ಮೈಸೂರು: ಅಧಿಕಾರ ಹಸ್ತಾಂತರಕ್ಕೆ ಪಟ್ಟು ಹಿಡಿದಿರುವ ಡಿಸಿಎಂ ಡಿಕೆ ಶಿವಕುಮಾರ್ ಶಾಸಕರ ಬೆಂಬಲ ಕ್ರೋಡೀಕರಣಕ್ಕೆ ಮುಂದಾಗಿರುವ ಬೆನ್ನಲ್ಲೇ, ಸೆಡ್ಡು ಹೊಡೆದಿರುವ ಸಿಎಂ ಸಿದ್ದರಾಮಯ್ಯ 5 ವರ್ಷವೂ ನಾನೇ ಸಿಎಂ ಎಂದು ಘೋಷಿಸಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಆಗಿ ಅವಧಿ ಪೂರ್ಣಗೊಳಿಸುತ್ತೇನೆ ಮುಂದಿನ ಎರಡು ಬಜೆಟ್ ಅನ್ನು ನಾನೇ ಮಂಡಿಸುತ್ತೇನೆ ಎಂದು ಖಡಕ್ ಆಗಿ ಹೇಳಿದರು.
ನಾಯಕತ್ವ ಬದಲಾವಣೆ ಮಂತ್ರಿ ಮಂಡಲ ವಿಸ್ತರಣೆ ಸೇರಿದಂತೆ ಯಾವುದೇ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರಬೇಕು ಅದೇ ರೀತಿ ಶಾಸಕರು, ಸಚಿವರು, ಡಿಸಿಎಂ ಎಲ್ಲರೂ ಬದ್ಧರಾಗಿರಲೇಬೇಕು ಎಂದರು.
ಕಾಂಗ್ರೆಸ್ ಕೆಲ ಶಾಸಕರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಆದರೆ ಕೃಷಿ ಸಚಿವ ಚೆಲುವರಾಯ ಸ್ವಾಮಿ ದೆಹಲಿಯಲ್ಲಿದ್ದಾರೆ. ಅವರ ಜೊತೆ ಮಾತನಾಡಿದ್ದೇನೆ. ಅವರು ಮೆಕ್ಕೆಜೋಳ ವಿಚಾರವಾಗಿ ಕೇಂದ್ರ ಕೃಷಿ ಮಂತ್ರಿಗಳನ್ನು ಭೇಟಿ ಮಾಡಲು ಹೋಗಿರುವುದಾಗಿ ಹೇಳಿದ್ದಾರೆ. ಇದಾದ ಬಳಿಕ ಅವರ ಜೊತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮೆಕ್ಕೆ ಜೋಳ ಬೆಂಬಲ ಬೆಲೆ ಕುರಿತು ಸಭೆ ನಡೆಸಿದ್ದೇನೆ ಎಂದರು.
ಶಾಸಕರು ದೆಹಲಿಗೆ ಹೋಗಲೇ ಬಾರದು ಎಂದಿದೆಯೇ ಯಾರಿಗೆ ಬೇಕಾಗಿದೆಯೋ ಅವರು ಹೋಗುತ್ತಾರೆ. ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನ ರಚನೆ ಕುರಿತು ಹೈಕಮಾಂಡ್ ನಾಯಕರೇ ತೀರ್ಮಾನ ಮಾಡಬೇಕು. ಆದರೆ ಈವರೆಗೂ ಯಾವ ನಾಯಕರು ಈ ಬಗ್ಗೆ ಹೇಳಿಕೆ ನೀಡಿಲ್ಲ ಎಂದರು.
ಈ ಹಿಂದೆಯೂ ಹಲವರು ಇಂತಹ ಮಾತುಗಳನ್ನಾಡಿದರು, ಪ್ರಯತ್ನಗಳು ನಡೆದಿದ್ದವು. ಈಗಲೂ ನಡೆದಿವೆ. ಹೈಕಮಾಂಡ್ ಹೇಳಿದಂತೆ ನಾನು ಕೇಳಬೇಕು, ಡಿಕೆ ಶಿವಕುಮಾರ್ ಕೂಡ ಕೇಳಬೇಕು. ಹೈಕಮಾಂಡ್ ನವರು ಯಾವಾಗ ಹೇಳುತ್ತಾರೆ ಎಂದು ಗೊತ್ತಿಲ್ಲ. ಹೇಳಿದಾಗ ನಾನು ಕೇಳುತ್ತೇನೆ ಎಂದರು.
ತಾವು ಕೊಟ್ಟ ಮಾತನ್ನು ತಪ್ಪುವುದಿಲ್ಲ. ಚುನಾವಣೆಯಲ್ಲಿ ಹೇಳಿದಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದೇನೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಾಳೆ ಬೆಂಗಳೂರಿಗೆ ಬರುತ್ತಿದ್ದಾರೆ. ನಾನು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ ಎಂದರು.




