ಬೆಳಗಾವಿ: ಖಾಸಗಿ ಹೋಟೆಲ್ ನಲ್ಲಿ ಇಂದು ಲೋಕಸಭಾ ಚುನಾವಣೆ ಸಂಬಂಧ ಹಮ್ಮಿಕೊಂಡಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ Randeep Singh Surjewala, ಮುಖ್ಯಮಂತ್ರಿ ಹಾಗೂ ಡಿ.ಕೆ ಶಿವಕುಮಾರ್ ಪಾಲ್ಗೊಂಡು ಮಾತನಾಡಿದರು.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಪ್ರಜಾಧ್ವನಿ ಯಾತ್ರೆಯನ್ನು ಮಹಾತ್ಮ ಗಾಂಧೀಜಿಯವರು ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿಯ ನೆಲದಿಂದ ಆರಂಭಿಸಿದ್ದು, ರಾಜ್ಯದ ಎಲ್ಲಾ ಭಾಗಗಳಲ್ಲೂ ಈ ಯಾತ್ರೆ ಯಶಸ್ವಿಯಾಗಿದೆ. ಜನರಿಗೆ ನಾವು ಇಲ್ಲಿಂದಲೇ ಗ್ಯಾರಂಟಿ ಭರವಸೆ ಕೊಟ್ಟು, ಅವುಗಳನ್ನು ಈಡೇರಿಸಿದ್ದೇವೆ. ಆದ್ದರಿಂದಲೇ ನಾವು ಇಂದು ಆತ್ಮವಿಶ್ವಾಸದಿಂದ ಮತಯಾಚನೆ ಮಾಡುತ್ತಿದ್ದೇವೆ.

ಮೋದಿ ಗ್ಯಾರಂಟಿ ಹೆಸರಲ್ಲಿ ಬಿಜೆಪಿಯವರು ಮತ್ತೆ ಬುರುಡೆ ಬಿಡ್ತಿದ್ದಾರೆ. ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯನ್ನು ಕಳೆದ ಹತ್ತು ವರ್ಷಗಳಲ್ಲಿ ಈಡೇರಿಸಿಲ್ಲ. ಭಾವನೆಗಳ ಮೇಲೆ ಮಾತ್ರ ಅವರು ಮಾತಾಡೋದು ಬಿಟ್ಟರೆ, ಬದುಕಿನ ಮೇಲೆ ಅವರು ಯಾವುದೇ ಮಾತುಗಳನ್ನ ಆಡೋದಿಲ್ಲ. ನಾವು ಕೊಟ್ಟ ಗ್ಯಾರಂಟಿಯನ್ನೇ ಟೀಕೆ ಮಾಡಿ ಬಿಜೆಪಿಯವರು ಮೋದಿ ಗ್ಯಾರಂಟಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಲೆ, ಗ್ಯಾರಂಟಿ ಅಲೆ ರಾಜ್ಯದಲ್ಲಿ ಬೀಸುತ್ತಿದೆ.

ನಮ್ಮ ಗ್ಯಾರಂಟಿಗಳ ಬಗ್ಗೆ ಬಿಜೆಪಿಯವರು ಇಲ್ಲಸಲ್ಲದ ಜಾಹಿರಾತುಗಳನ್ನು ನೀಡುತ್ತಿದ್ದಾರೆ. ಆದರೆ ರಾಜ್ಯದ ಜನಕ್ಕೆ ನಮ್ಮ ಗ್ಯಾರಂಟಿಗಳು ಅನುಕೂಲವಾಗಿವೆ. ನಾವು ಈಗಾಗಲೇ ಮಹದಾಯಿ, ಕಳಸಾ ಬಂಡೂರಿ ಯೋಜನೆಗೆ ಟೆಂಡರ್ ಕರೆದಿದ್ದು, ಇದನ್ನು ಅನುಷ್ಠಾನ ಮಾಡುವುದು ನಮ್ಮ ಆದ್ಯತೆಯಾಗಿದೆ. ಆದರೆ ಬಿಜೆಪಿಯವರದ್ದು, ಬರೀ ಖಾಲಿ ಮಾತು ಬಿಟ್ಟರೆ, ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಹೀಗಿರುವಾಗ ಬಿಜೆಪಿಯವರು ಯಾವ ಮುಖ ಇಟ್ಟುಕೊಂಡು ಜನರಲ್ಲಿ ಮತ ಕೇಳುತ್ತಿದ್ದಾರೆ. ಇವರಿಗೆ ಮತ ಕೇಳುವ ಯಾವ ಹಕ್ಕು ಇಲ್ಲ: ಡಿ.ಕೆ ಶಿವಕುಮಾರ್, ಉಪ ಮುಖ್ಯಮಂತ್ರಿ




