ಬೆಂಗಳೂರು: ಜೆಡಿಎಸ್ ನಾಯಕ ಮಾಜಿ ಸಚಿವ ರೇವಣ್ಣ ಬಂಧನದ ಹಿಂದೆ ದೊಡ್ಡ ತಿಮಿಂಗಿಲ ಇದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್, ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿಯಲಿ, ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ ಎಂದು ಹೇಳಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕುಮಾರಸ್ವಾಮಿ ಅವರು ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ ಅವರನ್ನು ಒಳಗೆ ಹಾಕಿಸಲಿ. ತಿಮಿಂಗಿಲಗಳನ್ನು ಅವರೇ ನುಂಗಿಕೊಳ್ಳಲಿ. ನಾನು ನಿರ್ದೇಶಕನೂ ಅಲ್ಲ, ನಿರ್ಮಾಪಕನೂ ಅಲ್ಲ. ನಾನು ಕೇವಲ ಪ್ರದರ್ಶಕ ಅಷ್ಟೇ ಎಂದರು.
ಬೇರೆಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ. ನಾನು ಚುನಾವಣಾ ಪ್ರಚಾರದಲ್ಲಿ ನಿರತನಾಗಿದ್ದೇನೆ. ನಾನು ರಾಜಕೀಯ ಪಕ್ಷದ ಅಧ್ಯಕ್ಷ. ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ ಎಂದರು.
ಈಗ ಆ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ. ರೇವಣ್ಣ ಅವರ ಪರಿಸ್ಥಿತಿ ನೋಡಿ ನನಗೂ ಬೇಸರವಾಗುತ್ತಿದೆ. ಅವರದು ದೊಡ್ಡ ಕುಟುಂಬ, ಈ ರೀತಿ ಆಗಬಾರದು ಎಂದು ಬಯಸುತ್ತೇನೆ ಎಂದರು.
ಅವರು ನನಗೆ ಏನಾದಲೂ ಬಯಸಲಿ. ಆದರೆ ನಾನು ಮಾತ್ರ ಅವರಿಗೆ ಕೆಟ್ಟದ್ದು ಬಯಸುವುದಿಲ್ಲ. ನಾನು ಪ್ರಕೃತಿ ನಿಯಮ, ನ್ಯಾಯದ ಮೇಲೆ ನಂಬಿಕೆ ಇಟ್ಟವನು. ನಾನು ರಾಜಕೀಯ ಷಡ್ಯಂತ್ರಕ್ಕೆ ಗುರಿ ಆಗಿದ್ದವನೇ ಮತ್ತು ಅದರ ನೋವು ಅನುಭವಿಸಿದ್ದೇನೆ. ಆ ವೇಳೆಯಲ್ಲಿ ನಾನು ಎಷ್ಟು ಗಟ್ಟಿಯಾಗಿ, ಧೈರ್ಯವಾಗಿ, ಆತ್ಮವಿಶ್ವಾಸದಿಂದ ಇದ್ದೆ ಎಂಬುದು ನನಗೆ ಮಾತ್ರ ಗೊತ್ತಿದೆ. ದೇವರು ನನಗೆ ಎಲ್ಲಾ ರೀತಿಯ ರಕ್ಷಣೆ ನೀಡಿದ್ದು, ನಾನು ಬೇರೆಯವರಿಗೆ ಕೆಟ್ಟದು ಬಯಸುವುದಿಲ್ಲ. ಆದರೆ ನನ್ನ ಬ್ರದರ್ ಕುಮಾರಣ್ಣನಿಗೆ ವಿಧಾನಸಭೆಯಲ್ಲಿ ಉತ್ತರ ನೀಡುತ್ತೇನೆ ಎಂದರು.



