ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಸ್ವತಂತ್ರ ಪರೀಕ್ಷಾ ನಿಯಂತ್ರಕರ ಹುದ್ದೆಗಳನ್ನು ಸೃಷ್ಟಿಸುವ ಮೂಲಕ ನ್ಯಾಯಯುತ ಹಾಗೂ ನಿಷ್ಪಕ್ಷಪಾತ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ರಾಜ್ಯ ಲೋಕಸೇವಾ ಆಯೋಗಗಳ ಅಧ್ಯಕ್ಷರ 25ನೇ ರಾಷ್ಟ್ರೀಯ ಸಮೇಳನದಲ್ಲಿ ಮಾತನಾಡಿದ ಅವರು, ಜನಕೇಂದ್ರಿತವಾಗಿ ಭವಿಷ್ಯದ ಸವಾಲುಗಳನ್ನು ಎದುರಿಸುವ ಆಡಳಿತ ವ್ಯವಸ್ಥೆಯನ್ನು ಕೆಪಿಎಸ್ಸಿ ಅಳವಡಿಸಿಕೊಳ್ಳಬೇಕು. ಉತ್ತಮ ಆಡಳಿತಕ್ಕಾಗಿ ಸರ್ಕಾರಿ ನೌಕರರಿಗೆ ಗುಣಮಟ್ಟದ ಸೇವಾ ತರಬೇತಿ ನೀಡುವ ಅಗತ್ಯವಿದೆ ಎಂದರು.
ಲೋಕಸೇವಾ ಆಯೋಗಗಳು ಅರ್ಹತೆ ಮತ್ತು ನ್ಯಾಯಪರತೆಯನ್ನು ಎತ್ತಿಹಿಡಿದು ಕಾರ್ಯಾಂಗಕ್ಕೆ ಅಭೂತಪೂರ್ವವಾದ ಕೊಡುಗೆ ನೀಡುವ ಪ್ರಜಾಪ್ರಭುತ್ವದ ಆಧಾರಸ್ತಂಭಗಳಾಗಿವೆ ಎಂದರು.
1892ರಲ್ಲಿ ಮೈಸೂರು ಸಿವಿಲ್ ಸರ್ವಿಸ್ ಪರೀಕ್ಷೆಗಳನ್ನು ಆಗಿನ ದಿವಾನ್ ಕೆ.ಶೇಷಾದ್ರಿ ಅಯ್ಯರ್ ಆರಂಭಿಸುವ ಮೂಲಕ ಸಾರ್ವಜನಿಕ ಸೇವೆಯಲ್ಲಿ ಕರ್ನಾಟಕಕ್ಕೆ ಶ್ರೀಮಂತ ಐತಿಹ್ಯವಿದೆ. ಈ ಮೂಲಕ ವಿಶಿಷ್ಟ ಆಡಳಿತಗಾರರ ಪಡೆಯನ್ನು ನೇಮಕಾತಿ ಮಾಡಿಕೊಳ್ಳುವ ಪ್ರಕ್ರಿಯೆಗಳಿಗೆ ಕರ್ನಾಟಕ ಭದ್ರ ಬುನಾದಿ ಹಾಕಿದ್ದು ಅದೇ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿದೆ ಎಂದರು.
1951ರಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಸಾಂವಿಧಾನಿಕ ಸಂಸ್ಥೆಯಾಗಿ ಸ್ಥಾಪನೆಗೊಂಡು ಸಾಕಷ್ಟು ವಿಕಸನಗಳನ್ನು ಕಂಡಿದೆ. ದಕ್ಷತೆ ಮತ್ತು ಪಾರದರ್ಶಕತೆಯ ಗುರುತಾಗಿದೆ. ಪಿ.ಸಿ.ಹೋಟ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ನಮ ಸರ್ಕಾರ ಗ್ರೂಪ್ ಸಿ ಹುದ್ದೆಗಳ ಸಂದರ್ಶನವನ್ನು ರದ್ದುಗೊಳಿಸಿದೆ. ಗ್ರೂಪ್ ಡಿ ಹುದ್ದೆಗಳಿಗೆ ಹಾಗೂ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಗಳಲ್ಲಿ ಸಂದರ್ಶನದ ಅಂಕಗಳನ್ನು ಕಡಿತಗೊಳಿಸಲಾಗಿದೆ. ನ್ಯಾಯಯುತ ಹಾಗೂ ಪಾರದರ್ಶಕತೆಯನ್ನು ಪ್ರೋತ್ಸಾಹಿಸಲು ನೇಮಕಾತಿ ಮಾದರಿಗಳನ್ನು ಸರಳೀಕೃತಗೊಳಿಸಿದೆ ಎಂದರು.
ಕರ್ನಾಟಕ ಲೋಕಸೇವಾ ಆಯೋಗದ ನೇರ ನೇಮಕಾತಿ ನಿಯಮಗಳನ್ನು 2021ರಲ್ಲಿ ಪರಿಚಯಿಸಿದ್ದು, ಇದು ವ್ಯಕ್ತಿತ್ವ ಪರೀಕ್ಷೆಯ ಮೌಲ್ಯಕ್ಕಿಂತ ಪ್ರಮಾಣೀಕರಿಸಿದ ಪ್ರಕ್ರಿಯೆಗಳಿಗೆ ಒತ್ತು ನೀಡಿದೆ. ಪ್ರಶ್ನೆಪತ್ರಿಕೆ ಸೋರಿಕೆ ತಡೆಗಟ್ಟಿ ಪಾರದರ್ಶಕತೆಯನ್ನು ಖಾತ್ರಿಗೊಳಿಸಲು, ಸಾರ್ವಜನಿಕರ ವಿಶ್ವಾಸವನ್ನು ದೃಢಗೊಳಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.




