ಬೆಂಗಳೂರು: ಡಿಸಿಎಂ ಅವರು ಏನುಪ್ರಶ್ನೆ ಗಳನ್ನು ಹಾಕಿದಾರೋ ಅದಕ್ಕೆ ಉತ್ತರ ಕೊಡಲು ಇಲ್ಲಿದ್ದೇನೆ. ನನ್ನ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಡಿಸಿಎಂ ಏಕವಚನದಲ್ಲಿ ಮಾತಾಡಿದ್ದಾರೆ. ನಾವೂ ಹಳ್ಳಿಯ ಮಕ್ಕಳೇ, ನಿಮಗಿಂತಲೂ ಏಕವಚನದಲ್ಲಿ ಮಾತಾಡಲು ನಮಗೂ ಗೊತ್ತು. ಆದರೆ ಆ ಕೆಳಮಟ್ಟಕ್ಕೆ ನಾವು ಇಳಿಯಲ್ಲ ಎಂದು ಕೇಂದ್ರ ಉಕ್ಕು ಖಾತೆ ಸಚಿವ ಕುಮಾರಸ್ವಾಮಿ ಹೇಳಿದರು.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಬಿಜೆಪಿ – ಜೆಡಿಎಸ್ ಜಂಟಿ ಪಾದಯಾತ್ರೆ ಉದ್ದೇಶಿಸಿ ಮಾತನಾಡಿದ ಅವರು, ನಾನು ಸಿನಿಮಾ ವಿತರಕ ಆಗಿದ್ದಾಗ ಭೂಮಿ ಖರೀದಿಸಿದೆ. ಯಾರಿಗೂ ಮೋಸ ಮಾಡಲಿಲ್ಲ. ನಾನು ವಂಚನೆ ಮಾಡಿ ಭೂಮಿ ಖರೀದಿಸಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದರು.
ಚುನಾವಣೆಗೆ ನಿಲ್ಲುವ 15 ವರ್ಷಗಳ ಮುಂಚೆಯೇ ನಾನು ಚಲನಚಿತ್ರ ಪ್ರದರ್ಶಕನಾಗಿದ್ದಾಗ ಕೇತಗಾನಹಳ್ಳಿಯಲ್ಲಿ 45 ಎಕರೆ ಜಮೀನು ತೆಗೆದುಕೊಂಡಿದ್ದೇನೆ. ಇದನ್ನು ನಾನು ಎಲ್ಲೂ ಮುಚ್ಚಿಟ್ಟಿಲ್ಲ. ಆದರೆ, ದಲಿತರಿಗೆ ಸೇರಬೇಕಾದ 68 ಎಕರೆ ಜಮೀನು ಡಿಸಿಎಂ ಲಪಟಾಯಿಸಿದ್ದಾರೆ ಎಂದರು.
ಅದೇನೋ ಬಿಚ್ಚಿಡುತ್ತೇನೆ ಅಂದ್ಯಲ್ಲಪ್ಪ, ಬಿಚ್ಚು ನೋಡೋಣ. ನಾನಿರೋದು ಬೀದಿಯಲ್ಲಿ, ನೀನಿರೋದು ಗಾಜಿನ ಮನೆಯಲ್ಲಿ ನಾನು ಬಿಚ್ಚೋಕ್ಕೆ ಹೋದರೆ ನಿಮ್ಮದು ಪುಟ ಗಟ್ಟಲೆ ಇದೆ.ಅಜ್ಜಯ್ಯನ ಬಗ್ಗೆ ಶಿವಕುಮಾರ್ ಗೆ ಭಕ್ತಿ, ಗೌರವವಿದ್ದರೆ ಪ್ರಾಮಾಣಿಕವಾಗಿ ಬೆಳೆದು ಬಂದರಾ ಎಂದು ಪ್ರಮಾಣ ಮಾಡಲಿ. ನಾನೂ ಪ್ರಮಾಣ ಮಾಡುತ್ತೇನೆ ಎಂದರು.
ಈ ಪಾದಯಾತ್ರೆಯನ್ನು ಅಸೂಯೆಯಿಂದ ಹಮಿಕೊಂಡಿದ್ದಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ಅಂಗಡಿ ಬಾಗಿಲು ತೆರೆದು ಕೂತಿದೆ. ಗ್ಯಾರಂಟಿಗಳಿಂದ ಬದಲಾವಣೆಗಳನ್ನು ತಂದಿದ್ದೇವೆ ಅಂದುಕೊಂಡಿದ್ದಾರೆ. ಗ್ಯಾರಂಟಿಗಳಿಂದ ರಾಜ್ಯವನ್ನು ದರಿದ್ರದತ್ತ ತಗೊಂಡು ಹೋಗಿದ್ದಾರೆ. ಮಂತ್ರಿಗಳಲ್ಲಿ ಭ್ರಷ್ಟಾಚಾರ ನಡೆಸಲು ಪೈಪೋಟಿ ನಡೆಯುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸುವ ಕಾಂಗ್ರೆಸಿಗರಿಗೆ ಒಂದೇ ಒಂದು ದಾಖಲೆ ಕೊಡಲು ಆಗಿಲ್ಲ ಎಂದರು.



