ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ದಯಾನಂದನಗರ ವಾರ್ಡ್ ಆರ್.ಜಿ.ಐ.ಕಾಲೋನಿ ಅಶ್ವಥ್ ಕಟ್ಟೆ ರೋಡ್ ಮತ್ತು ದೇವಸ್ಥಾನ ರಸ್ತೆ ಡಾಂಬರೀಕರಣ ಕಾಮಗಾರಿ, ದಯಾನಂದನಗರ 1ನೇ ರಸ್ತೆ ಮತ್ತು 1ನೇ ಮುಖ್ಯರಸ್ತೆ ಡಾಂಬರೀಕರಣ, ಚರಂಡಿ ಹೂಳು ತೆಗೆಯುವ ಕಾಮಗಾರಿ, ಶ್ರೀರಾಂಪುರ 7ನೇ ಮುಖ್ಯರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಮಾಜಿ ಶಿಕ್ಷಣ ಸಚಿವ, ಶಾಸಕ ಸುರೇಶ್ ಕುಮಾರ್, ಬಿಬಿಎಂಪಿ ಮಾಜಿ ಸದಸ್ಯ ಎಂ.ಮುನಿರಾಜುರವರು ಕಾಮಗಾರಿಗಳಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಇದೇ ವೇಳೆ ಮಾತನಾಡಿದ ಎಸ್.ಸುರೇಶ್ ಕುಮಾರ್, ರಾಜಾಜಿನಗರ ವಿಧಾನಸಭಾ ಕ್ಷೇತ್ರ ಪ್ರಜ್ಞಾವಂತ, ವಿದ್ಯಾವಂತರು ಇರುವ ಕ್ಷೇತ್ರ. ಜನರ ಆಶಯದಂತೆ ಮತ್ತು ಸಾರ್ವಜನಿಕರಿಗೆ ಅವಶ್ಯಕತೆ ಇರುವ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸಾರ್ವಜನಿಕರ ತೆರಿಗೆ ಹಣ ಸಮರ್ಪಕವಾಗಿ ಬಳಕೆಯಾಗಬೇಕು ಎಂದರು.
ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಬೇಕು. ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ನೇರವಾಗಿ ಅಲಿಸಿ ತತಕ್ಷಣ ಪರಿಹಾರ ಸಿಗಬೇಕು ಎಂಬ ನಿಟ್ಟಿನಲ್ಲಿ ಜನರೊಂದಿಗೆ ಜನಸೇವಕ ಜನಸ್ಪಂದನಾ ಕಾರ್ಯಕ್ರಮ ಮತ್ತು ದಿನಕ್ಕೊಂದು ವಾರ್ಡ್ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡು ಬರಲಾಗುತ್ತಿದೆ. ಎರಡು ಜನಸ್ಪಂದನಾ ಕಾರ್ಯಕ್ರಮಗಳಿಂದ ಸಾವಿರಾರು ಸಮಸ್ಯೆಗಳಿಗೆ ಪರಿಹಾರ ಸಿಕ್ಕಿದೆ ಎಂದರು.
ಜಿಬಿಎ ಅಧಿಕಾರಿಗಳು ಮತ್ತು ಸ್ಥಳೀಯ ಬಿಜೆಪಿ ಮುಖಂಡರು, ಸಾರ್ವಜನಿಕರು ಸೇರಿದಂತೆ ನಾಗರಿಕರು ಹಾಗೂ ಕಾರ್ಯಕರ್ತರು ಹಾಜರಿದ್ದರು.




