ಪ್ರಧಾನಿ ನರೇಂದ್ರ ಮೋದಿ ಶುದ್ದ ಕುಡಿಯುವ ನೀರಿನ ಘಟಕ, ರಕ್ತದಾನ, ನೇತ್ರದಾನ, ಹಿರಿಯ ನಾಗರಿಕರ, ಪೌರ ಕಾರ್ಮಿಕರಿಗೆ ಸನ್ಮಾನ ಮತ್ತು 75 ದಿನ ಮಧ್ಯಾಹ್ನ ಬಿಸಿಯೂಟ ವಿತರಣೆ ಕಾರ್ಯಕ್ರಮ
ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರ: ದಯಾನಂದನಗರ ವಾರ್ಡ್ ನಲ್ಲಿ ಪ್ರಧಾನಿ ನರೇಂದ್ರಮೋದಿರವರ 75ನೇ ಹುಟ್ಟುಹಬ್ದದ ಅಂಗವಾಗಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿತ್ತು.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಶಾಸಕ ಎಸ್.ಸುರೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ಸಂಸದ ಪಿ.ಸಿ.ಮೋಹನ್, ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಎಂ.ಮುನಿರಾಜು, ಶಕೀಲ ಮುನಿರಾಜು, ಮಂಡಲದ ಅಧ್ಯಕ್ಷ ಸುದರ್ಶನ್, ರಾಜಾಜಿನಗರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಸಂಜಯ್ ಕುಮಾರ್, ಕರುಮಾರಿಯಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ 75ಕೆ.ಜಿ.ಗಾತ್ರದ ಕೇಕ್ ಕತ್ತರಿಸಿದರು.
ಎಸ್.ಸುರೇಶ್ ಕುಮಾರ್ ಮಾತನಾಡಿ, ಇಡಿ ದೇಶದಲ್ಲಿ ನರೇಂದ್ರಮೋದಿರವರ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ನಮ್ಮ ದೇಶದಲ್ಲಿ ವಿಶಿಷ್ಟ ವೈದ್ಯರಿದ್ದಾರೆ. ಅವರು ಪೌರ ಕಾರ್ಮಿಕರು ಅವರಿಂದ ನಮ್ಮ ರಾಜ್ಯದ ಜನರು ಆರೋಗ್ಯವಂತರಾಗಿ ಇರುವಂತೆ ನೋಡಿಕೊಳ್ಳುತ್ತಾರೆ ಎಂದರು.
ಪ್ರತಿಯೊಬ್ಬ ಭಾರತೀಯ ಮನಸ್ಸಿನಲ್ಲಿ ವಿಶ್ವಾಸ ಮೂಡಿಸಿದ್ದಾರೆ. ಪ್ರಧಾನಿ ನರೇಂದ್ರಮೋದಿರವರು ಅಮೇರಿಕಾ ಟ್ರಂಪ್ ಅವರಿಗೆ ಸರಿಯಾದ ಉತ್ತರ ನೀಡಿದ್ದಾರೆ. ಜಿ.ಎಸ್.ಟಿ. ಕಡಿಮೆ ಮಾಡಿ ಜನಸಾಮಾನ್ಯರಿಗೆ ಒಳ್ಳೆಯದು ಮಾಡಿದ್ದಾರೆ. 80 ಕೋಟಿ ಜನರಿಗೆ ಆಹಾರ ಭದ್ರತೆ ನೀಡಿದ್ದಾರೆ. ಔಷಧಿಗಳ ಮೇಲಿನ ಬೆಲೆ ಬಡವರಿಗೆ ಕೈಗೆಟ್ಟುವಂತೆ ಮಾಡಿದ್ದಾರೆ ಎಂದರು.
ಪಿ.ಸಿ.ಮೋಹನ್ ಮಾತನಾಡಿ, ಪ್ರಧಾನಿ ನರೇಂದ್ರಮೋದಿರವರ ಹುಟ್ಟುಹಬ್ಬದ ಅಂಗವಾಗಿ ಸೇವಾ ಪಾಕ್ಷಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ರಕ್ತದಾನ, ನೇತ್ರದಾನ ಮತ್ತು ವಿವಿಧ ಸಮಾಜಮುಖಿ ಕಾರ್ಯಗಳನ್ನು ಜನರಿಗೆ ತಲುಪಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರಮೋದಿರವರು ತಿಳಿಸಿದಂತೆ ಜನಸೇವಕ ಎಂದರೆ ಜನಸೇವೆ ಮಾಡು ಎಂದು ಪ್ರತಿದಿನ, ಪ್ರತಿಕ್ಷಣ ಜನರ ಸೇವೆ ಮಾಡಲು ಅವರ ಸ್ಪೂರ್ತಿಯಾಗಿದ್ದಾರೆ ಎಂದರು.
ಪ್ರಧಾನಿರವರ ಹುಟ್ಟುಹಬ್ಬದ ಅಂಗವಾಗಿ ನರೇಂದ್ರ ಮೋದಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ, ಮೋದಿರವರ ಜೀವನ ಚರಿತ್ರೆ, ಛಾಯಚಿತ್ರ ಪ್ರದರ್ಶನ, ಬೈಕ್ ಜಾಥ, 75 ದಿನ ಮಧ್ಯಾಹ್ನ ಬಿಸಿಯೂಟ ಕಾರ್ಯಕ್ರಮ ಚಾಲನೆ ಹಾಗೂ ಹಿರಿಯ ನಾಗರಿಕರು, ಪೌರ ಕಾರ್ಮಿಕರಿಗೆ ಸನ್ಮಾನ , ರಕ್ತದಾನ ಶಿಬಿರ, ನೇತ್ರದಾನ ಶಿಬಿರ , ಉಚಿತವಾಗಿ ಸಾರ್ವಜನಿಕರಿಗೆ 500 ನೀರಿನ ಕ್ಯಾನ್ ವಿತರಣೆ ಕಾರ್ಯಕ್ರಮ ನೆರವೇರಿತು.




