ಧಾರವಾಡ: ಎಲ್ಲ ಶಾಲೆಗಳಲ್ಲಿ ಮಕ್ಕಳ ರಕ್ಷಣಾ ನೀತಿಯನ್ನು ಕಡ್ಡಾಯವಾಗಿ ಅಳವಡಿಸಬೇಕು. ಆರ್‍ಟಿಇ ಕಾಯ್ದೆ-2009 ಮತ್ತು ಮಕ್ಕಳ ರಕ್ಷಣಾ ನೀತಿಯನ್ನು ಸರಿಯಾದ ರೀತಿಯಲ್ಲಿ ಶಿಕ್ಷಣ ಇಲಾಖೆ ಅನುಷ್ಠಾನಗೊಳಿಸಬೇಕು. ಇಲ್ಲವಾದಲ್ಲಿ ಆಯೋಗದಿಂದ ಕ್ರಮ ಜರುಗಿಸಲು ಶಿಫಾರಸ್ಸು ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಶೇಖರಗೌಡ ರಾಮತ್ನಾಳ ಎಚ್ಚರಿಗೆ ನೀಡಿದರು.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಧಾರವಾಡ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ-1098 ಹಾಗೂ 112 ಅವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಶಾಲೆಯಲ್ಲಿದೆ ಶಿಕ್ಷಣದ ಜೊತೆಗೆ ಮಕ್ಕಳ ರಕ್ಷಣೆ ಎಂಬ ಶೀರ್ಷಿಕೆಯಡಿಯಲ್ಲಿ ಆರ್‍ಟಿಇ ಕಾಯ್ದೆ-2009 ಪರಿಣಾಮಕಾರಿ ಅನುಷ್ಠಾನ ಕುರಿತು ಹಾಗೂ ಮಕ್ಕಳ ರಕ್ಷಣಾ ನೀತಿ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಆರ್‍ಟಿಇ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಪಾಲಕರಿಗೆ ಕಾಯ್ದೆಯ ಕುರಿತು ಮಾಹಿತಿ ನೀಡಬೇಕು. ಶಿಕ್ಷಕರ ಕೊರತೆ ಇದ್ದಲ್ಲಿ, ಅತಿಥಿ ಶಿಕ್ಷಕರನ್ನು ನೇಮಿಸಿ, ಎಲ್ಲ ವರ್ಗಗಳು ಪೂರ್ಣಪ್ರಮಾಣದಲ್ಲಿ ನಡೆಯುವಂತೆ ಕ್ರಮವಹಿಸಬೇಕೆಂದು ಹೇಳಿದರು.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ, ಅವರನ್ನು ಶಾಲೆಗೆ ಮರುಸೆರ್ಪಡೆ ಮಾಡಿಕೊಳ್ಳಬೇಕು. ಶಿಕ್ಷಕರು ಮನೆ ಮನೆ ಭೇಟಿ ನೀಡಿ, ಮಗುವಿನ ಸಮಸ್ಯೆ ತಿಳಿದುಕೊಳ್ಳಬೇಕು. ಪಾಲಕರಿಗೆ ಸರ್ಕಾರದ ಶೈಕ್ಷಣಿಕ ಯೋಜನೆಗಳನ್ನು ಮನವರಿಕೆ ಮಾಡಿ, ಮಕ್ಕಳನ್ನು ಪ್ರತಿದಿನ ತಪ್ಪದೇ ಶಾಲೆಗೆ ಕಳುಹಿಸುವಂತೆ ಮನವೊಲಿಸಬೇಕೆಂದು ಹೇಳಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀತಾ ವಾಡಕರ ಮಾತನಾಡಿ, ಮಕ್ಕಳಿಗೆ ಕೇವಲ ಶಿಕ್ಷಣವನ್ನು ನೀಡುವುದಲ್ಲದೆ ಅವರಿಗೆ ರಕ್ಷಣೆಯನ್ನು ಒದಗಿಸುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಬೇಕು. ಸಂಕಷ್ಟ ಪರಿಸ್ಥಿತಿಯಲ್ಲಿರುವ ಮಕ್ಕಳನ್ನು ರಕ್ಷಣೆ ಮಾಡಿ ಸಮಾಜದ ಮುಖ್ಯವಾಹಿನಿಗೆ ತರುವುದು ಆದ್ಯ ಕರ್ತವ್ಯವಾಗಿದೆ, ಈ ನೀಟ್ಟಿನಲ್ಲಿ ಎಲ್ಲರೂ ಕೆಲಸ ಮಾಡೋಣ ಎಂದರು.
ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ, ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ವಿಜಯಲಕ್ಷ್ಮೀ ಹಂಚಿನಾಳ, ಎಪಿಸಿಓ ಪ್ರಕಾಶ ಬೂತಾಳೆ ಇನ್ನಿತರರು ಭಾಗವಹಿಸಿ, ಇಲಾಖೆಯ ವರದಿಯನ್ನು ನೀಡಿದರು. ಮತ್ತು ಮಾರ್ಚ್ ಅಂತ್ಯದಲ್ಲಿ ಮಕ್ಕಳ ರಕ್ಷಣಾ ನೀತಿ-2016 ರ ಪರಿಷ್ಕøತ-2023 ವರದಿಯನ್ನು ಎಲ್ಲ ಶಾಲೆಗಳಲ್ಲಿ ಅಳವಡಿಸಿ ಧೃಡೀಕರಣ ವರದಿ ಸಲ್ಲಿಸುವುದಾಗಿ ಹೇಳಿದರು.
ಸಭೆಯಲ್ಲಿ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಅಕ್ಷರ ದಾಸೋಹ ಜಿಲ್ಲಾ ನಿರ್ದೇಶಕರು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು, ಕ್ಷೇತ್ರ ಸಮನ್ವಯಾಧಿಕಾರಿಗಳು, ಶಿಕ್ಷಣ ಸಂಯೋಜಕರು, ಸಾಂಸ್ಥಿಕ ರಕ್ಷಣಾಧಿಕಾರಿ ಅಶ್ವಿನಿ ಉಳ್ಳಿಗೇರಿ, ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಎಸ್.ಎಂ ಹುಡೇದಮನಿ, ಪ್ರಕಾಶ ಕೊಡ್ಲಿವಾಡ, ಬಸಲಿಂಗಪ್ಪ ನೀರಲಕೇರಿ, ಬಸವರಾಜ ಗೋಕಾವಿ, ಜಯಶ್ರೀ ಪಿಸೆ ಉಪಸ್ಥಿತರಿದ್ದರು.




