ಬೆಂಗಳೂರು: ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಲಾಲ್ ಬಾಗ್ ಉದ್ಯಾನದಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರೊಂದಿಗೆ ಸಂವಾದದ ಬಳಿಕ ಶಿವಕುಮಾರ್ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ನಾನು ಸಾರ್ವಜನಿಕರ ಭೇಟಿಗೆ ಬಂದಾಗ ಕೆಲವರು ನೀವು ಮುಖ್ಯಮಂತ್ರಿ ಆಗಬೇಕು, ಆ ಸಮಯ ಹತ್ತಿರ ಬರುತ್ತಿದೆಯೇ ಎಂದು ಕೇಳಿದರು. ಆದರೆ ಸಿಎಂ ಆಗುವ ಕಾಲ ಹತ್ತಿರ ಬರುತ್ತಿದೆ ಎಂದು ನಾನೇ ಹೇಳಿದ್ದೇನೆ ಎಂದು ಕೆಲವು ಮಾಧ್ಯಮಗಳು ಸುದ್ದಿ ತಿದ್ದಿ ಪ್ರಸಾರ ಮಾಡುತ್ತಿವೆ. ನೀವು ಹಾಗೆಲ್ಲ ಸುದ್ದಿ ತಿರುಚಿ ತೋರಿಸಬೇಡಿ ಎಂದರು.
ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ. ನಾನು ಇಲ್ಲಿಗೆ ಬಂದಿರುವುದು ಸಾರ್ವಜನಿಕರ ಸೇವೆ ಮಾಡಲು. ರಾಜಕಾರಣ ಮಾಡಲು ಅಲ್ಲ. ಜನರ ಸೇವೆ ಮಾಡಲು ಹಗಲು ರಾತ್ರಿ ತಿರುಗುತ್ತಿದ್ದೇನೆ. ನೀವು ಇದೇ ರೀತಿ ಸುದ್ದಿ ತಿರುಚುವುದಾದರೆ, ನಾನು ನಿಮಗೆ ಸಹಕಾರ ನೀಡುವುದಿಲ್ಲ. ಕಾರ್ಯಕ್ರಮಗಳಿಗೆ ಕರೆಯುವುದೂ ಇಲ್ಲ, ಮಾಧ್ಯಮಗೋಷ್ಠಿ ಕರೆಯುವುದೂ ಇಲ್ಲ ಎಂದರು.
ನಾನು ಆ ಹೇಳಿಕೆ ಎಲ್ಲಿ ಹೇಳಿದ್ದೇನೆ. ಮಾಧ್ಯಮಗಳು ರಾಜಕಾರಣ ಮಾಡುವುದು ಬೇಡ. ನಾನು ಆ ರೀತಿ ಹೇಳಿಲ್ಲ, ಅದರ ಅಗತ್ಯವೂ ನನಗೆ ಇಲ್ಲ. ನನಗೆ ನನ್ನ ಗುರಿ ಗೊತ್ತಿದೆ. ಭಗವಂತ ನನಗೆ ಯಾವಾಗ ಅವಕಾಶ ಕೊಡುತ್ತಾನೋ ಕೊಡಲಿ. ರಾಜ್ಯದ ಜನರ ಸೇವೆ ಹಾಗೂ ಬೆಂಗಳೂರಿನ ನಾಗರೀಕರಿಗೆ ಉತ್ತಮ ಆಡಳಿತ ನೀಡಲು ಶ್ರಮಿಸುತ್ತಿದ್ದೇನೆ. ಆದರೆ ಒಳ್ಳೆಯ ಕೆಲಸ ಬಿಟ್ಟು ವಿವಾದ ಸೃಷ್ಟಿಸಲು ಕೆಲವು ಮಾಧ್ಯಮಗಳು ಪ್ರಯತ್ನಿಸುತ್ತಿವೆ ಎಂದರು.
ಇದೇ ರೀತಿ ನನ್ನ ವಿಚಾರದಲ್ಲಿ ಸುಳ್ಳು ಸುದ್ದಿ ಹಾಕಿ, ದಾರಿ ತಪ್ಪಿಸುವ ಪ್ರಯತ್ನ ಮಾಡಿದರೆ ನಾನು ಮಾನನಷ್ಟ ಮೊಕದ್ದಮೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.




