ಬೆಂಗಳೂರು: ಕನ್ನಡೇತರರು ಕನ್ನಡವನ್ನು ಕಲಿಯುವ ವಾತಾವರಣವನ್ನು ನಾವು ನಿರ್ಮಿಸಿದಾಗ ಮಾತ್ರ, ನಮ್ಮ ಭಾಷೆ ಎತ್ತರಕ್ಕೆ ಬೆಳೆಯಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕರ್ನಾಟಕ ರಾಜ್ಯೋತ್ಸವ ಸಮಿತಿ ಮೈಸೂರು ಬ್ಯಾಂಕ್ ಸರ್ಕಲ್ ಸಮೀಪದ ನೃಪತುಂಗ ಮಂಟಪದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, 1956ರ ನವೆಂಬರ್ 1 ರಂದು ರಾಜ್ಯಗಳು ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು. ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರ ಅವಧಿಯಲ್ಲಿ 1973ರ ನವೆಂಬರ್ 1 ರಂದು ಮೈಸೂರು ರಾಜ್ಯವು ಇಡೀ ರಾಜ್ಯವನ್ನು ಪ್ರತಿನಿಧಿಸುವ ಹೆಸರಾದ ಕರ್ನಾಟಕವೆಂದು ಮರುನಾಮಕರಣಗೊಂಡಿತು. 2023ರ ನವೆಂಬರ್ 1ರ ಸುವರ್ಣ ಸಂಭ್ರಮವನ್ನು ವರ್ಷಪೂರ್ತಿ ಆಚರಿಸಬೇಕೆಂದು ನಿರ್ಧರಿಸಲಾಯಿತು ಎಂದು ಹೇಳಿದರು.
ಕನ್ನಡ ನಾಡು, ನುಡಿ, ನೆಲ, ಜಲದ ಮಹತ್ವ ಪ್ರಚುರಪಡಿಸಲು ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷವಾಕ್ಯದಡಿ ಇಡೀ ವರ್ಷ ಕನ್ನಡವನ್ನು ಸಂಭ್ರಮಿಸಲಾಯಿತು. ಕನ್ನಡ ನಾಡಿನ ಏಕೀಕರಣಕ್ಕೆ, ಏಳಿಗೆಗೆ ಶ್ರಮಿಸಿದ 100 ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತಿದೆ ಎಂದರು.
ನಾನು ಅಧಿಕಾರದಲ್ಲಿರುವಾಗ ಕನ್ನಡಕ್ಕೆ ಚ್ಯುತಿಯಾಗಲು ಬಿಡುವುದಿಲ್ಲ. 1983ರ ಕನ್ನಡ ಕಾವಲು ಸಮಿತಿಯ ಅಧ್ಯಕ್ಷನಾಗಿದ್ದೆ. ಕನ್ನಡವನ್ನು ಕಾಯಲು ಸಮಿತಿ ಬೇಕೆನ್ನುವ ಪರಿಸ್ಥಿತಿ ಕರ್ನಾಟಕದಲ್ಲಿ ಉಂಟಾಗಿದೆ. ಇಂದಿಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಎಂದು ಈ ಸಮಿತಿ ಕಾರ್ಯನಿರ್ವಹಿಸುತ್ತಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಸುವ ವಿಷಯದಲ್ಲಿ ಉದಾರತೆ ಇರಬೇಕು ಆದರೆ ನಮ್ಮ ಭಾಷೆ – ಸಂಸ್ಕೃತಿಯ ಬಗ್ಗೆ ಅಭಿಮಾನವಿರಬೇಕು. ಬೇರೆ ಭಾಷೆ ಕಲಿತರೂ, ಕನ್ನಡ ತಾಯಿಭಾಷೆಯನ್ನು ಮರೆಯಬಾರದು ಎಂದು ಕರೆ ನೀಡಿದರು.
ಕನ್ನಡ ಭಾಷೆಗೆ ಶಾಸ್ತ್ರೀಯ ಭಾಷೆ ಎಂಬ ಸ್ಥಾನಮಾನ ದೊರೆತಿದೆ. ಕನ್ನಡಕ್ಕೆ ಸೂಕ್ತ ಗೌರವ ಸಿಗುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ. ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ತಾಯಿಯ ಪ್ರತಿಮೆಯನ್ನು ಸದ್ಯದಲ್ಲಿಯೇ ಸ್ಥಾಪಿಸಲಾಗುವುದು ಎಂದರು.
ಪ್ರತಿ ವರ್ಷದ ನವೆಂಬರ್ 1 ಕನ್ನಡ ಹಬ್ಬದ ದಿನ. ಶ್ರೀ ವಾಟಾಳ್ ನಾಗರಾಜ್ ಅವರು ಇದೇ ರೀತಿ 100 ರಾಜ್ಯೋತ್ಸವಗಳನ್ನು ಆಚರಿಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ. ಕನ್ನಡಪರ ಹೋರಾಟಗಾರರಾದ ಇವರು ದೀರ್ಘ ಕಾಲದಿಂದ ಕನ್ನಡ ನಾಡು, ನುಡಿ, ನೆಲ, ಜಲಗಳ ಸಂರಕ್ಷಣೆಗೆ ಶ್ರಮಿಸಿದ್ದಾರೆ ಎಂದರು.
ರಾಜಕೀಯವಾಗಿ ಬೇರೆ ಪಕ್ಷಗಳಿಂದ ಆಹ್ವಾನ ಬಂದಿದ್ದರೂ, ಕನ್ನಡ ಚಳವಳಿ ಪಕ್ಷ ಬಿಟ್ಟು ಬೇರೆಡೆಗೆ ಅವರು ಮುಖ ಮಾಡಲಿಲ್ಲ. ನನ್ನನ್ನೂ ಸೇರಿದಂತೆ, ಕೆಂಗಲ್ ಹನುಮಂತಯ್ಯ, ವೀರೇಂದ್ರ ಪಾಟೀಲ್, ದೇವರಾಜ ಅರಸು, ಗುಂಡೂರಾಯರು ಸೇರಿದಂತೆ ಹಲವು ರಾಜಕೀಯ ಧುರೀಣರಿಗೆ ಆಪ್ತರಾಗಿದ್ದರೂ, ಎಂದಿಗೂ ಅಧಿಕಾರಕ್ಕೆ ಹಪಹಪಿಸಿದವರಲ್ಲ ಎಂದರು.
ಮಾತೃಭಾಷೆ, ನೆಲ ಜಲದ ಬಗ್ಗೆ ಬದ್ಧತೆಯಿರುವ ವಾಟಾಳ್ ನಾಗರಾಜ್ ಅವರ ಬಗ್ಗೆ ಅಪಾರ ಗೌರವಾದರವಿದೆ. ನನ್ನ ವಿದ್ಯಾರ್ಥಿದೆಸೆಯಿಂದಲೂ ಅವರ ಭಾಷಣವನ್ನು ಕೇಳುತ್ತಾ ಬಂದಿದ್ದೇನೆ. ವಾಟಾಳ್ ನಾಗರಾಜ್ ಅವರನ್ನು ‘ನಾಯಕರು’ ಎಂದು ನಾನು ಹಿಂದಿನಿಂದಲೂ ಸಂಭೋದಿಸುತ್ತಿದ್ದೇನೆ. ಜನ ಅವರನ್ನು ನಾಯಕರಾಗಿ ಕಂಡಿದ್ದಾರೆ ಎಂದರು.




