ಬೆಂಗಳೂರು: ಬೀದರ್ ನ ಪಶುವೈದ್ಯಕೀಯ ಮೀನುಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ರಾಜ್ಯದ 69 ಕಡೆಗಳಲ್ಲಿ ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ವಿ.ವಿ.ಯಲ್ಲಿ ನಡೆದಿದೆ ಎನ್ನಲಾದ ನೇಮಕ, ನಿರ್ಮಾಣ ಕಾಮಗಾರಿ ಮತ್ತು ಖರೀದಿಯಲ್ಲಿ ಭ್ರಷ್ಟಾಚಾರ ಆರೋಪ ಸಂಬಂಧ ಬೀದರ್ ಲೋಕಾಯುಕ್ತ ಕಚೇರಿಯಲ್ಲಿ ಬೆಂಗಳೂರಿನ ವೆಂಕಟ್ ರೆಡ್ಡಿ ಎಂಬುವರು ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ವಿವಿಯ ಅಧಿಕಾರಿಗಳು, ಸಿಬ್ಬಂದಿಯ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.
2021ರಲ್ಲಿ ವಿವಿ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸಿದ ಅಧಿಕಾರಿಗಳು, ಸಿಬ್ಬಂದಿ ಮನೆಗಳು, ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆದಿದೆ. ಬೀದರ್ ಜಿಲ್ಲೆಯ 24, ಬೆಂಗಳೂರಿನ 31, ಕೊಪ್ಪಳ 2, ಚಿಕ್ಕಮಗಳೂರು ಜಿಲ್ಲೆಯ 2, ಹಾಸನ, ರಾಮನಗರ, ಕೋಲಾರ, ಉಡುಪಿ ಸೇರಿದಂತೆ ರಾಜ್ಯಾದ್ಯಂತ 69 ಕಡೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಳ್ಳಲಾಗಿದೆ.
ಕಳೆದ 2021 ಅಕ್ಟೋಬರ್ 4ರಂದು 35 ಕೋಟಿ ರೂ. ಹಗರಣ ನಡೆದಿದೆ ಎಂದು ದೂರಿನಲ್ಲಿ ದೂರುದಾರರು ಉಲ್ಲೇಖಿಸಿದ್ದರು. ಈ ಸಂಬಂಧ ಲೋಕಾಯುಕ್ತ ನಡೆಸಿದ ತನಿಖೆಯಲ್ಲಿ, 22 ಕೋಟಿ ಹಗರಣ ನಡೆದಿರುವುದು ಪತ್ತೆಯಾಗಿತ್ತು.
ವಿಶ್ವವಿದ್ಯಾಲಯದ ಕಂಟ್ರೋಲರ್ ಸುರೇಶ್ ಸಹೋದರ ಮಲ್ಲಿಕಾರ್ಜುನ್ ಅವರ ಚಿಕ್ಕಮಗಳೂರಿನಲ್ಲಿರುವ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನ ಕಲ್ಯಾಣನಗರದ ಮಲ್ಲಿಕಾರ್ಜುನ್ ನಿವಾಸಕ್ಕೆ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆದಿದೆ. ಸುರೇಶ್ 2017 ರಲ್ಲಿ ಬೀದರ್ನ ಪಶುವೈದ್ಯಕೀಯ ಮೀನುಗಾರಿಕೆ ವಿಜ್ಞಾನಿಗಳ ವಿವಿಯಲ್ಲಿ ಕಂಟ್ರೋಲರ್ ಆಗಿ ಕಾರ್ಯನಿರ್ವಹಿಸಿದ್ದರು.




