ಬೆಳಗಾವಿ: ಸಂವಿಧಾನ ದ್ವೇಷಿಯಾಗಿರುವ ಆರ್.ಎಸ್.ಎಸ್ ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದ್ದು, ಇದನ್ನು ಹಿಮ್ಮೆಟ್ಟಿಸೋಣ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಾ ಭಾರತವನ್ನು ದುರ್ಬಲಗೊಳಿಸುತ್ತಿದೆ. ಬಿಜೆಪಿಯ ಈ ಯತ್ನವನ್ನು ನಾವು ಸೋಲಿಸಬೇಕು. ಇದಕ್ಕೆ ಗಾಂಧಿ-ಅಂಬೇಡ್ಕರ್ ನಮಗೆ ಮಾರ್ಗದರ್ಶಕರು ಎಂದರು.
ಸಂವಿಧಾನ ಜಾರಿಯಾದಾಗ ಬಿಜೆಪಿ ಪರಿವಾರ ಅಂಬೇಡ್ಕರ್ ಭಾವಚಿತ್ರವನ್ನು, ಸಂವಿಧಾನವನ್ನು ಸುಟ್ಟಿತ್ತು. ಇದನ್ನು ಈ ದೇಶ, ದೇಶದ ಜನ ಸಮುದಾಯ ಯಾವತ್ತೂ ಕ್ಷಮಿಸುವುದಿಲ್ಲ, ಮರೆಯುವುದಿಲ್ಲ ಎಂದರು.
ಹಲವು ಭಾಷೆ, ಹಲವು ಜಾತಿ, ಹಲವು ಧರ್ಮ ಭಾರತದ ಶಕ್ತಿ. ಬಿಜೆಪಿ ಪರಿವಾರ ಗಾಂಧಿ, ಅಂಬೇಡ್ಕರ್ ರನ್ನು ದ್ವೇಷಿಸುತ್ತದೆ. ನಾವು ಇಬ್ಬರ ಆಶಯಗಳನ್ನೂ ಪೀಳಿಗೆಯಿಂದ ಪೀಳಿಗೆಗೆ ದಾಟಿಸುತ್ತೇವೆ, ವಿಸ್ತರಿಸುತ್ತೇವೆ ಎಂದರು.
ನಾವು ಸಂವಿಧಾನ ರಕ್ಷಿಸಿದರೆ, ಸಂವಿಧಾನ ನಮ್ಮೆಲ್ಲರನ್ನೂ ರಕ್ಷಿಸುತ್ತದೆ. ನಮಗೆ ಚುನಾವಣೆ ಗೆಲ್ಲುವುದಕ್ಕಿಂತ ನಮ್ಮ ಸಿದ್ಧಾಂತ ಗೆಲ್ಲಬೇಕು. ಅದು ಮಾತ್ರ ನಮ್ಮ ನಿಜವಾದ ಗೆಲುವು ಎಂದರು.
ಗಾಂಧಿ ಅಂಬೇಡ್ಕರ್ ಅವರ ಆಶಯಗಳು, ಮೌಲ್ಯಗಳ ಈಡೇರಿಕೆಗೆ ನಾವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ. ಇದಕ್ಕಾಗಿ ಬಜೆಟ್ ನಲ್ಲಿ 52 ಸಾವಿರ ಕೋಟಿಗೂ ಅಧಿಕ ಮೊತ್ತದ ಹಣವನ್ನು ನೇರವಾಗಿ ಜನರ ಖಾತೆಗೆ ಹಾಕಿ ರಾಜ್ಯದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಿದ್ದೇವೆ ಎಂದರು.



