ಬೆಂಗಳೂರು: ಸಿಎಂ @siddaramaiah ನವರೇ, ಕರ್ನಾಟಕ ಕಂಡ ಅತ್ಯಂತ ದುರ್ಬಲ, ಅಸಹಾಯಕ ಮುಖ್ಯಮಂತ್ರಿ ತಾವು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
- ಕಾಮಗಾರಿ ಬಿಲ್ ಪಾವತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ : ಕೃಷ್ಣ ಬೈರೇಗೌಡ
ಪ್ರಧಾನಿ ನರೇಂದ್ರ ಮೋದಿಯವರನ್ನು ವೀಕ್ ಪ್ರಧಾನಿ ಎಂದು ಕರೆದಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಆರ್.ಅಶೋಕ, @HariprasadBK2 ಅವರು ತಮ್ಮ ಮೇಲೆ ಪದೇ ಪದೇ ವಾಗ್ದಾಳಿ ನಡೆಸಿದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳಲಾಗದಷ್ಟು, ಕನಿಷ್ಠ ಪಕ್ಷ ಪ್ರತ್ಯುತ್ತರ ಕೂಡ ನೀಡಲಾಗದಷ್ಟು ಅಸಹಾಯಕರ ತಾವು ಎಂದಿದ್ದಾರೆ.
ಡಿಸಿಎಂ @DKShivakumar ಅವರ ಬಣ ಅವಕಾಶ ಸಿಕ್ಕಾಗಲೆಲ್ಲಾ ಬಂಡಾಯದ ಬಾವುಟ ಹಾರಿಸಿ ತಮ್ಮ ಕುರ್ಚಿಯ expiry date ಮುಗಿಯುತ್ತದೆ ಎಂದು ಕಾಲೆಳೆಯುತ್ತಿದ್ದರೂ ಏನೂ ಮಾಡಲಾಗದ ಅಸಹಾಯಕ ಸ್ಥಿತಿ ನಿಮ್ಮದು ಎಂದಿದ್ದಾರೆ.
ಪ್ರಧಾನಿ ಮೋದಿ ಅವರೇ ಮತ್ತೊಮ್ಮೆ ಮುಂದಿನ ಐದು ವರ್ಷ ಈ ದೇಶದ ಸ್ಟ್ರಾಂಗ್ ಪ್ರಧಾನಿ ಆಗಿ ಮುಂದುವರೆಯುತ್ತಾರೆ ಎಂದು ವಿಶ್ವಾಸದಿಂದ ಹೇಳುವ ಧೈರ್ಯ ನನಗಿದೆ. ನಿಮಗೆ ತಾಕತ್ತಿದ್ದರೆ, ನೀವು ಹೇಳಿಕೊಳ್ಳುವಂತೆ ತಾವು ಸ್ಟ್ರಾಂಗ್ ಮುಖ್ಯಮಂತ್ರಿಯೇ ಆಗಿದ್ದರೆ, “ನಾನೇ ಐದು ವರ್ಷ ಮುಖ್ಯಮಂತ್ರಿ” ಎಂದು ಒಮ್ಮೆ ಹೇಳಿ ನೋಡೋಣ ಎಂದು ಸವಾಲೆಸೆದಿದ್ದಾರೆ.
ನಿಮಗೆ ಖಂಡಿತ ಹೇಳಲು ಆಗಲ್ಲ. ಅದಕ್ಕೆ ತಮ್ಮನ್ನು ಈ ರಾಜ್ಯ ಕಂಡ ಅತ್ಯಂತ ವೀಕ್ ಮುಖ್ಯಮಂತ್ರಿ ಎಂದು ಜನ ಮಾತಾಡಿಕೊಳ್ಳುವುದು ಎಂದಿದ್ದಾರೆ.




