ಬೆಂಗಳೂರು: ಶಿಕ್ಷಣದಲ್ಲಿ ಜಾತಿ ಆಧಾರಿತ ತಾರತಮ್ಯ ಇರಲೇಬಾರದು ಎಂದು ಪ್ರತಿಪಾದಿಸಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ರೋಹಿತ್ ವೇಮುಲ ಕಾಯ್ದೆ ಜಾರಿಗೆ ತರುವಂತೆ ಮನವಿ ಮಾಡಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಶಿಕ್ಷಣದಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಯಾರೂ ಎದುರಿಸದಂತೆ ಖಾತ್ರಿಪಡಿಸಲು ಈ ಕಾಯ್ದೆಯನ್ನು ಜಾರಿಗೊಳಿಸಬೇಕು ಎಂದಿದ್ದಾರೆ.
ಹಿಂದೆ, ನಮ್ಮಲ್ಲಿ ಸಾಕಷ್ಟು ಆಹಾರ ಧಾನ್ಯಗಳಿದ್ದವು. ಹೀಗಿದ್ದರೂ ನಮ್ಮಲ್ಲಿ ಕೆಲವರು ಹಸಿವಿನಿಂದ ಬಳಲುತ್ತಿದ್ದರು. ಊಟ ಮಾಡದೇ ಮಲಗಿದ ದಿನಗಳೆಷ್ಟೋ. ನೀರು ಲಭ್ಯತೆಯೂ ಕಷ್ಟವಾಗಿತ್ತು. ಅಸ್ಪೃಶ್ಯರು ಎಂಬ ಒಂದೇ ಕಾರಣಕ್ಕೆ ಇವೆಲ್ಲವನ್ನೂ ಸಹಿಸಿಕೊಂಡು ಬದುಕಬೇಕಾಗಿತ್ತು’ ಎಂದಿದ್ದಾರೆ.
ಅಂಬೇಡ್ಕರ್ ಅವರ ಮಾತನ್ನೇ ಉಲ್ಲೇಖಿಸಿರುವ ಅವರು, ‘ನಾನೊಬ್ಬ ಅಸ್ಪೃಶ್ಯ ಎಂಬುದು ಗೊತ್ತಿತ್ತು. ಇದೇ ಕಾರಣಕ್ಕಾಗಿ ಅವಮಾನ ಮತ್ತು ತಾರತಮ್ಯ ಸಾಮಾನ್ಯವಾಗಿದ್ದವು. ಅಂಕಗಳಿದ್ದರೂ ಸಹಪಾಠಿಗಳೊಂದಿಗೆ ನಾನು ಸಹಜವಾಗಿ ಕೂರಲು ಸಾಧ್ಯವಿಲ್ಲ ಎಂಬುದೂ ತಿಳಿದಿತ್ತು. ಇಷ್ಟಾದರೂ, ತರಗತಿಯ ಒಂದು ಮೂಲೆಯಲ್ಲಿ ಕೂರುತ್ತಿದ್ದೆ’ ಎಂದಿದ್ದಾರೆ.
ಅವರು ಅನುಭವಿಸಿದ ಅವಮಾನವನ್ನು ಭಾರತದ ಯಾವ ಮಗುವೂ ಅನುಭವಿಸಬಾರದು ಎಂಬುದನ್ನು ನೀವು ಒಪ್ಪುತ್ತೀರಿ ಎಂದು ಭಾವಿಸಿದ್ದೇನೆ. ದಲಿತ, ಆದಿವಾಸಿ ಮತ್ತು ಇತರ ಹಿಂದುಳಿದ ಜಾತಿಗಳಿಗೆ ಸೇರಿದ ಲಕ್ಷಾಂತರ ವಿದ್ಯಾರ್ಥಿಗಳು ಇಂದಿಗೂ ಅದೇ ಘೋರ ತಾರತಮ್ಯವನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಎದುರಿಸುತ್ತಿದ್ದಾರೆ.
ಪ್ರತಿಭಾವಂತ ವಿದ್ಯಾರ್ಥಿಗಳಾಗಿದ್ದರೂ ರೋಹಿಲ್ ವೇಮುಲಾ, ಪಾಯಲ್ ತಾಡ್ವಿ ಮತ್ತು ದರ್ಶನ್ ಸೊಲಂಕಿ ಅವರ ಹತ್ಯೆಯಯನ್ನು ಸಹಿಸಲಾಗದು. ಇವೆಲ್ಲದಕ್ಕೂ ಕೊನೆ ಹಾಡುವ ಕಾಲವಿದು. ಹೀಗಾಗಿ ಕರ್ನಾಟಕ ಸರ್ಕಾರ ರೋಹಿತ್ ವೇಮುಲ ಕಾಯ್ದೆಯನ್ನು ಜಾರಿಗೆ ತರಬೇಕು. ಆ ಮೂಲಕ ಡಾ. ಬಿ.ಆರ್. ಅಂಬೇಡ್ಕರ್, ರೋಹಿತ್ ವೇಮುಲ ಒಳಗೊಂಡಂತೆ ಹಲವರು ಎದುರಿಸಿದ ಅವಮಾನವನ್ನು ಯಾವುದೇ ಮಗು ಅನುಭವಿಸಬಾರದು ಎಂದಿದ್ದಾರೆ.
ಶಿಕ್ಷಣ ವ್ಯವಸ್ಥೆಯೊಂದಕ್ಕೇ ಈ ದೇಶದಲ್ಲಿ ಜಾತಿ ತಾರತಮ್ಯವನ್ನು ಹೋಗಲಾಡಿಸಲು ಸಾಧ್ಯ. ಅವಕಾಶ ವಂಚಿತರೂ ಶಿಕ್ಷಣದ ಮೂಲಕ ಸಬಲರಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.




