುವ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅದು ಡಿ ಕೆ ಶಿವಕುಮಾರ್ ಅವರ ಹೇಳಿಕೆಯಾಗಿದೆ. ಆದರೆ ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.
ಯಾರ ನೇತೃತ್ವದಲ್ಲಿ ಚುನಾವಣೆ ನಡೆಯಬೇಕು, ಮುಖ್ಯಮಂತ್ರಿ ಯಾರಾಗಬೇಕು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಯಾರಾಗಬೇಕು ಎಂಬ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಈಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಡಿ ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ ಎಂದರು.
ಮುಖ್ಯಮಂತ್ರಿ ರೇಸ್‌ನಲ್ಲಿ ಡಿ.ಕೆ. ಶಿವಕುಮಾರ್ ಮೊದಲಿನಿಂದಲೂ ಇದ್ದಾರೆ. ಇದಕ್ಕೆಲ್ಲ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಆ ಸಮಯಕ್ಕಾಗಿ ಕಾಯಬೇಕಷ್ಟೇ ಎಂದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಆಕಾಂಕ್ಷಿ ಅಲ್ಲ. ಸಮಯ ಬಂದಾಗ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.
ಕೆಪಿಸಿಸಿ ಅಧ್ಯಕ್ಷರನ್ನ ನೇಮಿಸುವ ಅಧಿಕಾರ ನಮಗಿಲ್ಲ, ಅದನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ತಕ್ಷಣ ಆಗದೆ ಇರಬಹುದು, ಮುಂದೆಯಾದರೂ ಮಾಡುತ್ತಾರೆ. ಯಾವಾಗ ಮಾಡುತ್ತಾರೆ ಎನ್ನುವುದನ್ನು ಕಾದುನೋಡಬೇಕಾಗಿದೆ ಎಂದರು.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಸಂಸ್ಥೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಹೇಳಲು ಸಾಧ್ಯವಿಲ್ಲ. ಅದನ್ನು ಸಾಬೀತುಪಡಿಸಲು ಆಗಲ್ಲ. ಸಾಕ್ಷ್ಯಾಧಾರಗಳೂ ಇಲ್ಲ. ಸಿ.ಎಂ ಅವರ 14 ಸೈಟ್ ಗಳ ಬಗ್ಗೆನೇ ಹೆಚ್ಚಿನ ವಿಷಯ ಪ್ರಸ್ತಾಪ ಮಾಡ್ತಿರೋದೇ ರಾಜಕೀಯ. ಇದೆ ರೀತಿ 2,000 ಸೈಟ್‌ಗಳು ಹಂಚಿಕೆ ಆಗಿವೆ, ಆ ಬಗ್ಗೆ ಯಾಕೆ ಚರ್ಚೆ ಆಗ್ತಿಲ್ಲ ಎಂದರು.
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿಲ್ಲ. ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ನೀಡುವುದು ಒಂದೆರಡು ತಿಂಗಳು ವಿಳಂಬವಾಗಿರಬಹುದು. ಮುಂಬರುವ ದಿನಗಳಲ್ಲಿ ಎರಡೂ ತಿಂಗಳ ಹಣವನ್ನು ಒಟ್ಟಿಗೆ ಸೇರಿಸಿಕೊಡಬಹುದು ಎಂದರು.




