ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮತ್ತು ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ ಮಾರ್ಚ್ 15 ರಂದು ನಗರದ ಸರ್ಕಾರಿ ಐಟಿಐ ಕಾಲೇಜ್‍ನ ಆವರಣದಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಉದ್ಯೋಗದಾತ 40 ಕ್ಕೂ ಹೆಚ್ಚು ಬೃಹತ್ ಬಹುರಾಷ್ಟ್ರೀಯ ಕಂಪನಿಗಳು, ಕೈಗಾರಿಕೆಗಳು ಭಾಗವಹಿಸುತ್ತಿದ್ದು ವಿವಿಧ ಕ್ಷೇತ್ರಗಳಲ್ಲಿ ಸುಮಾರು ಅವಶ್ಯಕವಿರುವ 3000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಹ ಯುವಕ, ಯುವತಿಯರನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಆಸಕ್ತ ಯುವಕ ಯುವತಿಯರು ತಮ್ಮ ವಿದ್ಯಾರ್ಹತೆಯ ದಾಖಲಾತಿಗಳೊಂದಿಗೆ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಪಡೆದವರು ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕ್ಯೂ.ಆರ್ ಕೋಡ್ ಲಿಂಕ್, Google Form Link: https://tinyurl.com/mnm8vykz email: dsmodvg@gmail.com ದೂ.ಸಂ: 08192-259447, 7892956667 ಸಂಪರ್ಕಿಸಬಹುದು.




