ಬೆಂಗಳೂರು: ಮಹಾನಗರ ಬೆಂಗಳೂರಿನಲ್ಲಿ ಜಾರಿಗೊಳಿಸಿರುವ ಕಂದಾಯ ನಿವೇಶನಗಳ ಅಕ್ರಮ ಸಕ್ರಮ ಯೋಜನೆಯನ್ನು ರಾಜ್ಯಾದ್ಯಂತ ಎಲ್ಲಾ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಜಾರಿಗೆ ತರಲು ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಕಾನೂನು ಸಚಿವ ಎಚ್ ಕೆ ಪಾಟೀಲ್ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನುಮೋದನೆ ಪಡೆಯದ ಬಡಾವಣೆಗಳಲ್ಲಿ ಬಿ ಖಾತಾ ನಿವೇಶನಗಳಲ್ಲಿ ಕಟ್ಟಿರುವ ಮನೆ ಮತ್ತು ನಿವೇಶನಗಳನ್ನು ಸಕ್ರಮಗೊಳಿಸಲು ತೀರ್ಮಾನಿಸಲಾಗಿದೆ ಎಂದರು.
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಜಾರಿಗೊಳಿಸಿರುವ ನಿಯಮಾವಳಿಗಳ ಪ್ರಕಾರವೇ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ ಖಾತಾ ನಿವೇಶನ ಕಟ್ಟಡ ಮತ್ತು ಫ್ಲಾಟ್ ಗಳನ್ನು ಎ ಖಾತಾಗಳಾಗಿ ಪರಿವರ್ತಸಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಅನುಮೋದನೆ ಪಡೆಯದ ಬಡಾವಣೆಗಳಲ್ಲಿನ ನಿವೇಶನ ಮತ್ತು ಕಟ್ಟಡಗಳಿಗೆ ಬಿ ಖಾತಾ ನೀಡಲಾಗಿದೆ. ಈ ಬಡಾವಣೆಗಳಿಗೆ ನಗರ ಸ್ಥಳೀಯ ಸಂಸ್ಥೆಗಳು ಕುಡಿಯುವ ನೀರು, ಒಳಚರಂಡಿ ರಸ್ತೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿದೆ ಆದರೆ ಈ ಮನೆಗಳು ಬಿ ಖಾತ ವ್ಯಾಪ್ತಿಯಲ್ಲಿ ಬರುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಆಸ್ತಿ ತೆರಿಗೆ ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸ್ಥಳೀಯ ಸಂಸ್ಥೆಗಳಿಗೆ ದೊಡ್ಡ ಪ್ರಮಾಣದ ಆದಾಯ ತಪ್ಪಿ ಹೋಗಿದೆ. ಈ ಹಿನ್ನೆಲೆಯಲ್ಲಿ ಕೇವಲ ಒಂದು ಬಾರಿಗೆ ಮಾತ್ರ ಅವಕಾಶ ಎಂಬ ನಿಯಮವನ್ನು ಅಳವಡಿಸಿ ಬಿ ಖಾತ ಅಡಿಯಲ್ಲಿ ಬರುವ ಎಲ್ಲಾ ಸ್ವತ್ತುಗಳನ್ನು ಎ ಖಾತಾ ಆಗಿ ಪರಿವರ್ತಿಸಲಾಗುವುದು. ಇದಕ್ಕಾಗಿ ಕಟ್ಟಡ ಮಾಲೀಕರು ನಿರ್ದಿಷ್ಟ ಶುಲ್ಕ ಪಾವತಿಸಬೇಕು ಎಂದರು.
ಬಿಡುಗಡೆ: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದು ಸನ್ನಡತೆ ತೋರಿದ ಕೈದಿಗಳನ್ನು ಶಿಕ್ಷೆಯನ್ನು ಪೂರ್ಣಗೊಳಿಸುವ ಅವಧಿ ಪೂರ್ವ ಬಿಡುಗಡೆ ಮಾಡಲು ಕಾರಾಗೃಹ ಇಲಾಖೆ ಸಲ್ಲಿಸಿರುವ ಪ್ರಸ್ತಾವನೆಗೆ ಸಂಪುಟ ಅನುಮೋದನೆ ನೀಡಿದೆ. ಒಟ್ಟು 33 ಮಂದಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸನ್ನಡತೆ ತೋರಿರುವ ಕೈದಿಗಳನ್ನು ಅವಧಿ ಪೂರ್ವ ಬಿಡುಗಡೆ ಮಾಡಲಾಗುವುದು ಆದರೆ ಇದಕ್ಕೆ ಕೇಂದ್ರ ಸರ್ಕಾರದ ಅನುಮತಿ ಬೇಕಾಗಿದೆ ಅನುಮತಿ ಬಂದ ನಂತರ ಬಿಡುಗಡೆ ಪ್ರಕ್ರಿಯೆ ನಡೆಯಲಿದೆ ಎಂದರು.
ಬಾಲ್ಯ ವಿವಾಹ ತಡೆಗಟ್ಟುವುದು, ಮಹಿಳೆಯರ ಮೇಲಿನ ದೌರ್ಜನ್ಯ ನಿಯಂತ್ರಣ ಸೇರಿದಂತೆ ಮಹಿಳೆಯರ ಸುರಕ್ಷತೆಯ ದೃಷ್ಟಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸ್ಥಾಪಿಸಲು ಉದ್ದೇಶಿಸಿರುವ ಅಕ್ಕಪಡೆಗೆ ಸಂಪುಟ ಅನುಮೋದನೆ ನೀಡಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪೊಲೀಸ್ ಮತ್ತು ಒಳಾಡಳಿತ ಇಲಾಖೆಯ ಸಹಯೋಗದೊಂದಿಗೆ ರಾಜ್ಯದ ಎಲ್ಲಾ 31 ಜಿಲ್ಲೆ ಮತ್ತು ಐದು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಅಕ್ಕಪಡೆಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು
ಸಂಪುಟ ಸಭೆಯ ಇತರ ನಿರ್ಧಾರಗಳು:
ಕರ್ನಾಟಕ ಸಾಬೂನು ಕಾರ್ಖಾನೆ 17.70 ಕೋಟಿ ಮೊತ್ತದ ಸಾಬೂನು ತಯಾರಿಸುವ ಯಂತ್ರ ಖರೀದಿಗೆ ಅನುಮೋದನೆ.
ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ 24.96 ಕೋಟಿ ವೆಚ್ಚದಲ್ಲಿ ಪಿಪಿಪಿ ಮಾದರಿಯ 50 ಟಿಪಿಡಿ ಸಾಮರ್ಥ್ಯದ ಬಯೋ ಸಿಎನ್ಜಿ ಘಟಕ ಸ್ಥಾಪನೆ
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಿಂದ ಕಲಬುರಗಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಮೆಗಾ ಡೇರಿ ನಿರ್ಮಾಣ ಮತ್ತು 10 ಕೋಟಿ ವೆಚ್ಚದಲ್ಲಿ ಪ್ರಾದೇಶಿಕ ಸಹಕಾರ ಭವನ.
ಪ್ರಧಾನ ಮಂತ್ರಿ ಆರೋಗ್ಯ ವಿಮಾ ಯೋಜನೆ ಅಡಿಯಲ್ಲಿ ರಾಜ್ಯಾದ್ಯಂತ 196 ಗ್ರಾಮೀಣ ಆರೋಗ್ಯ ಮತ್ತು ಸುರಕ್ಷಾ ಕೇಂದ್ರಗಳನ್ನು ಸ್ಥಾಪಿಸಲು 127.40 ಕೋಟಿ ಅಂದಾಜು ಮೊತ್ತದ ಯೋಜನೆಗೆ ಅನುಮೋದನೆ.
24 ಕೋಟಿ ರೂ. ಅಂದಾಜು ಮೊತ್ತದಲ್ಲಿ ಬೆಂಗಳೂರಿನ ಜಯನಗರದಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ 2ನೇ ಹಂತದ ಕಟ್ಟಡ ಕಾಮಗಾರಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ
ಚಿಕ್ಕಬಳ್ಳಾಪುರದ ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನೂತನ ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗೆ ಅವಶ್ಯವಿರುವ ಯಂತ್ರೋಪಕರಣ ಮತ್ತು ಪೀಠೋಪಕರಣ ಖರೀದಿಯ 40 ಕೋಟಿ ರೂಪಾಯಿ ಯೋಜನೆಗೆ ಒಪ್ಪಿಗೆ.
ಹೊಳೆನರಸೀಪುರ ಪಟ್ಟಣದಲ್ಲಿ ತಾಲೂಕು ಪಂಚಾಯಿತಿ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಯ 12.30 ಕೋಟಿ ರೂ. ಪರಿಷ್ಕೃತ ಮೊತ್ತಕ್ಕೆ ಅನುಮೋದನೆ
ಚಾಮರಾಜನಗರ ಜಿಲ್ಲೆಯಲ್ಲಿ166 ಗ್ರಾಮಗಳ ಬಹುಗ್ರಾಮ ಕುಡಿಯುವ ಸರಬರಾಜು ನೀರು ಯೋಜನೆಯ 3 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಕಾಮಗಾರಿ 33.04 ಕೋಟಿ ಮೊತ್ತದಲ್ಲಿ ಅನುಷ್ಠಾನ ಮಾಡಲು ನಿರ್ಧಾರ
ಹಳಿಯಾಳ ಪಟ್ಟಣ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಯೋಜನೆಯಡಿ ನಿರ್ಮಿಸಲಾಗಿರುವ ವಿವಿಧ ಘಟಕಗಳ 5 ವರ್ಷಗಳ ನಿರ್ವಹಣೆ ಮತ್ತು ದುರಸ್ತಿ ಕಾಮಗಾರಿಯನ್ನು 10.60 ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ
ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಮಹಾತ್ಮಾ ಗಾಂಧಿ, ఇంದಿರಾ ಗಾಂಧಿ, ಜವಾಹರಲಾಲ್ ನೆಹರು ಮತ್ತು ರಾಜೀವ್ ಗಾಂಧಿ ಪುತ್ಥಳಿಗಳನ್ನು ಸ್ಥಾಪಿಸಲು ಅನುಮೋದನೆ
ಲೋಕೋಪಯೋಗಿ ಇಲಾಖೆಯ ಮೂಲಕ 70.70 ಕೋಟಿ ವೆಚ್ಚದಲ್ಲಿ ಮಂಡ್ಯದ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆಡಳಿತ ಭವನ ನಿರ್ಮಾಣ ಪ್ರಸ್ತಾವನೆಗೆ ಅನುಮೋದನೆ
11.03 ಕೋಟಿ ವೆಚ್ಚದಲ್ಲಿಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದುಬ್ಬನಶಶಿಯ ಮತ್ತು ಗಂಗೆಕೊಳ್ಳದ ಕಡಲ ತೀರದಲ್ಲಿ ಸಮುದ್ರ ಕೊರೆತ ಪ್ರತಿಬಂಧಕ ಕಾಮಗಾರಿಯ ಪರಿಷ್ಕೃತ ಅಂದಾಜಿಗೆ ಅನುಮೋದನೆ
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಬಾಳೆಪುಣಿ ಗ್ರಾಮದ ಸ.ನಂ. 87/4ರಲ್ಲಿ 5 ಎಕರೆ ಜಮೀನನ್ನು ಎಲೆಕ್ಟ್ರಿಕ್ ಬಸ್‌ಗಳನ್ನು ಕಾರ್ಯಾಚರಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗಕ್ಕೆ ಮಂಜೂರಿಗೆ ಒಪ್ಪಿಗೆ




