ರಾಜ್ಯದಲ್ಲಿ ಕ್ಯಾನ್ಸರ್ ಪೀಡಿತರಿಗೆ ದುಬಾರಿಯಾಗಿದ್ದ ಕಿಮೋಥೆರಪಿ ಚಿಕಿತ್ಸೆಯನ್ನು ನಮ್ಮ ಸರ್ಕಾರವು ಯಶಸ್ವಿನಿ ಯೋಜನೆಯಡಿಯಲ್ಲಿ ಸೇರ್ಪಡೆಗೊಳಿಸಿರುವುದು ಬಡ ರೋಗಿಗಳ ಪಾಲಿಗೆ ವರದಾನವಾಗಿದೆ. ಕ್ಯಾನ್ಸರ್ ಚಿಕಿತ್ಸೆ ಪಡೆಯಲು ಆಗದ ಬಡರೋಗಿಗಳ ಆರ್ಥಿಕ ಹೊರೆ ಕಡಿಮೆ ಮಾಡಿ ಉಚಿತ ಕಿಮೋಥೆರಪಿ ಚಿಕಿತ್ಸೆ ಸಿಗುವಂತೆ ಮಾಡಿರುವುದರ ಜೊತೆಗೆ ಸರ್ಜಿಕಲ್ ಆಂಕೊಲಾಜಿ ಹಾಗೂ ರೇಡಿಯೊಥೆರಪಿ ವಿಭಾಗದಿಂದ 261 ಚಿಕಿತ್ಸೆಗಳನ್ನು ಅಳವಡಿಸಿಕೊಂಡು ದುಬಾರಿ ವೆಚ್ಚದ ಕ್ಯಾನ್ಸರ್ ಚಿಕಿತ್ಸೆಗಳನ್ನು ಸರ್ಕಾರದಿಂದ ಉಚಿತವಾಗಿ ಒದಗಿಸಲಾಗುತ್ತಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಯಶಸ್ವಿನಿ ಯೋಜನೆ ಅಡಿಯಲ್ಲಿ ಒಂದೇ ವರ್ಷದಲ್ಲಿ 1,796 ಮಂದಿ 5.20 ಕೋಟಿ ರೂಪಾಯಿ ವೆಚ್ಚದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಜನವರಿ 2023ರಿಂದ ಜನವರಿ 2024ರ ಅವಧಿಯಲ್ಲಿ ಕಿಮೊಥೆರಪಿ ವಿಭಾಗದಲ್ಲಿ ಒಟ್ಟು ₹1.43 ಕೋಟಿ ವೆಚ್ಚದಲ್ಲಿ 1,097 ಮಂದಿಗೆ ಚಿಕಿತ್ಸೆ ಒದಗಿಸಲಾಗಿದೆ. ರೇಡಿಯೊಥೆರಪಿ ವಿಭಾಗದಲ್ಲಿ ₹1.87 ಕೋಟಿ ವೆಚ್ಚದಲ್ಲಿ 228 ಮಂದಿಗೆ ಹಾಗೂ ಸರ್ಜಿಕಲ್ ಅಂಕೊಲಾಜಿ ವಿಭಾಗದಲ್ಲಿ ₹1.90 ಕೋಟಿ ವೆಚ್ಚದಲ್ಲಿ 411 ಮಂದಿ ಚಿಕಿತ್ಸೆ ಪಡೆದಿದ್ದಾರೆ.
ಯಶಸ್ವಿನಿ’ ಯೋಜನೆಯಡಿ ಗರಿಷ್ಠ ₹ 5 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ ಪಡೆಯಬಹುದಾಗಿದೆ. ಕ್ಯಾನ್ಸರ್ ಪೀಡಿತ ವ್ಯಕ್ತಿಯು ನೆಟ್ವರ್ಕ್ ಆಸ್ಪತ್ರೆಗಳಿಗೆ ನೇರವಾಗಿ ತೆರಳಿ ಚಿಕಿತ್ಸೆ ಪಡೆದುಕೊಳ್ಳಬಹುದು.ಈಗಾಗಲೇ ರಾಜ್ಯದಲ್ಲಿ 474 ಆಸ್ಪತ್ರೆಗಳು ಈ ನೆಟ್ವರ್ಕ್ ಅಡಿಯಲ್ಲಿವೆ. ನಮ್ಮ ಕಾಂಗ್ರೆಸ್ ಸರ್ಕಾರವು ಹೆಚ್ಚಿನ ಮುತುವರ್ಜಿ ವಹಿಸಿ ಇನ್ನಷ್ಟು ಆಸ್ಪತ್ರೆಗಳನ್ನು ಈ ಯೋಜನೆಯಡಿ ತರಲು ಶ್ರಮವಹಿಸುತ್ತಿದೆ.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ತೀರಾ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಯಶಸ್ವಿನಿ ಯೋಜನೆಯನ್ನು ನಮ್ಮ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಹೆಚ್ಚು ಬಲಗೊಳಿಸಿದ್ದೇವೆ. ರಾಜ್ಯದ ಕ್ಯಾನ್ಸರ್ ಪೀಡಿತರಿಗೆ ದುಬಾರಿ ಚಿಕಿತ್ಸೆಗಳು ಕಡಿಮೆ ವೆಚ್ಚದಲ್ಲಿ ಹಾಗೂ ಉಚಿತವಾಗಿ ಸಿಗುವಂತೆ ಮಾಡಿ ನಮ್ಮ ಸರ್ಕಾರ ಹಾಗೂ ಆರೋಗ್ಯ ಇಲಾಖೆಯು ಕ್ಯಾನ್ಸರ್ ರೋಗಿಗಳ ಬೆನ್ನೆಲುಬಾಗಿ ನಿಂತಿದೆ.
– ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ




