ಬೆಂಗಳೂರು: ರಾಜ್ಯ ಸರ್ಕಾರದ ಹಲವಾರು ಮಹಾತ್ವಾಕಾಂಕ್ಷೆಯ ಕಾನೂನುಗಳಿಗೆ ಸಣ್ಣ ಕಾರಣಗಳನ್ನು ಮುಂದಿಟ್ಟುಕೊಂಡು ಅಂಕಿತ ಹಾಕಲು ನಿರಾಕರಿಸಿರುವ ರಾಜ್ಯಪಾಲ ತಾವರ್ ಚೆಂದ್ ಗೆಹ್ಲೋಟ್ ನಡೆಗೆ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರ ಸಲ್ಲಿಸಿರುವ ಮಸೂದೆಗಳ ಬಗ್ಗೆ ರಾಜ್ಯಪಾಲರು ಸ್ಪಷ್ಟನೆ ಕೇಳಿದರೆ ಉತ್ತರ ನೀಡಬಹುದು. ಆದರೆ ಇಲ್ಲಿ ನಡೆದಿರುವುದು ಬೇರೆ ರಾಜಕಾರಣ ಎಂದರು.
ರಾಜ್ಯಪಾಲರು ಸ್ಪಷ್ಟನೆ ಕೇಳಿದರೆ ಅದನ್ನು ತಪ್ಪು ಎಂದು ಹೇಳಲಾಗುವುದಿಲ್ಲ. ಆದರೆ ಸಣ್ಣ ಸಣ್ಣ ಕಾರಣಗಳನ್ನು ಮುಂದಿಟ್ಟು ಮಸೂದೆಗೆ ಅಂಕಿತ ಹಾಕಲು ನಿರಾಕರಿಸಿ ವಾಪಸ್ ಕಳುಹಿಸಿದರೆ ಏನು ಹೇಳುವುದು? ರಾಜ್ಯಪಾಲರಿಗೆ ದೇವರು ಒಳ್ಳೆ ಬುದ್ಧಿ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು.
ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಯಾವ ಪ್ರಯತ್ನ ಮಾಡಿದರೂ ಪ್ರಯೋಜನ ಆಗುವುದಿಲ್ಲ. ನಾವೂ ಸಹ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ನಾವು ನಮ್ಮ ಕೆಲಸ ಮಾಡುತ್ತೇವೆ ಎಂದರು.
ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಪರಮೇಶ್ವರ್ ರಾಜ್ಯಪಾಲರಿಗೆ ಮತ್ತು ಸರ್ಕಾರಕ್ಕೆ ಹೊಂದಾಣಿಕೆಯಾಗದೆ ಇದ್ದಾಗ ಸಂಘರ್ಷಗಳು ಸಾಮಾನ್ಯ. ಈವರೆಗೂ ಒಂದೋ ಎರಡೋ ಮಸೂದೆಗಳನ್ನು ಮತ್ತಷ್ಟು ವಿವರಣೆ ನೀಡುವಂತೆ ವಾಪಸ್ ಕಳುಹಿಸಲಾಗುತ್ತಿತ್ತು. ಸಾರಾಸಗಟಾಗಿ ಇದೇ ಮೊದಲ ಬಾರಿಗೆ 11 ಮಸೂದೆಗಳನ್ನು ಪೂರ್ಣವಾಗಿ ವಾಪಸ್ ಕಳುಹಿಸಲಾಗಿದೆ. ಇದರಿಂದ ರಾಜ್ಯಪಾಲರಿಗೆ ಸರ್ಕಾರದ ಮೇಲೆ ವಿಶ್ವಾಸ ಕಡಿಮೆಯಾಗಿದೆ ಎಂಬ ಸಂದೇಶ ರವಾನೆಯಾಗಿದೆ ಎಂದರು.
ತಮಿಳುನಾಡು, ಕೇರಳ ಮತ್ತು ಪಶ್ಚಿಮ ಬಂಗಾಳ ರಾಜ್ಯಪಾಲರ ಮಾದರಿಯಲ್ಲಿಯೇ ಕರ್ನಾಟಕದ ರಾಜ್ಯಪಾಲರು ನಡೆದುಕೊಳ್ಳುತ್ತಿದ್ದಾರೆಯೇ ಎಂಬ ಅನುಮಾನಗಳು ಈಗ ಕಾಡುತ್ತಿವೆ. ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.




