ಮೈಸೂರು: ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು ಎಲ್ಲಾ ಜಲಾಶಯಗಳು ತುಂಬಿವೆ. ಹೀಗಾಗಿ ಎಲ್ಲಾ ನಾಲೆಗಳಿಗೂ ತಕ್ಷಣದಿಂದ ನೀರು ಹರಿಸಿ ಎಂದು ಸಿಎಂ ಸಿದ್ದರಾಮಯ್ಯ ಮಹತ್ವದ ಆದೇಶ ನೀಡಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಕೆಆರ್‌ಎಸ್ ಡ್ಯಾಂಗೆ ಬಾಗಿಣ ಅರ್ಪಿಸಿ ವೇದಿಕೆ ಮೇಲೆಯೇ ಸಿಎಂ ಸೂಚನೆ ನೀಡಿದ್ದಾರೆ. ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾವೇರಿ ತಾಯಿ, ಚಾಮುಂಡೇಶ್ವರಿ ಕೃಪಾಕಟಾಕ್ಷದಿಂದ ರಾಜ್ಯ ಸುಭಿಕ್ಷವಾಗಿದೆ. ಜಲಾಶಯಗಳೂ ತುಂಬಿವೆ. ಎಲ್ಲಾ ನಾಲೆಗಳಿಗೂ ತಕ್ಷಣದಿಂದ ನೀರು ಹರಿಸಿ ಎಂದರು.
ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನಗೂ , DCM ಶಿವಕುಮಾರ್ ಅವರಿಗೂ ಸರಿ ಇಲ್ಲ ಎಂದು ಬುರುಡೆ ಬಿಡುತ್ತಿದ್ದಾರೆ. ನಾನು ಮತ್ತು ಶಿವಕುಮಾರ್ ಇಬ್ಬರೂ ಒಟ್ಟಾಗಿ, ಗಟ್ಟಿಯಾಗಿದ್ದೀವಿ. ನಮ್ಮ ಸರ್ಕಾರವೂ ಐದು ವರ್ಷ ಗ್ಯಾರಂಟಿಯಾಗಿ ಗಟ್ಟಿಯಾಗಿ ಇರುತ್ತದೆ. 2028 ರಲ್ಲೂ ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದರು.
2023-24 ರಲ್ಲಿ ಬರಗಾಲವಿತ್ತು. ಈ ಕಾರಣಕ್ಕೇ “ಸಿದ್ದರಾಮಯ್ಯ ಅವರ ಕಾಲುಗುಣ ಚನ್ನಾಗಿಲ್ಲ, ಕಾಂಗ್ರೆಸ್ ಸರ್ಕಾರದ ಕಾಲುಗುಣ ಸರಿಯಿಲ್ಲ” ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಈಗ ಕಳೆದು ಎರಡು ವರ್ಷಗಳಿಂದ ರಾಜ್ಯದಲ್ಲಿ ಮಳೆ, ಬೆಳೆ ಉತ್ತಮವಾಗಿ ಆಗುತ್ತಿದೆ. ವಿರೋಧ ಪಕ್ಷಗಳು ಮೂಡಾತ್ಮರು ಈಗ ಏನು ಹೇಳ್ತಾರೆ ಎಂದು ಕೇಳಿದರು.
ಅಭಿವೃದ್ಧಿಗೆ ಹಣ ಇಲ್ಲ, ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಬುರುಡೆ ಬಿಡುತ್ತಿರುವ ಬಿಜೆಪಿಯವರು ನಾಡಿನ ಜನರಿಗೆ ಉತ್ತರಿಸಬೇಕು. ದಿವಾಳಿ ಆಗಿದ್ದರೆ 25 ಸಾವಿರ ಕೋಟಿ ರೂಪಾಯಿ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು.
ಕೃಷಿ ಪ್ರಗತಿಗಾಗಿ ವರ್ಷಕ್ಕೆ 19000 ಸಾವಿರ ಕೋಟಿ ಪಂಪ್ ಸೆಟ್ ಸಬ್ಸಿಡಿಯನ್ನು ರೈತರಿಗೆ ಕೊಟ್ಟಿದ್ದೇವೆ. 92 ವರ್ಷಗಳ ಬಳಿಕ ಜೂನ್ ತಿಂಗಳಲ್ಲೇ ಭರ್ತಿ ಆಗಿರುವ ಕೆ ಅರ್ ಎಸ್ ನಲ್ಲಿ ಸ್ಮಾರಕ ನಿರ್ಮಿಸಿ ಎಂದು ಕಾವೇರಿ ನಿಗಮದ ಎಂಡಿ ಅವರಿಗೆ ಸೂಚನೆ ನೀಡಿದರು.
ನಾವು ಈ ಬಾರಿ ಕಾವೇರಿ ಅಭಿವೃದ್ಧಿ ನಿಗಮಕ್ಕೆ 3000 ಕೋಟಿ ಹಣ ಕೊಟ್ಟಿದ್ದೇವೆ. ಈಗ ಟೀಕಿಸುತ್ತಿರುವವರು ಅಧಿಕಾರದಲ್ಲಿದ್ದಾಗ ಕಾವೇರಿ ನಿಗಮಕ್ಕೆ ಹಣ ಕೊಡಲಿಲ್ಲ ಎಂದು ಟೀಕಿಸಿದರು. ಸುಳ್ಳು ಹೇಳುವ ಚಾಳಿಯಲ್ಲಿರುವ ಬಿಜೆಪಿ ಗೆ ರಾಜ್ಯದ ಜನ ಪೂರ್ಣ ಅಧಿಕಾರವನ್ನೇ ಕೊಟ್ಟಿಲ್ಲ. ಆಪರೇಷನ್ ಕಮಲ ಮಾಡಿ ಎರಡು ಬಾರಿ ಅಧಿಕಾರಕ್ಕೆ ಬಂದರು. ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಕೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ ಎಂದರು.




