ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಸಾಧನೆಯ ಬ್ರಹ್ಮಾಸ್ತ್ರ ನಮ್ಮಲ್ಲಿದೆ. ಆ ಮೂಲಕ ಬಿಜೆಪಿ–ಜೆಡಿಎಸ್ ದಾಖಲೆಯ ಗೆಲುವು ಸಾಧಿಸಲು ಶ್ರಮಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಕರೆನೀಡಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಬಿಜೆಪಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಸಕಾರಾತ್ಮಕ ಅಂಶಗಳನ್ನು ಜನರ ಮುಂದಿಡಿ. ಬಡವರು, ರೈತರು, ಮಹಿಳೆಯರು, ಯುವ ಜನತೆ ಎಂಬ 4 ವರ್ಗಗಳ ಜನರನ್ನು ನಾವು ತಲುಪಿ ಮೋದಿಯವರ ಸಾಧನೆಗಳನ್ನು ತಲುಪಿಸಬೇಕಿದೆ ಎಂದರು.
ಕರ್ನಾಟಕ ರಾಜ್ಯ ಬಿಜೆಪಿಗೆ ದಕ್ಷಿಣ ಭಾರತದ ಹೆಬ್ಬಾಗಿಲು ಎಂಬುದನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ರುಜುವಾತು ಮಾಡಬೇಕಿದೆ. ಇದಕ್ಕಾಗಿ ನಮ್ಮೆಲ್ಲರ ಶ್ರಮ ಅತ್ಯಗತ್ಯ ಎಂದರು.
ಮುಂದಿನ ಲೋಕಸಭಾ ಚುನಾವಣೆ ಈ ದೇಶದ ಭವಿಷ್ಯವನ್ನು ರೂಪಿಸಲಿದೆ. ಬಿಜೆಪಿ- ಜೆಡಿಎಸ್ ಎರಡೂ ಪಕ್ಷಗಳು ಒಗ್ಗಟ್ಟಾಗಿ ಶ್ರಮ ಹಾಕಿ ರಾಜ್ಯದ 28ಕ್ಕೆ 28 ಕ್ಷೇತ್ರಗಳಲ್ಲೂ ಗೆಲ್ಲಲು ಸಾಧ್ಯವಿದೆ. ಈ ಮೂಲಕ ನರೇಂದ್ರ ಮೋದಿಯವರ ಕೈಗಳನ್ನು ಬಲಪಡಿಸುವ ಚುನಾವಣೆ ಇದು ಎಂದರು.




