ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ (2019ರಿಂದ 2023) ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ ಒಂದೇ ಒಂದು ಮನೆ ನಿರ್ಮಿಸಿ ಕೊಟ್ಟಿರುವುದನ್ನು ಸಾಬೀತುಪಡಿಸಿದರೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಜಮೀರ್ ಅಹ್ಮದ್ ಖಾನ್ ಸವಾಲು ಹಾಕಿದರು.
- ಎಲ್ಇಡಿ ಬೀದಿ ದೀಪ ಯೋಜನೆ ಅನುಷ್ಠಾನಗೊಂಡರೆ ಶೇ.61.01 ರಷ್ಟು ವಿದ್ಯುತ್ ಉಳಿತಾಯ: ಕೃಷ್ಣ ಬೈರೇಗೌಡ
- ಋಗ್ವೇದದ ಮಹತ್ವ ಮತ್ತು ಅಪೌರುಷೇಯ ತತ್ವದ ವಿಶ್ಲೇಷಣೆ
- ಸುರೇಶ್ ಕುಮಾರ್ ರಿಂದ ಕಾಂಗ್ರೆಸ್ ವಿರುದ್ದ ‘ಸಂವಿಧಾನಿಕ’ ಪೊಳ್ಳು ವಾದ !
- ಬುದ್ಧಿಜೀವಿ ನಟ ಎಂದು ಕರೆಯಲ್ಪಡುವ ಅನಂತನಾಗ್ ಅವರೊಂದಿಗಿನ ಒಂದು ಪ್ರಸಂಗ
- ಆರ್ಎಸ್ಎಸ್ ಮುಖ್ಯಸ್ಥರ ಪ್ರಕಾರ ಹಿಂದೂಗಳ ವಿಧಗಳು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಯಾವ ಜಿಲ್ಲೆಗಳಲ್ಲಿ ಎಷ್ಟು ಮನೆಗಳನ್ನು ನಿರ್ಮಿಸಿದೆ ಎಂಬುದನ್ನು ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಹೋಗಿ ಪರಿಶೀಲಿಸಲಿ ಎಂದರು.
ನಮಗೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವ ಒತ್ತಡವಿದೆ. ಆದರೆ, ಬಿಜೆಪಿ ಸರ್ಕಾರ ಇದ್ದಾಗ ಯಾವುದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರಲಿಲ್ಲ. ಆದರೂ ಮನೆಗಳನ್ನು ನಿರ್ಮಿಸಲು ಅವರಿಗೆ ಏಕೆ ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದರು.
ಬಳ್ಳಾರಿಯಲ್ಲಿ ಸಣ್ಣ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆಯಿತು. ಜನಾರ್ದನ ರೆಡ್ಡಿ ಅವರು ದೊಡ್ಡ ಮನಸ್ಸು ಮಾಡಿ ಬ್ಯಾನರ್ ಕಟ್ಟಲು ಅವಕಾಶ ಮಾಡಿಕೊಟ್ಟಿದ್ದರೆ ಗಲಾಟೆ ಆಗುತ್ತಿರಲಿಲ್ಲ. ಬಳ್ಳಾರಿಯಲ್ಲಿ ವಾಲ್ಮೀಕಿ ಪ್ರತಿಮೆ ನಿರ್ಮಿಸಬೇಕು ಎಂಬುದು ಬಹು ದಿನಗಳ ಬೇಡಿಕೆಯಾಗಿತ್ತು. ಅದನ್ನು ಬಿಜೆಪಿಯವರಿಗೆ ಮಾಡಲು ಸಾಧ್ಯವಾಗಿರಲಿಲ್ಲ. ಶಾಸಕ ಭರತ್ ರೆಡ್ಡಿ ಅವರು ಪ್ರತಿಮೆ ನಿರ್ಮಿಸಿದರು. ಅದನ್ನು ಅವರಿಗೆ ಸಹಿಲು ಸಾಧ್ಯವಾಗಲಿಲ್ಲ ಎಂದರು.
ಬಳ್ಳಾರಿಯಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ವಿರುದ್ಧ ನಾವು ಪಾದಯಾತ್ರೆ ಮಾಡಿದ್ದೆವು. ಈಗ ಬಿಜೆಪಿಯವರು ಯಾವ ಉದ್ದೇಶಕ್ಕೆ ಪಾದಯಾತ್ರೆ ಮಾಡುತ್ತಾರೆ ಎಂದು ಪ್ರಶ್ನಿಸಿದರು.




