ಬೆಂಗಳೂರು: ರಾಜ್ಯದ ನೂರಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಬದಲಾವಣೆ ಬಯಸುತ್ತಿದ್ದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಮತ್ತೊಮ್ಮೆ ಪುನರುಚ್ಚರಿಸಿರುವ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತಮ್ಮ ಈ ಹೇಳಿಕೆಗಾಗಿ ಕೆಪಿಸಿಸಿ ನೋಟಿಸ್ ನೀಡಿದರು ಅದಕ್ಕೆ ಉತ್ತರಿಸುತ್ತೇನೆ ಎಂದು ಹೇಳಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಾಯಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಅವಧಿಯಲ್ಲೇ ಎರಡೂವರೆ ವರ್ಷ ಮುಖ್ಯಮಂತ್ರಿಯಾಗಬೇಕು. ಅದಕ್ಕೆ ಪಕ್ಷದಲ್ಲಿರುವ ಶಾಸಕರ ಬೆಂಬಲವೂ ಇದೆ. ಈ ಕುರಿತು, ಹೈಕಮಾಂಡ್ ತೀರ್ಮಾನ ಕೈಗೊಳ್ಳಬೇಕಷ್ಟೆ ಎಂದರು.
ಶಿವಕುಮಾರ್ ಅವರು ತಮ್ಮ ಅಧ್ಯಕ್ಷತೆಯಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ್ದಾರೆ. ಪೂರ್ಣ ಬಹುಮತದೊಂದಿಗೆ ಪಕ್ಷವನ್ನು ಅಧಿಕಾರಕ್ಕೆ ಬರಲು ಕಾರಣಕರ್ತರಾಗಿದ್ದಾರೆ. ಮೇಕೆದಾಟು, ಭಾರತ್ ಜೋಡೊ ಪಾದಯಾತ್ರೆ ಸೇರಿದಂತೆ ಪಕ್ಷದ ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಅವರನ್ನು ಸಿಎಂ ಮಾಡುವುದರಿಂದ ಉತ್ತಮ ಸಂಘಟನೆಕಾರ ಮತ್ತು ಹೋರಾಟಗಾರನಿಗೆ ಗೌರವ ಕೊಟ್ಟಂತಾಗುತ್ತದೆ ಎಂದರು.
ಮುಖ್ಯಮಂತ್ರಿ ಬದಲಾವಣೆಯಾಗುವುದು ಕ್ರಾಂತಿಯಲ್ಲ. ಬದಲಿಗೆ, ಅದೊಂದು ಬದಲಾವಣೆಯಷ್ಟೆ. ಸಚಿವ ರಾಜಣ್ಣ ಅವರು ಹೇಳುವಂತೆ ಇಲ್ಲಿ ಯಾವುದೇ ಕ್ರಾಂತಿಯಾಗುವುದಿಲ್ಲ. ಕೇವಲ ಮುಖ್ಯಮಂತ್ರಿ ಬದಲಾಗುತ್ತಾರೆ. ಇಲ್ಲಿ ಕ್ರಾಂತಿಯಾಗುವಂತಹದ್ದು ಏನೂ ಇಲ್ಲ ಎಂದರು.




