ಬೆಂಗಳೂರು: ಬಿಬಿಎಂಪಿ ಮಾಜಿ ನಾಯಕರು ಹಾಗೂ ಭ್ರಷ್ಟಾಚಾರ ವಿರೋಧಿ ವೇದಿಕೆಯ ಅಧ್ಯಕ್ಷ ಎನ್. ಆರ್. ರಮೇಶ್ ನೇತತ್ವದಲ್ಲಿ, MLR ಕುಟುಂಬದ ಸಹಯೋಗದೊಂದಿಗೆ ಪದ್ಮನಾಭನಗರದ ಪುಟ್ಟಲಿಂಗಯ್ಯ ಆಟದ ಮೈದಾನ ಮತ್ತು Carmel ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ “ಬೃಹತ್ ಉದ್ಯೋಗ ಮೇಳ”ದಲ್ಲಿ ಸುಮಾರು 12,000ಕ್ಕೂ ಹೆಚ್ಚು ಮಂದಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಉದ್ಯೋಗಾಕಾಂಕ್ಷಿಗಳು ಆಗಮಿಸಿದ್ದರು.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯಸಿ, ಪದವಿ, ಸ್ನಾತಕೋತ್ತರ ಪದವಿ, ಐ.ಟಿ.ಐ., ಡಿಪ್ಲೊಮಾ, ಇಂಜನಿಯರಿಂಗ್ ತರಗತಿಗಳಲ್ಲಿ ಉತ್ತೀರ್ಣರಾಗಿರುವ /ಅನುತ್ತೀರ್ಣರಾಗಿರುವ ಹಾಗೂ ವಿಶೇಷ ಚೇತನರು ಸೇರಿದಂತೆ ಸುಮಾರು 4,000 ಮಂದಿಗೆ ಬೆಂಗಳೂರು ಮಹಾನಗರದ ಅತ್ಯಂತ ಪ್ರತಿಷ್ಠಿತ ಕಾರ್ಪೊರೇಟ್ / ಬಹು ರಾಷ್ಟ್ರೀಯ (MNC) ಕಂಪನಿಗಳಲ್ಲಿ ಉದ್ಯೋಗಾವಕಾಶಗಳನ್ನು ದೊರಕಿಸಿ ಕೊಡಲಾಯಿತು.
ಸುಮಾರು 4,000 ಕ್ಕೂ ಹೆಚ್ಚು ಮಂದಿಗೆ ಸ್ಥಳದಲ್ಲಿಯೇ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಲಾಯಿತು.
ಈ ಉದ್ಯೋಗ ಮೇಳ ಕಾರ್ಯಕ್ರಮವನ್ನು ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಉದ್ಘಾಟಿಸಿದರು ಮತ್ತು ಪದ್ಮನಾಭನಗರದ ಶಾಸಕರು ಹಾಗೂ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ರವರು ನೂರಾರು ಮಂದಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು.
ದೇಶದಲ್ಲಿಯೇ ಇಷ್ಟು ಬೃಹತ್ ಪ್ರಮಾಣದ “ಕಾಗದ ರಹಿತ ಕಾರ್ಯಕ್ರಮ (Paperless Event)” ವನ್ನಾಗಿ ಆಯೋಜಿಸಿದ್ದರಿಂದ ಸದರಿ ಕಾರ್ಯಕ್ರಮವು “LONDON BOOK OF WORLD RECORDS” ದಾಖಲೆಗೆ ಸೇರ್ಪಡೆಯಾಯಿತು. ಈ ಕಾರ್ಯಕ್ರಮದಲ್ಲಿ LONDON BOOK OF WORLD RECORDS ಸಂಸ್ಥೆಯ ಮುಖ್ಯಸ್ಥರೂ ಸಹ ಹಾಜರಿದ್ದರು ಹಾಗೂ 200ಕ್ಕೂ ಹೆಚ್ಚು ಕಾರ್ಪೊರೇಟ್ ಮತ್ತು MNC ಕಂಪನಿಗಳ ಮುಖ್ಯಸ್ಥರುಗಳು ಹಾಜರಿದ್ದು, 4,000ಕ್ಕೂ ಹೆಚ್ಚು ಅರ್ಹ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರಗಳನ್ನು ವಿತರಿಸಿದರು.








