ಬೆಂಗಳೂರು: ನಮ್ಮ ಮಕ್ಕಳ ದಾರಿ ತಪ್ಪಿಸುವವರ ವಿರುದ್ದ ಮಾತನಾಡಿದೆ. ಚಿಕ್ಕಪ್ಪ, ಅಣ್ಣ, ಹಿತಚಿಂತಕನಾಗಿ ಉತ್ತರಕರ್ನಾಟಕ ಭಾಷೆಯಲ್ಲಿ ಮಾತನಾಡಿದ್ದು ತಪ್ಪೇ? ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದರು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಸಿಟಿ ರವಿ ಅವರ ‘ಶಿವರಾಜ್ ತಂಗಡಗಿ ಅವರು ಅಪ್ಪನಿಗೆ ಹುಟ್ಟಿದ್ದರೆ ಇಂತಹ ಮಾತು ಹೇಳುತ್ತಿರಲಿಲ್ಲ’ ಈ ಹೇಳಿಕೆಗೆ ಕೆಂಡಮಂಡಲರಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ, ಸಿ.ಟಿ.ರವಿ ಅವರು ಅಪ್ಪನಿಗೆ ಹುಟ್ಟಿದ್ದರೇ ಎನ್ನುವ ಮಾತನ್ನು ಆಡಿದ್ದಾರೆ. ನಾನು ಸಹ ಯಾರಿಗೆ ಹುಟ್ಟಿದ್ದೀರಿ ಎಂದು ಕೇಳಬಹುದಿತ್ತು. ಆದರೆ ಅವರಷ್ಟು ಕೆಳಮಟ್ಟಕ್ಕೆ ನಾನು ಇಳಿಯಲು ಇಷ್ಟಪಡುವುದಿಲ್ಲ ಎಂದರು.
ನಾವು ಯಾರಿಗೆ ಹುಟ್ಟಿದ್ದೇವೆ ಎಂದು ನಮ್ಮ ತಾಯಂದಿರಿಗೆ ಗೊತ್ತಿರುತ್ತದೆ. ನೀವು ಸವಾಲಿಗೆ ಸಿದ್ದರಿದ್ದರೆ ನನ್ನ ತಾಯಿಯನ್ನು ಬಿಜೆಪಿ ಕಚೇರಿಗೆ ಕರೆದುಕೊಂಡು ಬರುತ್ತೇನೆ, ತಯಾರಿದ್ದೀರಾ? ದಿನಾಂಕ ಹೇಳಿದರೆ ನಾನು ಕರೆದುಕೊಂಡು ಬರಲು ತಯಾರಿದ್ದೇನೆ. 2 ಕೋಟಿ ಉದ್ಯೋಗ, ನರೇಗಾ ಅನ್ಯಾಯದ ಬಗ್ಗೆ ಉತ್ತರ ಕೊಡಲು ಸಿದ್ದರಿದ್ದೀರಾ? ಎಂದು ಪ್ರಶ್ನಿಸಿದರು.
ಬಿಜೆಪಿಯವರು ಸುಳ್ಳು, ಕಪಟ, ಮೋಸ ಮಾಡುವುದರ ಜೊತೆಗೆ ನಮ್ಮ ಯುವಕರ, ಮಕ್ಕಳ ಹಾದಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ನಾನು ಕಾರಟಗಿಯಲ್ಲಿ ಹೇಳಿದ ಹೇಳಿಕೆಗೆ ಬದ್ದನಾಗಿದ್ದೇನೆ. ಮಾಧ್ಯಮದವರು ನನ್ನ ಭಾಷಣದ ಪೂರ್ಣಪಾಠವನ್ನು ಹಾಕಿ, ಕೇವಲ ತುಣುಕನ್ನು ಮಾತ್ರ ಏಕೆ ಹಾಕಿದ್ದೀರಿ? ಎಂದು ಪ್ರಶ್ನಿಸಿದರು.




