ಬೆಂಗಳೂರು: ಕರ್ನಾಟಕ ಉದಯವಾಗಿ 70 ವರ್ಷಗಳಾಗಿರುವುದನ್ನು ಪರಿಗಣಿಸಿ 70 ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿದ್ದು, ಅವರ ನಿರ್ಧಾರದಂತೆ ಆಯ್ಕೆ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ “೭೦ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ೭೦ ಮಂದಿ ಗಣ್ಯರನ್ನು ಸನ್ಮಾನಿಸಿ ಮಾತನಾಡಿದರು.
ಅರ್ಜಿ ಹಾಕಿದವರನ್ನು ಪರಿಗಣಿಸದೇ ಆಯಾ ಕ್ಷೇತ್ರದ ಪರಿಣಿತರನ್ನೇ ಗುರುತಿಸಿ ಆಯ್ಕೆ ಮಾಡಬೇಕು ಎನ್ನುವುದು ನಮ್ಮ ತೀರ್ಮಾನವಾಗಿತ್ತು. ಪುರಸ್ಕೃತರೆಲ್ಲರೂ ಶತಾಯುಷಿಗಳಾಗಿ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಇನ್ನಷ್ಟು ಸಾಧನೆ ಮಾಡಿ, ನಿಮ್ಮ ಬದುಕು ಸಾರ್ಥಕವಾಗಲಿ ಎಂದು ಹಾರೈಸಿದರು.
ಒಂದೇ ವಿಭಾಗದಲ್ಲಿ ಒಬ್ಬರಿಗಿಂತ ಹೆಚ್ಚು ಸಾಧಕರ ಹೆಸರು ಇದ್ದ ಸಂದರ್ಭದಲ್ಲಿ ಮಾತ್ರ ಪ್ರಾದೇಶಿಕ ನ್ಯಾಯ, ಸಾಮಾಜಿಕ ನ್ಯಾಯದ ಕಾರಣಕ್ಕಾಗಿ ಆ ಅರ್ಹರಲ್ಲೇ ಒಬ್ಬರ ಹೆಸರನ್ನು ಅಂತಿಮಗೊಳಿಸಲಾಗಿದೆ. ಮಾಧ್ಯಮಗಳು ಯಾರ ಆಯ್ಕೆ ಬಗ್ಗೆಯೂ ತಕರಾರು ಮಾಡಿಲ್ಲ. ಆದ್ದರಿಂದ ಅರ್ಹರಿಗೇ ಪ್ರಶಸ್ತಿ ಸಿಕ್ಕಿದೆ ಎಂದು ಭಾವಿಸುತ್ತೇನೆ ಎಂದರು.
ಕನ್ನಡ ನಾಡು – ನುಡಿಯ ಬೆಳವಣಿಗೆಗೆ ಈ ಎಲ್ಲಾ ಸಾಧಕರ ಸೇವೆಗೆ ಈ ಮೂಲಕ ಗೌರವ ಸಲ್ಲಿಸಲಾಗಿದೆ. ಪ್ರಶಸ್ತಿ ಪುರಸ್ಕೃತರ ಜೀವನ ಸಾಧನೆ ಇತರರಿಗೆ ಮಾದರಿಯಾಗಲಿ. ಕನ್ನಡ ಭಾಷೆ ನಾಡಿನ ಮನೆ ಮನೆಗಳಲ್ಲಿ ನೆಲೆಸುವಂತಾಗಲಿ ಎಂದರು.




