ದಾವಣಗೆರೆ: ನಿಷ್ಠೆ, ಬದ್ಧತೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸಿದಲ್ಲಿ ಮಾತ್ರ ಸಂಘದ ಅಭಿವೃದ್ದಿಯಾಗಲಿದೆ ಎಂದು ಶಿ.ದಾ.ಚಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ನಿರ್ದೇಶಕ ಮತ್ತು ಸಹಕಾರ ರತ್ನ ಪುರಸ್ಕೃತ ಬಿ.ಜಿ ಬಸವರಾಜಪ್ಪ ಹೇಳಿದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು, ಸಹಕಾರ ಇಲಾಖೆ, ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ ಹಾಗೂ ಶಿ.ದಾ.ಚಿ ಜಿಲ್ಲಾಸಹಕಾರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿ. ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಗೊಲ್ಲರಹಳ್ಳಿಯ ಹಾಲು ಶೀಥಲೀಕರಣ ಘಟಕದಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ವಿಶೇಷ ಕಾರ್ಯದಕ್ಷತೆ ತರಬೇತಿ ಶಿಬಿರದ ಕಾರ್ಯಗಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಭಿವೃದ್ದಿಗಾಗಿ ಉತ್ಪಾದಕತೆ ಹೆಚ್ಚಿಸಲು ತರಬೇತಿ ಎಲ್ಲರಿಗೂ ಅತ್ಯವಶ್ಯಕವಾಗಿರುತ್ತದೆ. ಸಂಘದ ಕಾರ್ಯದರ್ಶಿಗಳು ಎಷ್ಟೇ ಪರಿಣಿತರಿದ್ದರೂ ತರಬೇತಿ ಅತ್ಯವಶ್ಯಕ. ಕಾಲಕಾಲಕ್ಕೆ ಬದಲಾದ ಕಾಯ್ದೆ ಕಾನೂನಿನ ತಿದ್ದುಪಡಿಗಳ ಕುರಿತು ತರಬೇತಿ ಪಡೆಯುವುದರಿಂದ ಕಾರ್ಯದರ್ಶಿಗಳು ಸಂಘದಲ್ಲಿ ಲೆಕ್ಕಪತ್ರ ನಿರ್ವಹಣೆಗೆ ಅನುಕೂಲವಾಗಿ, ಸಂಘ ಲಾಭದತ್ತ ಸಾಗಲು ಸಾಧ್ಯ ಎಂದರು.
ಹಾಲು ಶೇಖರಣೆ ಎಷ್ಟೇ ಪ್ರಮಾಣದಲ್ಲಿದ್ದರೂ ಅದರ ಗುಣಮಟ್ಟ ಕಳೆದುಕೊಳ್ಳದ ಹಾಗೆ ಹಾಲು ಶೇಖರಿಸಬೇಕು. ಸಹಕಾರ ಸಂಘಗಳಲ್ಲಿ ಕಾರ್ಯದರ್ಶಿ ಹಾಗೂ ಆಡಳಿತ ಮಂಡಳಿಯವರ ಕೊಡುಗೆ ಕಡೆಗಣಿಸುವಂತಿಲ್ಲ. ಪ್ರತಿಯೊಬ್ಬರೂ ಅವರದೇ ಆದ ಸೇವೆಯನ್ನು ನೀಡಿ ಸಂಘಗಳನ್ನು ಬೆಳೆಸಬಲ್ಲವರಾಗಿರುತ್ತಾರೆ. ಆದ್ದರಿಂದ ಕರ್ತವ್ಯಕ್ಕೆ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಕರೆನೀಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಿ.ದಾ.ಚಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ ಶೇಖರ್ ಮಾತನಾಡಿ, ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟದ ವತಿಯಿಂದ ಕಾರ್ಯದರ್ಶಿಗಳಿಗೆ ತರಬೇತಿ ನೀಡುತ್ತಿರುವುದು ತುಂಬಾ ಶ್ಲಾಘನೀಯ. ದೇಶದಲ್ಲಿ ಹಾಲು ಉತ್ಪಾದನೆಯಲ್ಲಿ ಗುಜರಾತ್ನ ಅಮುಲ್ ಸಂಸ್ಥೆಯು ಮೊದಲನೇ ಸ್ಥಾನ ಹೊಂದಿದ್ದು, ಕರ್ನಾಟಕ ರಾಜ್ಯದ ಕೆ.ಎಂ.ಎಫ್ 2ನೇ ಸ್ಥಾನ ಪಡೆದಿದೆ ಎಂದರು.
ತರಬೇತಿ ಪಡೆದುಕೊಳ್ಳುವುದಷ್ಟೇ ಸಾಲದು, ತರಬೇತಿಯ ನಂತರ ಅವುಗಳನ್ನು ತಮ್ಮ ದಿನನಿತ್ಯದ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡರೆ ಮಾತ್ರ ಸಹಕಾರ ಸಂಘಗಳ ಅಭಿವೃದ್ದಿ ಆಗಲಿದೆ ಎಂದರು.
ಶಿ.ದಾ.ಚಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಹಕಾರ ರತ್ನ ಪುರಸ್ಕೃತ ಜಗದೀಶಪ್ಪ ಬಣಕಾರ್ ಮಾತನಾಡಿ, ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಕುಟುಂಬದ ಮುಖ್ಯಸ್ಥರಿದ್ದಂತೆ, ಸಹಕಾರ ಸಂಘಗಳ ಕಾನೂನು, ನಿಯಮಾವಳಿಗಳ ಬಗ್ಗೆ ಎಷ್ಟು ತಿಳಿದುಕೊಂಡರೂ ಕಡಿಮೆಯೇ. ಆದ್ದರಿಂದ ಸಹಕಾರ ಒಕ್ಕೂಟ ಹಮ್ಮಿಕೊಳ್ಳುವ ಎಲ್ಲಾ ಕಾರ್ಯಕ್ರಮಗಳಲ್ಲೂ ಸಂಘಗಳ ಕಾರ್ಯದರ್ಶಿಗಳು ತಪ್ಪದೇ ಹಾಜರಾಗಬೇಕು ಎಂದರು.
ಕಾರ್ಯಗಾರದಲ್ಲಿ ಶಿ.ದಾ.ಚಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಸಿರಿಗೆರೆ ರಾಜಣ್ಣ, ಉಪಾಧ್ಯಕ್ಷ ಚೇತನ್ ಎಸ್ ನಾಡಿಗರ್, ವ್ಯವಸ್ಥಾಪಕ ನಿರ್ದೇಶಕ ಹೆಚ್.ಕೆ ಬಸಪ್ಪ, ಒಕ್ಕೂಟದ ಸಿಬ್ಬಂದಿ ಮತ್ತಿತ್ತರರು ಉಪಸ್ಥಿತರಿದ್ದರು.




