ಬೆಂಗಳೂರು: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಭೇಟಿಯಲ್ಲಿ ಯಾವುದೇ ರಾಜಕೀಯ ಉದ್ದೇಶ ಇರಲಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ದೆಹಲಿಯಿಂದ ಹಿಂತಿರುಗಿದ ಅವರು ತಮ್ಮ ನಿವಾಸದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಸಿಎಂ ಆಪ್ತ ಮಂತ್ರಿಗಳೊಂದಿಗೆ ಸಭೆ ನಡೆಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಪಕ್ಷದ ಅಧ್ಯಕ್ಷರಾಗಲಿ, ಮುಖ್ಯಮಂತ್ರಿಯಾಗಲಿ, ಕಾಂಗ್ರೆಸ್ ಪಕ್ಷದಿಂದಲೇ ಆಗುತ್ತೇನೆ ಎಂದರು.
ದೆಹಲಿ ಭೇಟಿಯ ಸಮಯದಲ್ಲಿ ಹನಿಟ್ರ್ಯಾಪ್ ಸೇರಿದಂತೆ ಯಾವುದೇ ರಾಜಕೀಯ ವಿಚಾರ ಚರ್ಚೆ ಮಾಡಲಿಲ್ಲ. ಬೆಳಗಾವಿ ವಿಮಾನ ನಿಲ್ದಾಣ ಕಾಮಗಾರಿ ನಿಂತು ಹೋಗಿದ್ದು, ಆ ಕುರಿತು ಚರ್ಚೆ ನಡೆಸಿದ್ದೇನೆ. ಅದೇ ರೀತಿಯಲ್ಲಿ ರಾಜ್ಯದ ಹೆದ್ದಾರಿ ಯೋಜನೆಗಳು ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಕೇಂದ್ರ ಮಂತ್ರಿಗಳಾದ ಪ್ರಹ್ಲಾದ ಜೋಶಿ, ಸೋಮಣ್ಣ, ಕುಮಾರಸ್ವಾಮಿ ಸೇರಿದಂತೆ ಹಲವರ ಜೊತೆ ಮಾತನಾಡಿದ್ದೇನೆ. ಅದೇ ರೀತಿಯಲ್ಲಿ ನಮ್ಮ ಪಕ್ಷದ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಿದ್ದೇನೆ ಎಂದರು.
ನಾನು ಈ ರಾಜ್ಯದ ಮುಖ್ಯಮಂತ್ರಿ ವೈಟಿಂಗ್ ಲಿಸ್ಟ್ ನಲ್ಲಿ ಇದ್ದೇನೆ. ಹಾಗೆ ಪಕ್ಷದ ಅಧ್ಯಕ್ಷನು ಕೂಡ ಆಗಬೇಕು ಎಂದು ಬಯಸುತ್ತಿದ್ದು, ಎಲ್ಲವೂ ಕಾಂಗ್ರೆಸ್ ಪಕ್ಷದಿಂದಲೇ ಆಗಲಿದೆ. ಯಾವುದೇ ಕಾರಣಕ್ಕೂ ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎಂದರು.
ದೆಹಲಿ ಭೇಟಿಯ ವೇಳೆ ಹನಿಟ್ರಾಪ್‌ಗೆ ಸಂಬಂಧಪಟ್ಟಂತೆ ಯಾವುದೇ ಚರ್ಚೆಗಳಾಗಿಲ್ಲ. ದೆಹಲಿಗೆ ಹೋಗಿ ರಾಜಕೀಯದ ದೂರುಗಳನ್ನು ನೀಡುವ ಅಗತ್ಯ ತಮಗಿಲ್ಲ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ 138 ಶಾಸಕರಿದ್ದಾರೆ. ಜೆಡಿಎಸ್ 18 ಶಾಸಕರನ್ನು ತೆಗೆದುಕೊಂಡು ನಾವೇನು ಮಾಡೋಣ ಎಂದು ಪ್ರಶ್ನಿಸಿದ ಅವರು, ಓವರ್ ಲೋಡೆಡ್ ಇದ್ದರೂ ನಮ್ಮದು ಕಾಂಗ್ರೆಸ್ ಪಕ್ಷವೇ. ಇಲ್ಲಿಯೇ ಅಧ್ಯಕ್ಷ ಆಗಬೇಕು. ಇಲ್ಲಿಯೇ ಸಿಎಂ ಆಗಬೇಕು. ಸದ್ಯಕ್ಕೆ ವೇಯ್ಟಿಂಗ್ ಲಿಸ್ಟ್‌ನಲ್ಲಿ ಇದ್ದೇವೆ ಇಲ್ಲಿಯೇ ಕಾಯ್ತೇವೆ ಎಂದರು.
ನಾನು ಆರ್‌ಎಸಿ ಟಿಕೆಟ್‌ನಲ್ಲಿದ್ದೇನೆ. ಇಲ್ಲಿಯೇ ಕಾಂಗ್ರೆಸ್ ಪಕ್ಷದಲ್ಲಿಯೇ ಕಾಯ್ತೇನೆ. ಯಾರಾದ್ರೂ ಮೆಜೆಸ್ಟಿಕ್ ಜಾಮ್‌ನಲ್ಲಿ ಸಿಕ್ಕಿಹಾಕಿಕೊಂಡು ಬರುವುದು ತಡವಾದರೆ ನಮಗೆ ಅವಕಾಶ ಸಿಗಬಹುದು ಎಂದರು.
ಎಲ್ಲರೂ ಆರ್‌ಎಸಿ ಟಿಕೆಟ್ ಇಟ್ಟುಕೊಂಡೇ ಕಾಯ್ತಿದ್ದಾರೆ. ಇಲ್ಲಿ ಶಿಂಧೆ, ಅಜಿತ್ ಪವರ್ ಯಾರೂ ಇಲ್ಲ. ಆ ಸಾಮರ್ಥ್ಯ ಇಲ್ಲಿ ಯಾರಿಗೂ ಇಲ್ಲ ಎಂದರು.
ಸಚಿವ ಕೆ.ಎನ್.ರಾಜಣ್ಣ ಹನಿಟ್ರ್ಯಾಪ್ ಕೇಸ್ ಬೇರೆ. ರಾಜೇಂದ್ರ ಕೇಸ್ ಬೇರೆ. ಎರಡೂ ಒಂದಕ್ಕೊಂದು ಸಂಬಂಧ ಇಲ್ಲ. ರಾಜೇಂದ್ರ ಕೇಸ್ ಸ್ವಲ್ಪ ಹಳೆಯದು, ಎರಡು ತಿಂಗಳು ಮೊದಲಿನದು. ಅವರಿಗೆ ಯಾರೋ ಕರೆ ಮಾಡಿ ಬೆದರಿಕೆ ಹಾಕ್ತಿದ್ರು ಅನ್ನೋದು. ಹನಿಟ್ರ್ಯಾಪ್‌ಗೂ ಇದಕ್ಕೂ ಸಂಬಂಧ ಇಲ್ಲ ಎಂದರು.
ಅಧಿವೇಶನ ಮುಗಿದ ಬಳಿಕ ನಾನು ರಾಜಣ್ಣ ಅವರನ್ನು ಭೇಟಿ ಮಾಡಿಲ್ಲ. ರಾಜಣ್ಣ ಸಿಕ್ಕಿದ ಮೇಲೆ ಯಾಕೆ ತಣ್ಣಗಾದರು ಎಂಬ ಬಗ್ಗೆ ಚರ್ಚೆ ಮಾಡ್ತೇನೆ. ಎಲ್ಲದಕ್ಕೂ ಇತಿಶ್ರೀ ಹಾಡಬೇಕು. ಇಲ್ಲದಿದ್ದರೆ ಹೋದಲ್ಲಿ ಬಂದಲ್ಲಿ ಮತ್ತೆ ಹನಿಟ್ರ್ಯಾಪ್ ಬಗ್ಗೆಯೇ ಚರ್ಚೆ ಆಗುತ್ತದೆ ಎಂದರು.
ಸರ್ಕಾರದ ವಿರುದ್ಧ ಗುತ್ತಿಗೆದಾರರ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಹಂತಹಂತವಾಗಿ ಬಿಲ್ ಕ್ಲಿಯರ್ ಮಾಡ್ತಿದ್ದೇವೆ. ನಮ್ಮ ಇಲಾಖೆಯದ್ದು ಯಾವುದೂ ಪೆಂಡಿಂಗ್ ಇಲ್ಲ. ನಾವು ಎಲ್ಲವನ್ನೂ ಕೊಡ್ತಿದ್ದೇವೆ ಎಂದರು.




