ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅನುಮತಿ ಇಲ್ಲದೇ, ಸರಿಯಾದ ಚೆಕ್ ಬಂದಿಯನ್ನು ಹೊಂದದೆ, ಅನಧಿಕೃತವಾಗಿ ಕಟ್ಟುತ್ತಿರುವ ಗಣೇಶ ದೇವಸ್ಥಾನವನ್ನು ನಿಲ್ಲಿಸಬೇಕು ಎಂದು ವಿದ್ಯಾರ್ಥಿಗಳು ಮತ್ತು ಕೆಲವು ಬೋಧಕ ಬೋಧಕೇತರ ಸಿಬ್ಬಂದಿ ವ್ಯಾಪಕ ಪ್ರತಿಭಟನೆ ನಡೆಸಿದರು.
ಬಿಬಿಎಂಪಿ ಅಧಿಕಾರಗಳು ಹೋರಾಟದಲ್ಲಿ ಭಾಗವಹಿಸಿದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳನ್ನು ಕಿಡಿಗೇಡಿಗಳು ನಮಗೆ ದೇವಸ್ಥಾನವನ್ನು ಕಟ್ಟಲು ತಡೆಯುತ್ತಿದ್ದಾರೆ ಎಂದು ಪೋಲಿಸ್ರಿಗೆ ಹೇಳಿಕೆಯನ್ನ ನೀಡಿದ್ದಾರೆ. ಬಿಬಿಎಂಪಿ ಅಧಿಕಾರಿಯ ಹೇಳಿಕೆಯನ್ನು ವಿರೋಧಿಸಿ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರುಗಳು ಸೇರಿ ದೊಡ್ಡಮಟ್ಟದಲ್ಲಿ ಪ್ರತಿಭಟನೆಯನ್ನು ಮಾಡಿ ತಕ್ಷಣವೇ ಅವಹೇಳನಕಾರಿ ಪದವನ್ನು ಬಳಸಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಮತ್ತು ಅಧ್ಯಾಪಕರಿಗೆ ಅವಮಾನ ಮಾಡಿದ ಅಧಿಕಾರಿಗಳನ್ನು ತಕ್ಷಣವೇ ಅಮಾನತು ಮಾಡಬೇಕು, ಅನಧಿಕೃತವಾಗಿ ನಿರ್ಮಿಸುತ್ತಿರವ ಕಟ್ಟಡವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಪೋಲಿಸ್ ಇಲಾಖೆಯ ರಕ್ಷಣೆಯನ್ನು ತೆಗೆದುಕೊಂಡು ನಿನ್ನೆ (೦೭/೦೯/೨೦೦)ರ ರಾತ್ರಿ ಸುಮಾರು ಎರಡು ಗಂಟೆಯವರೆಗೂ ಕಾಮಗಾರಿಯನ್ನು ಮಾಡಿರುತ್ತಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದು, ಈ ಕುರಿತ ಫೋಟೋ ಕೂಡ ಜಾಲತಾಣಗಳಲ್ಲಿ ಹಂಚಿಕೆಯಾಗಿದೆ.
ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಉಳಿಸಿ ಅಭಿಯಾನ ಕೂಡ ನಡೆಯತೊಡಗಿದೆ.



