ಬಾಗಲಕೋಟೆ: ಚಾಲುಕ್ಯರು ನಿರ್ಮಿಸಿದ ದೇಗುಲಗಳ ವಾಸ್ತುಶಿಲ್ಪದ ಮಹತ್ವ ಅರಿಯುವ ಉದ್ದೇಶವನ್ನು ಚಾಲುಕ್ಯ ಉತ್ಸವ ಹೊಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಬಾದಾಮಿಯ ಇಮ್ಮಡಿ ಪುಲಿಕೇಶಿ ವೇದಿಕೆಯಲ್ಲಿ ಇಂದು ಸಂಜೆ ಆಯೋಜಿಸಿದ್ದ “ಚಾಲುಕ್ಯ ಉತ್ಸವ -2026” ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಬಾದಾಮಿ, ಐಹೊಳೆ, ಪಟ್ಟದಕಲ್ಲುಗಳ ವೈಭವವನ್ನು ವೀಕ್ಷಿಸಲು ದೇಶವಿದೇಶಗಳಿಂದ ಜನರು ಬರುತ್ತಾರೆ. ಚಾಲುಕ್ಯರ ಆಡಳಿತ ವೈಖರಿಯಂತೆ ನಮ್ಮ ಸರ್ಕಾರವೂ ಸರ್ವಧರ್ಮಗಳ ಸಮನ್ವಯತೆಯನ್ನು ಪಾಲಿಸುತ್ತದೆ ಎಂದರು.
ನಾನು ಮುಖ್ಯಮಂತ್ರಿಯಾಗಿ ಈ ಎರಡು ವರ್ಷದಲ್ಲಿ ಬಾದಾಮಿ ಕ್ಷೇತ್ರಕ್ಕೆ ಸುಮಾರು 2 ಸಾವಿರ ಕೋಟಿ ರೂ.ಗಳ ಅನುದಾನವನ್ನು ನೀಡಿದ್ದೇನೆ. ಕ್ಷೇತ್ರದಲ್ಲಿ 1,400 ಕೋಟಿ ರೂ.ಗಳ ಏತನೀರಾವರಿ ಯೋಜನೆ ಕೈಗೆತ್ತಿಕೊಳ್ಳಲಾಗುವುದು. ಅಲ್ಲದೇ 400 ಕೋಟಿ ರೂ.ಗಳಲ್ಲಿ ಬಾದಾಮಿಗೆ ಕುಡಿಯುವ ನೀರಿನ ಯೋಜನೆ, 50 ಕೋಟಿ ರೂ.ಗಳಲ್ಲಿ ರಸ್ತೆ ಯೋಜನೆ ಸೇರಿದಂತೆ ಹಲವು ಅಭಿವೃದ್ದಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ ಎಂದರು.
ಐದು ವರ್ಷಗಳ ಕಾಲ ಬಾದಾಮಿ ಕ್ಷೇತ್ರದ ಶಾಸಕನಾಗಿದ್ದೆ, 2018ರಲ್ಲಿ ಎರಡು ಕ್ಷೇತ್ರಗಳಲ್ಲಿ ನಾನು ಸ್ಪರ್ಧಿಸಿದ್ದೆ, ಐದು ಬಾರಿ ಗೆದ್ದಿದ್ದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಲಾಯಿತು. ಆದರೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ನನ್ನನ್ನು ಗೆಲ್ಲಿಸಿದ್ದರು ಎನ್ನುವುದನ್ನು ಮರೆಯಲು ಸಾಧ್ಯವಿಲ್ಲ ಎಂದರು.
ಬಾದಾಮಿ ಕ್ಷೇತ್ರಕ್ಕೆ ಬಂದು ಎರಡು ಅಥವಾ ಮೂರು ಬಾರಿ ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಿ ಜನರ ಆಶೀರ್ವಾದ ಬೇಡಿರಬಹುದು. ಇಲ್ಲಿನ ಜನರು ದೊಡ್ಡ ಮನಸ್ಸು ಮಾಡಿ ವಿಧಾನಸಭೆಗೆ ಕಳುಹಿಸಿಕೊಟ್ಟಿದ್ದರಿಂದ ಈಗ ವರುಣಾ ಕ್ಷೇತ್ರದಲ್ಲಿ ಗೆದ್ದು ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು. ನಿಮ್ಮ ಉಪಕಾರವನ್ನು ನಾನೆಂದಿಗೂ ಮರೆಯುವುದಿಲ್ಲ ಎಂದರು.
ಬಾದಾಮಿ ಶಾಸಕನಾಗಿದ್ದ ಸಂದರ್ಭದಲ್ಲಿ ಚಾಲುಕ್ಯ ಉತ್ಸವ ನಡೆಯಲಿಲ್ಲ ಹಾಗೂ ಇಮ್ಮಡಿ ಪುಲಕೇಶಿ ಪ್ರತಿಮೆ ಸ್ಥಾಪನೆಯಾಗಲಿಲ್ಲ ಎನ್ನುವುದು ನೋವಿನ ಸಂಗತಿ. ಇಂದು ಭೀಮಸೇನಾ ಚಿಮ್ಮನಕಟ್ಟಿಯವರ ಒತ್ತಾಸೆಯಿಂದ ಪ್ರತಿಮೆ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.
ಈ ವರ್ಷ ಚಾಲುಕ್ಯ ಉತ್ಸವ ನಡೆಯಲೇಬೇಕೆಂದು ಈ ಭಾಗದ ಶಾಸಕರ ಒತ್ತಾಸೆಯಾಗಿತ್ತು. ಇದರ ಮೇರೆಗೆ ಬಜೆಟ್ ನಲ್ಲಿಯೇ ಚಾಲುಕ್ಯ ಉತ್ಸವವನ್ನು ಘೋಷಣೆ ಮಾಡಲಾಯಿತು. ಮೂರು ಕೋಟಿ ರೂ.ಗಳನ್ನೂ ಇದಕ್ಕಾಗಿ ಒದಗಿಸಲಾಗಿದೆ. ಉತ್ಸವಕ್ಕೆ ಒಂದು ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ನೀಡಲಾಗುವುದು. ಇಮ್ಮಡಿ ಪುಲಕೇಶಿ ಪ್ರತಿಮೆ ಅನಾವರಣಕ್ಕೆ ಸರ್ಕಾರ ನೆರವು ಒದಗಿಸಲಿದೆ ಎಂದರು.
ಕೇಂದ್ರ ಸರ್ಕಾರದಿಂದ ನೆರವು ಒದಗಿಸುವುದಾಗಿ ಸಂಸದರು ತಿಳಿಸಿದ್ದು, ಇದಕ್ಕೆ ಮನವಿ ಪತ್ರವನ್ನು ನಾಳೆಯೇ ಕೊಡಲಾಗುವುದು. ಕೇಂದ್ರ ಸರ್ಕಾರ ನಮ್ಮ ಮನವಿಗಳಿಗೆ ಸ್ಪಂದಿಸುತ್ತಿಲ್ಲ ಎನ್ನುವ ಕಾರಣದಿಂದ ಇವರಿಗೆ ಮನವಿಯನ್ನು ನೀಡಿರಲಿಲ್ಲ. ಇದೇ ವೇಳೆ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ನ್ಯಾಯಯುತ ಅನುದಾನವನ್ನು ಕೊಡಿಸಲು ಬಿಜೆಪಿ ಸಂಸದರು ಪ್ರಯತ್ನಿಸಬೇಕು ಎಂದು ಒತ್ತಾಯಿಸಿದರು.




