ಬೆಳಗಾವಿ: ಕರ್ನಾಟಕವನ್ನು ಬೆಸೆಯುವ ಉತ್ತರದಿಂದ ದಕ್ಷಿಣ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ಬೀದರ್-ಚಾಮರಾಜನಗರ ಹೆದ್ದಾರಿ ಕಲ್ಯಾಣ ಪಥ ಚತುಷ್ಪಥ ರಸ್ತೆ ನಿರ್ಮಾಣ ಕಾರ್ಯವು ಕಲ್ಯಾಣ ಕರ್ನಾಟಕ ಪ್ರದೇಶಗಳಾದ ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಬಳ್ಳಾರಿ ಮತ್ತು ವಿಜಯನಗರ ಪ್ರದೇಶಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶಶಿಲ್ ಜಿ. ನಮೋಶಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ಕಲ್ಯಾಣ ಪಥ ಯೋಜನೆಯನ್ನು ಕೆಆರ್‌ಆರ್‌ಡಿಎ ದಿಂದ ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ಕಲ್ಯಾಣ ಪಥ ಯೋಜನೆಯಡಿ ಒಟ್ಟು 1124.70 ಕಿ.ಮೀ. ಉದ್ದದ ರಸ್ತೆ ಕಾಮಗಾರಿಗಳು ರೂ.1,000 ಕೋಟಿಗಳ ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಯೋಜನೆ ಕಾಮಗಾರಿಗಳು ವಿವಿಧ ಹಂತದ ಪ್ರಗತಿಯಲ್ಲಿದ್ದು, 2025-26ನೇ ಸಾಲಿನಲ್ಲಿ ಪೂರ್ಣಗೊಳಿಸಲು ಯೋಜಿಸಲಾಗಿದೆ ಎಂದರು.
ಒಟ್ಟು 286 ಕಾಮಗಾರಿಗಳನ್ನು ಕೈಗೊಂಡಿದ್ದು, 281 ಕಾಮಗಾರಿಗಳು ಪ್ರಗತಿಯಲ್ಲಿವೆ. 05 ಕಾಮಗಾರಿಗಳು ಟೆಂಡರ್ ಪ್ರಕ್ರಿಯಯಲ್ಲಿದೆ. ಈಗಾಗಲೇ 75 ಕಿ.ಮೀ ಉದ್ದವನ್ನು ಪೂರ್ಣಗೊಳಿಸಿದ್ದು, ರೂ.150 ಕೋಟಿ ವೆಚ್ಚ ಮಾಡಲಾಗಿದೆ ಎಂದು ಕೆಕೆಆರ್‌ಡಿಎ ವರದಿಯ ಕುರಿತು ಸದನಕ್ಕೆ ಮಾಹಿತಿ ನೀಡಿದರು.
ಗ್ರಾಮೀಣ ರಸ್ತೆ ಸಂಪರ್ಕವು ಗ್ರಾಮೀಣ ಕ್ಷೇತ್ರದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ ಹೆಚ್ಚಿಸುವಲ್ಲಿ ಪ್ರಮುಖ ಅಂಶವಾಗಿರುವುದರಿಂದ ಗ್ರಾಮೀಣ ರಸ್ತೆಗಳನ್ನು ಸರ್ವಋತು ರಸ್ತೆಗಳನ್ನಾಗಿ ಅಭಿವೃದ್ಧಿಪಡಿಸುವ ಅಗತ್ಯತೆ ಇರುತ್ತದೆ. ಗ್ರಾಮೀಣ ರಸ್ತೆಗಳನ್ನು ಸರ್ವಋತು ರಸ್ತೆಗಳನ್ನಾಗಿ ಅಭಿವೃದ್ಧಿಪಡಿಸುವುದರಿಂದ ಗ್ರಾಮೀಣ ಭಾಗದ ಜನರಿಗೆ ಜಿಲ್ಲಾ/ತಾಲ್ಲೂಕು ಕೇಂದ್ರಕ್ಕೆ ಹಾಗೂ ಮಾರುಕಟ್ಟೆ/ಆಸ್ಪತ್ರೆ/ ಶೈಕ್ಷಣಿಕ ಕೇಂದ್ರಗಳಿಗೆ ಸಂಪರ್ಕ ದೊರಕಲಿದ್ದು, ಆರ್ಥಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಪೂರಕವಾಗುವುದು. ಈ ಹಿನ್ನೆಲೆಯಲ್ಲಿ ಕಲ್ಯಾಣ ಪಥ ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ ಎಂದರು.




