ಶಿವಮೊಗ್ಗ\ಬೆಂಗಳೂರು: ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗದಲ್ಲಿ ಕಾಣಿಸಿಕೊಂಡಿರುವ ಬಂಡಾಯ ತಲೆ ನೋವಾಗಿ ಪರಿಣಮಿಸಿದೆ. ಮುನಿಸು ಮರೆತು ನಾಳೆ ಶಿವಮೊಗ್ಗದಲ್ಲಿ ನಡೆಯುತ್ತಿರುವ ಪ್ರಧಾನಿ ಮೋದಿ ಅವರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಹಿರಿಯ ನಾಯಕರು ಈಶ್ವರಪ್ಪ ಅವರಿಗೆ ಮನವಿ ಮಾಡಿದರೂ ಅದಕ್ಕೆ ಅವರು ಸೊಪ್ಪು ಹಾಕಿಲ್ಲ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೋಹನ ಅಗರವಾಲ್ ಹಾಗೂ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಒಳಗೊಂಡ ಪಕ್ಷದ ನಿಯೋಗ ಈಶ್ವರಪ್ಪ ಅವರ ಮನೆಗೆ ಆಗಮಿಸಿ ಮನವೊಲಿಸಲು ಸಭೆ ನಡೆಸಲಾಯಿತು. ಆದರೆ, ಇದಕ್ಕೆ ಜಗ್ಗದ ಈಶ್ವರಪ್ಪ, ಸಭೆಯ ಮಧ್ಯದಲ್ಲಿಯೇ ಬೇರೆ ಕಾರ್ಯಕ್ರಮದ ನಿಮಿತ್ತ ಎದ್ದು ತೆರೆಳಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮಾ.18ಕ್ಕೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಆದರೆ, ಕಾರ್ಯಕ್ರಮದ ವೇದಿಕೆ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ತಮ್ಮ ಬಂಡಾಯ ಪರ ನಿಲುವನ್ನು ಪ್ರತಿಪಾದಿಸಿದರು.
ಪ್ರಧಾನಿ ಮೋದಿ ನನ್ನ ದೇವರು. ಪ್ರಾಣ ಹೋದರೂ ಅವರ ಹೆಸರು ಹೇಳುವುದನ್ನು ಬಿಡುವುದಿಲ್ಲ. ಆದರೆ, ಏಕ ಕುಟುಂಬದ ಕಪಿಮುಷ್ಠಿಯಿಂದ ಪಕ್ಷವನ್ನು ಬಿಡುಗಡೆ ಮಾಡಬೇಕು ಎನ್ನುವ ಉದ್ದೇಶದಿಂದ ಲೋಕಸಭಾ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಗೆದ್ದ ಬಳಿಕ ಮೋದಿ ಬಳಿ ಹೋಗುವೆ. ಕಾರ್ಯಕ್ರಮಕ್ಕೆ ತೆರಳದಿರುವ ಕುರಿತ ದುಃಖವಿದೆ ಎಂದರು.
ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ. ಯಡಿಯೂರಪ್ಪ ಅವರು ಸಂಧಾನಕ್ಕಾಗಿ ಶಾಸಕ ಆರಗ ಜ್ಞಾನೇಂದ್ರ ಅವರನ್ನು ಕಳುಹಿಸಿದ್ದರು. ನಾನು ಅವರ ಸಂಧಾನಕ್ಕೆ ಒಪ್ಪಿಲ್ಲ. ನನ್ನ ಪುತ್ರನಿಗೆ ಟಿಕೆಟ್ ತಪ್ಪಿಸಿದ್ದು ಮಾತ್ರವಲ್ಲ, ನನಗೆ ಯಡಿಯೂರಪ್ಪ ಕುಟುಂಬದವರು ಮೋಸ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.
ಯಡಿಯೂರಪ್ಪ ಹಾಗೂ ಅವರ ಪುತ್ರರ ಕೈಯಿಂದ ಪಕ್ಷ ನಲುಗುತ್ತಿದೆ. ಲಿಂಗಾಯತರೆಲ್ಲರೂ ಯಡಿಯೂರಪ್ಪ ಅವರ ಕೈಯಲ್ಲಿದ್ದಾರೆಂಬ ಭ್ರಮೆಯಲ್ಲಿ ಕೇಂದ್ರದ ನಾಯಕರಿದ್ದಾರೆ. ಪಕ್ಷ ನಿಷ್ಠೆಯಿಂದ ಹಲವಾರು ವರ್ಷಗಳಿಂದ ಇದ್ದೇನೆ. ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಅವರದೇ ರಾಜ್ಯಭಾರವಾಗಿದೆ. ನೊಂದ ಕಾರ್ಯಕರ್ತರು ಇವರಿಂದ ನಲುಗಿ ಹೋಗಿದ್ದಾರೆ ಎಂದರು.




