ವಿಜಯಪುರ: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ 10 ಸರ್ವೇ ನಂಬರುಗಳ 11 ಎಕರೆ ಆಸ್ತಿ ಮಾತ್ರ ವಕ್ಫ್ ಆಸ್ತಿ ಎಂದು ಗೆಜೆಟ್ ನೋಟಿಫಿಕೇಷನ್ ಆಗಿದ್ದು, ಅದರಲ್ಲಿ 10 ಎಕರೆ 14 ಗುಂಟೆ ಖಬರಸ್ತಾನ ಇದೆ. ಉಳಿದದ್ದು ಈದ್ಗಾ, ಮಸೀದಿ ಇತ್ಯಾದಿ ಕಟ್ಟಡಗಳಿವೆ ಹಾಗೂ ಈ ಭೂಮಿಯು ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಸೇರಿದ್ದು, ಯಾವುದೇ ರೈತರ ಖಾಸಗಿ ಜಮೀನು ಒಳಪಟ್ಟಿಲ್ಲ ಎಂಬುದನ್ನು ಗಮನಿಸಬೇಕು ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದರು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಜರತ್ ಪೀರ ದಸ್ತಿಗೀರ ಸಾಬ್ ಮೊಹಮ್ಮದ ಚಿಂಗ್ ಸಿಯಾ ತಖಿಯಾ ದರ್ಗಾ ವಿಜಯಪುರ ಮಹಾಲಬಾಗಯತ ಸೇರಿದ ಆಸ್ತಿಯಾಗಿದ್ದು, ಕೆಳಗಡೆ ತಪ್ಪಾಗಿ ಹೊನವಾಡ ಎಂದು ಸೇರಿದೆ. ಇದು ಗೊಂದಲಕ್ಕೆ ಕಾರಣವಾಗಿದೆ. ಇದು ಗೊಂದಲಕ್ಕೆ ಕಾರಣವಾಗಿದೆ. ಈ ಯಾವ ರೈತರಿಗೂ ವಕ್ಫ ಸಮಿತಿ ಅಥವಾ ಸರ್ಕಾರದ ಇಲಾಖೆಯಿಂದ ಯಾವುದೇ ನೋಟಿಸಗಳು ಬಂದಿಲ್ಲ ಎಂದರು.
ಈಗಾಗಲೇ ಜಿಲ್ಲೆಯಲ್ಲಿ ಹಲವು ರೈತರಿಗೆ ವಕ್ಫ್ ಆಸ್ತಿ ನೋಟಿಸು ಬಂದಿದೆ ಎಂಬ ದೂರುಗಳಿದ್ದು, ವಕ್ಫ್ ಸಮಿತಿ ಮತ್ತು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಎಲ್ಲ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಾರೆ. ಒಂದೇ ಒಂದು ಇಂಚು ರೈತರ ಜಾಗವು ಅನಗತ್ಯವಾಗಿ, ಆಧಾರ, ದಾಖಲೆಗಳಿಲ್ಲದೆ ವಕ್ಫ ಆಸ್ತಿ ಎಂದು ಸೇರಿಸಲಾಗುವುದಿಲ್ಲ ಎಂದರು.
ಈ ಕುರಿತು ಶೀಘ್ರದಲ್ಲೇ ಸಭೆ ನಡೆಸಿ, ಎಲ್ಲ ಗೊಂದಲಗಳಿಗೆ ಉತ್ತರ ನೀಡಲಾಗುವುದು. ಈ ನಿಟ್ಟಿನಲ್ಲಿ ಸಂಸದ ಶ್ರೀ ತೇಜಸ್ವಿ ಸೂರ್ಯ ಅವರಾಗಲಿ ಮತ್ತೊಬ್ಬರಾಗಲಿ ರಾಜಕಾರಣ ಮಾಡಿ ಜನಸಾಮಾನ್ಯರಲ್ಲಿ ಇಲ್ಲದ ಗೊಂದಲ, ಆತಂಕ ಮೂಡಿಸುವುದು ಬೇಡ ಎಂದರು.




