ನಾಗೇಂದ್ರ ತಪ್ಪಿಲ್ಲ ಎಂದು ತೀರ್ಮಾನವಾದರೆ ಸಂಪುಟಕ್ಕೆ ಮರುಸೇರ್ಪಡೆ ಮಾಡಿಕೊಳ್ಳಬಹುದು: ಡಾ.ಜಿ.ಪರಮೇಶ್ವರ್
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರ ತಪ್ಪಿಲ್ಲ ಎಂಬುದು ತೀರ್ಮಾನವಾದರೆ ಸಂಪುಟಕ್ಕೆ ಮರುಸೇರ್ಪಡೆ ಮಾಡಿಕೊಳ್ಳಬಹುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕೆ ಜೆ ಜಾರ್ಜ್ ಅವರ ಮೇಲೆ ಆರೋಪ ಬಂದಾಗ ತಪ್ಪಿಲ್ಲ ಎಂದು ಸಾಬೀತಾದ ಬಳಿಕ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಲಾಗಿತ್ತು. ವಾಲ್ಮೀಕಿ ನಿಗಮ ಹಗರಣದ ಪ್ರಕರಣದ ತನಿಖೆ ಮುಗಿದು, ನಾಗೇಂದ್ರ ಪಾತ್ರ ಏನೂ ಇಲ್ಲ ಎಂದು ತೀರ್ಮಾನ ಬಂದಾಗ ವಾಪಸ್ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದರು.
ಇನ್ನು, ಸಚಿವ ಸಂಪುಟ ಪುನರ್ ರಚನೆ ವಿಚಾರ ನನಗೆ ಗೊತ್ತಿಲ್ಲ. ಇದಕ್ಕೆ ಮುಖ್ಯಮಂತ್ರಿಯವರು ಉತ್ತರ ನೀಡಬೇಕು. ಇದು ನಮ್ಮ ಹಂತದಲ್ಲಿ ಚರ್ಚೆ ಆಗುವುದಿಲ್ಲ. ಮುಖ್ಯಮಂತ್ರಿ ಮತ್ತು ಹೈಕಮಾಂಡ್‌ಗೆ ಬಿಟ್ಟಿರುವ ವಿಚಾರ ಎಂದರು.
ಜೊತೆಗೆ, ಮುಸ್ಲಿಂ ಸಮುದಾಯದ ಕೆಲ ಶಾಸಕರು ಮತ್ತು ಮುಖಂಡರು ಕಾಮಗಾರಿಗಳಲ್ಲಿ ಶೇ. 4ರಷ್ಟು ಮೀಸಲಾತಿ ನೀಡುವಂತೆ ಮನವಿ ಮಾಡಿದ್ದಾರೆ. ಮನವಿ ಪರಿಶೀಲಿಸುವಂತೆ ಸಿಎಂ ಸಂಬಂಧಪಟ್ಟ ಇಲಾಖೆಗೆ ತಿಳಿಸಿದ್ದಾರೆ. ಇಲಾಖೆ ಪರಿಶೀಲಿಸಿದ ಬಳಿಕ ಪ್ರಸ್ತಾವನೆ ಸಚಿವ ಸಂಪುಟದ ಮುಂದೆ ತರಬೇಕು. ಕ್ಯಾಬಿನೆಟ್‌ನಲ್ಲಿ ತೀರ್ಮಾನ ಆದ ಬಳಿಕ ಸರ್ಕಾರಿ ಆದೇಶ ಆಗಬೇಕಾಗುತ್ತದೆ. ಈವರೆಗೂ ಕ್ಯಾಬಿನೆಟ್ ಮುಂದೆ ಪ್ರಸ್ತಾವನೆ ಬಂದಿಲ್ಲ. ಇದನ್ನು ತಪ್ಪು ಗ್ರಹಿಕೆ ಮಾಡಲಾಗಿದೆ ಎಂದರು.
ಯಾವುದೇ ಸಮುದಾಯವನ್ನು ತುಷ್ಟೀಕರಣ ಮಾಡುವಂತಹ ಅಗತ್ಯವಿಲ್ಲ. ಯಾವುದೇ ಸಮುದಾಯ, ಧರ್ಮದ ಬಡವರ ಅಭಿವೃದ್ಧಿಗೆ ಒತ್ತು ನೀಡುವುದು ಸರ್ಕಾರದ ಕರ್ತವ್ಯ. ಒಂದಷ್ಟು ಸವಲತ್ತು ಕಲ್ಪಿಸಿದರೆ ಅದನ್ನು ತುಷ್ಟೀಕರಣ ಎನ್ನುವುದು ಸರಿಯಲ್ಲ ಎಂದರು.
ವಿಧಾನಸಭೆ ಉಪ ಚುನಾವಣೆ ಮುಗಿದ ಬಳಿಕ ಒಳಮೀಸಲಾತಿಗೆ ಆಯೋಗ ರಚಿಸಲಾಗುತ್ತದೆ ಎಂದು ಈಗಾಗಲೇ ಮುಖ್ಯಮಂತ್ರಿಯವರು ಸ್ಪಷ್ಟನೆ ನೀಡಿದ್ದಾರೆ. ಇಷ್ಟು ವರ್ಷಗಳಿಂದ ಹೋರಾಟ ಮಾಡಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಸರಿಯಾಗಿ ಮಾಡಬೇಕಾಗುತ್ತದೆ. ಇಲ್ಲವಾದರೆ ಯಾರಾದರು ಕೋರ್ಟ್‌ಗೆ ಹೋಗುತ್ತಾರೆ. ಈ ಸಂದರ್ಭದಲ್ಲಿ ಆಯೋಗ ರಚಿಸಿದರೆ ಚುನಾವಣಾ ಆಯೋಗ ಪ್ರಶ್ನಿಸುತ್ತದೆ. ಇದೇ ಕಾರಣಕ್ಕೆ ಆಯೋಗ ರಚಿಸಿಲ್ಲ. ಚುನಾವಣೆ ಮುಗಿದ ಬಳಿಕ ಆರಂಭಿಸಲಾಗುತ್ತದೆ ಎಂದರು.
ಕೋವಿಡ್ ಹಗರಣದ ನ್ಯಾ. ಮೈಕಲ್ ಡಿ.ಕುನ್ನಾ ವರದಿಯನ್ನು ಉಪ ಸಮಿತಿ ಸಂಪೂರ್ಣವಾಗಿ ಪರಿಶೀಲನೆ ಮಾಡಬೇಕು. ಬೆಡ್ ಖರೀದಿ, ಉಪಕರಣ, ಮೆಡಿಸಿನ್ ಮತ್ತು ಟೆಸ್ಟ್ ಕಿಟ್ ಖರೀದಿ ಹೀಗೆ ಬೇರೆಬೇರೆ ವಿಚಾರಗಳಿವೆ. ಎಲ್ಲವನ್ನು ಉಪ ಸಮಿತಿಯಲ್ಲಿ ಪರಿಶೀಲಿಸಿ, ತೀರ್ಮಾನಕ್ಕೆ ಬರುತ್ತೇವೆ. ಈವರೆಗೆ ಉಪಸಮಿತಿ ಸಭೆ ನಡೆಸಿಲ್ಲ. ಇದಕ್ಕೆ ಡಿಸಿಎಂ ಅವರು ಅಧ್ಯಕ್ಷರಿದ್ದಾರೆ ಎಂದರು.
ನ್ಯಾಯಮೂರ್ತಿ ಮೈಕಲ್ ಡಿ.ಕುನ್ನಾ ಅವರು ಹೇಳಿರುವುದು ಸರಿ ಇದೆ. ಪುರಾವೆಗಳಿವೆ ಎಂಬುದಾದರೆ ಸಚಿವ ಸಂಪುಟದ ಮುಂದೆ ತೆಗೆದುಕೊಂಡು ಹೋಗುತ್ತೇವೆ. ಅಲ್ಲಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.




