ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲಕ್ಕೆ ಬೆಳಗಾವಿ ಅಧಿವೇಶನದ ಬಳಿಕ ಪೂರ್ಣವಿರಾಮ ಬೀಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ ಶಾಸಕ ಲಕ್ಷ್ಮಣ ಸವದಿ ಅಧಿವೇಶನ ಮುಗಿದ ನಂತರ ತಾವು ಮಂತ್ರಿಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ಗೊಂದಲವನ್ನು ಹೈಕಮಾಂಡ್ ನಾಯಕರು ಶೀಘ್ರದಲ್ಲೇ ಬಗೆಹರಿಸಲಿದ್ದಾರೆ ಎಂದರು.
ಪಕ್ಷದಲ್ಲಿ ನಾಯಕತ್ವಕ್ಕೆ ಸಂಬಂಧಿಸಿದಂತೆ ಸೃಷ್ಟಿಯಾದ ಗೊಂದಲವನ್ನು ಬಗೆಹರಿಸುವುದು ನನ್ನ ಕಡೆ ಇಲ್ಲ. ಬದಲಾಗಿ, ರಾಷ್ಟ್ರೀಯ ನಾಯಕರು ಗಮನ ಹರಿಸಿದ್ದಾರೆ. ಆದಷ್ಟು ಬೇಗ ಬಿಕ್ಕಟ್ಟು ಬಗೆಹರಿಯುತ್ತದೆ. ಈ ನಿಟ್ಟಿನಲ್ಲಿ ನಾನು ಕೂಡ ರಾಷ್ಟ್ರೀಯ ನಾಯಕರಿಗೆ ವಿನಂತಿ ಮಾಡುತ್ತೇನೆ ಎಂದರು.
ನಾಯಕತ್ವ ಬದಲಾವಣೆ ಚರ್ಚೆಯ ಹಿನ್ನೆಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದಾಗಿ ಪಕ್ಷಕ್ಕೆ ಮುಜುಗರ ಆಗುತ್ತಿದೆ. ಹಾಗಾಗಿ ಆದಷ್ಟು ಬೇಗ ಹೈಕಮಾಂಡ್ ರಾಜ್ಯದ ನಾಯಕರನ್ನು ದೆಹಲಿಗೆ ಕರೆಸಿ ಸಮಸ್ಯೆಯನ್ನು ಬಗೆಹರಿಸಲಿ. ಪಕ್ಷದ ಹೈಕಮಾಂಡ್ ಏನೇ ತೀರ್ಮಾನ ಕೈಗೊಂಡರೂ ನಾವು ಅದಕ್ಕೆ ಬದ್ಧ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಈಗಾಗಲೇ ಹೇಳಿದ್ದಾರೆ. ಹಾಗಾಗಿ ಹೈಕಮಾಂಡ್ ಏನು ತೀರ್ಮಾನಕ್ಕೆ ಬರಲಿದೆ ಎಂಬುದನ್ನು ಕಾದುನೋಡಬೇಕು ಎಂದರು.




