ಕೆಎಂಎಫ್ ಅಧ್ಯಕ್ಷನಾಗಿ ಕರ್ತವ್ಯ ನಿರ್ವಹಿಸಿದ್ದರ ಬಗ್ಗೆ ನನಗೆ ತೃಪ್ತಿ ಮತ್ತು ಹೆಮ್ಮೆಯಿದೆ
ಬೆಳಗಾವಿ: ಮೂರು ವರ್ಷ ಕೆಎಂಎಫ್ ಅಧ್ಯಕ್ಷನಾಗಿ ಕರ್ತವ್ಯ ನಿರ್ವಹಿಸಿದ್ದರ ಬಗ್ಗೆ ನನಗೆ ತೃಪ್ತಿ ಮತ್ತು ಹೆಮ್ಮೆಯಿದೆ ಎಂದು ಕೆಎಂಎಫ್ ಮಾಜಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಹೈನುಗಾರರಿಗೆ ಸಂಸ್ಥೆಯಿಂದ ಸಾಕಷ್ಟು ಪ್ರಯೋಜನಗಳನ್ನು ದೊರಕಿಸಿಕೊಟ್ಟಿದ್ದೇನೆ. ನಾನು ಅಧ್ಯಕ್ಷನಾದ ಸಂದರ್ಭದಲ್ಲಿ ವಾರ್ಷಿಕ 15 ಸಾವಿರ ಕೋಟಿ ರೂಪಾಯಿಯಿಂದ 20 ಸಾವಿರ ಕೋಟಿ ರೂಪಾಯಿವರೆಗೆ ವಹಿವಾಟು ಮಾಡಿರುವ ಸಾಧನೆ ನನಗೆ ತೃಪ್ತಿ ತಂದಿದೆ ಎಂದರು.
ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಭೀಮಾ ನಾಯಕ ಅವರನ್ನು ಕೆಎಂಎಫ್ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ನಂತರದ ಬೆಳವಣಿಗೆಯಲ್ಲಿ ಕೆಎಂಎಫ್ ಕಾರ್ಯ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡು ಕೇವಲ ಬೆಳಗಾವಿ ಜಿಲ್ಲಾ ಸಹಕಾರ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೇನೆ ಎಂದರು.
ರಾಜ್ಯದಲ್ಲಿ ಯಾವ ಸರ್ಕಾರ ಅಸ್ತಿತ್ವದಲ್ಲಿರುತ್ತದೆಯೋ ಅದರ ಪ್ರತಿನಿಧಿಗಳಿಗೆ ಅಧಿಕಾರ ನೀಡುವುದು ವಾಡಿಕೆಯಾಗಿದೆ. ಕೆಎಂಎಫ್, ಅಪೆಕ್ಸ್ ಬ್ಯಾಂಕ್ ಮತ್ತು ಮಾರ್ಕೆಟಿಂಗ್ ಫೆಡರೇಷನ್ ಗಳಲ್ಲಿ ಅಧಿಕಾರ ನಡೆಸುತ್ತಿರುವ ಸರ್ಕಾರದ ಬೆಂಬಲ ಇದ್ದೇ ಇರುತ್ತದೆ. ಹೀಗಾಗಿ ಈ ಮೂರು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಕಾಂಗ್ರೆಸ್ಸಿಗರೇ ಅಧಿಕಾರದಲ್ಲಿರುತ್ತಾರೆ. ಹೀಗಾಗಿ ಕೆಎಂಎಫ್ ಅಧ್ಯಕ್ಷ ಸ್ಥಾನದ ಸ್ಪರ್ಧೆಯಲ್ಲಿ ನಾನಿರುವುದಿಲ್ಲ ಎಂದರು. ಜಾರಕಿಹೊಳಿ ಹೇಳಿದರು.




