ಬೆಂಗಳೂರು: ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕದ ಪರವಾಗಿ ತೀರ್ಪು ಬಂದಿದೆ. ಈಗಾಗಲೇ ಟೆಂಡರ್ ಕರೆದು ಯೋಜನೆಯ ಗುತ್ತಿಗೆ ನೀಡಲಾಗಿದೆ. ಈ ಹಂತದಲ್ಲಿ ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಹೇಳಿರುವುದು ಸರಿಯಲ್ಲ ಎಂದು ಶಾಸಕ ಕೋನರೆಡ್ಡಿ ಹೇಳಿದರು.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾದಿಂದ ಕೇವಲ ಇಬ್ಬರು ಸಂಸದರಿದ್ದಾರೆ. ಕರ್ನಾಟಕ 28 ಸದಸ್ಯರನ್ನು ಹೊಂದಿದೆ. ಲೋಕಸಭೆಯಲ್ಲಿ ಈ ಬಗ್ಗೆ ಬಲವಾದ ಪ್ರತಿಪಾದನೆ ಮಾಡಬೇಕು ಎಂದರು.
ಕರ್ನಾಟಕದಿಂದ ಹಾಲು, ಹಣ್ಣು, ತರಕಾರಿ ನಿಲ್ಲಿಸಿದರೆ ಗೋವಾಕ್ಕೆ ತೊಂದರೆಯಾಗಲಿದೆ. ಮಹದಾಯಿ ಯೋಜನೆಯ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವಂತೆ ಮುಖ್ಯಮಂತ್ರಿಯವರಿಗೆ ತಾವು ಪತ್ರ ಬರೆಯುವುದಾಗಿ ಹೇಳಿದರು.




