ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆಯೇ ದುಷ್ಕರ್ಮಿಗಳು ಐದು ಮಂದಿಗೆ ಚಾಕು ಇರಿದು ಅಟ್ಟಹಾಸ ಮೆರೆದಿರುವ ಘಟನೆ ಖಂಡನೀಯ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಭುವನೇಶ್ವರಿ ಮೂರ್ತಿ ಮೆರವಣಿಯಲ್ಲಿ ಯುವಕರು ನೃತ್ಯ ಮಾಡುತ್ತಿದ್ದ ವೇಳೆ ಏಕಾಏಕಿ ನುಗ್ಗಿದ ದುಷ್ಕರ್ಮಿಗಳು ಮನಸ್ಸೋ ಇಚ್ಛೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಈ ದುರ್ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಇದಕ್ಕೆ ಪೊಲೀಸ್ ಇಲಾಖೆಯ ವೈಫಲ್ಯವೇ ಕಾರಣ.
ಕನ್ನಡ ರಾಜ್ಯೋತ್ಸವದ ಶುಭದಿನದಂದೇ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಪುಂಡರು ಕರಾಳ ದಿನಾಚರಣೆ ಮೆರವಣಿಗೆಗೆ ಕಾಂಗ್ರೆಸ್ ಸರ್ಕಾರ ಅವಕಾಶ ನೀಡಿದ್ದು,
ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಕಾರ್ಯಕರ್ತರು ಕರಾಳ ದಿನ ಆಚರಿಸಿದ್ದಾರೆ. ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ನಾಡದ್ರೋಹಿಗಳ ಜೊತೆ ಸೆಲ್ಫಿ ತೆಗೆದುಕೊಂಡಿದ್ದು ದುಷ್ಕತ್ಯಕ್ಕೆ ಪ್ರೇರಣೆ ನೀಡಿದಂತಿದೆ.
ಬೆಳಗಾವಿಯಲ್ಲಿ ಸಂಭವಿಸಿರುವ ಈ ದುರ್ಘಟನೆಗಳಿಗೆ Indian National Congress – Karnataka ಸರ್ಕಾರವೇ ನೇರ ಹೊಣೆ. #MES ಪುಂಡಾಟವನ್ನು ಮಟ್ಟಹಾಕಬೇಕು. ನಾಡದ್ರೋಹಿಗಳ ಬಲಿ ಹಾಕಬೇಕು ಎಂದು ವಿರೋಧ ಪಕ್ಷದಲ್ಲಿದ್ದಾಗ
ವೀರಾವೇಶದ ಮಾತುಗಳನ್ನು ಆಡುತ್ತಿದ್ದ Siddaramaiah ಹಾಗೂ DK Shivakumar ಈಗ ಹೇಡಿಯಂತೆ ಮೌನಕ್ಕೆ ಶರಣಾಗಿದ್ದಾರೆ.
ಕನ್ನಡದ್ರೋಹಿ, ನಾಡದ್ರೋಹಿಗಳನ್ನು ಮಟ್ಟಹಾಕದೇ, ಅವರು ನಮ್ಮವರೇ ಎಂದು ಸಿಎಂ, ಡಿಸಿಎಂ ಮೃದು ಧೋರಣೆ ತೋರುತ್ತಿರುವುದು, ಕನ್ನಡಿಗರ ಸ್ವಾಭಿಮಾನವನ್ನು ಕೆಣಕುವಂತೆ ಮಾಡಿದೆ.
– ಜೆಡಿಎಸ್




