ಸಮಾಜದ ಬಾಂಧವರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮನವಿ
ಬೆಂಗಳೂರು: ರಾಜ್ಯಾದ್ಯಂತ ಸೆಪ್ಟೆಂಬರ್ 22ರಿಂದ ಆರಂಭವಾಗಲಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಧರ್ಮದ ಕಾಲಂನಲ್ಲಿರುವ ಇತರೆ ಕಾಲಂನಲ್ಲಿ ವೀರಶೈವ-ಲಿಂಗಾಯತ ಎಂದು ಬರೆಸುವಂತೆ, ಸಮಾಜದ ಬಾಂಧವರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮನವಿ ಮಾಡಿದೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಹಿರಿಯ ಉಪಾಧ್ಯಕ್ಷ ಹಾಗೂ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ, ಹಿಂದಿನಿಂದಲೂ ಮಹಾಸಭಾ ವೀರಶೈವ ಲಿಂಗಾಯತ ಧರ್ಮದ ಪ್ರತಿಪಾದನೆ ಮಾಡುತ್ತಾ ಬಂದಿದೆ. ಹೀಗಾಗಿ ಧರ್ಮದ ಕಾಲಂನ ಇತರೆ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಬರೆಸಬೇಕು ಎಂಬುದು ಸಾರ್ವತ್ರಿಕ ಅಭಿಪ್ರಾಯವಾಗಿದೆ ಎಂದರು.
ಉಳಿದಂತೆ ಜಾತಿಯ ಕಾಲಂನಲ್ಲಿ ವೀರಶೈವ ಅಥವಾ ಲಿಂಗಾಯತ ಎಂದು ಬರೆಸುವಂತೆ ಹಾಗೂ ಉಪ ಜಾತಿಯ ಕಾಲಂನಲ್ಲಿರುವ ತಮ್ಮ ತಮ್ಮ ಉಪಜಾತಿ ಹೆಸರು ಬರೆಸುವಂತೆ ಮನವಿ ಮಾಡಿದರು.
ಸರ್ಕಾರಕ್ಕೆ ನಾಡಿನ ಜನರ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಯ ನಿಖರ ಮಾಹಿತಿ ದೊರೆತರೆ ನಾಡಿನ ಜನರೆಲ್ಲರ ಕಲ್ಯಾಣಕ್ಕೆ ಕಾರ್ಯಕ್ರಮ ರೂಪಿಸಲು ಅನುವಾಗುತ್ತದೆ. ಹೀಗಾಗಿ ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಹಾಸಭಾದ ಕಾರ್ಯದರ್ಶಿ ರೇಣುಕ ಪ್ರಸನ್ನ ಮತ್ತು ವೀಣಾ ಕಾಶಪ್ಪನವರ್ ಪಾಲ್ಗೊಂಡಿದ್ದರು.



