ಬೆಂಗಳೂರು: ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಶಾಸಕರು ಮತ್ತು ಸಚಿವರ ಸಂಬಳ ಹಾಗೂ ಮತ್ತಿತರ ಭತ್ಯೆ ಹೆಚ್ಚಳ ಪ್ರಕ್ರಿಯೆ ಸದ್ದಿಲ್ಲದೆ ಆರಂಭಗೊಂಡಿದೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಸಂಬಳ ಹೆಚ್ಚಳ ಪ್ರಸ್ತಾವನೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಉನ್ನತಾಧಿಕಾರ ಸಮಿತಿ ಅನುಮೋದನೆ ನೀಡಿದ್ದು, ಶಾಸಕ ಮತ್ತು ಸಚಿವರ ಸಂಬಳ ಶೇಕಡಾ 50ರಷ್ಟು ಹೆಚ್ಚಳವಾಗಲಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಫೆಬ್ರವರಿ 2022ರಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಶಾಸಕರ ವೇತನವನ್ನು ಹೆಚ್ಚಳ ಮಾಡಿತ್ತು. ಮೂರು ವರ್ಷಗಳ ನಂತರ ಸಂಬಳ ಹೆಚ್ಚಳದ ಪ್ರಕ್ರಿಯೆ ಆರಂಭಗೊಂಡಿದೆ. ತಡರಾತ್ರಿ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ವಿಧಾನಸಭೆಯ ವಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಸಂಬಳ ಹೆಚ್ಚಳ ಪ್ರಸ್ತಾವನೆ ಮಂಡಿಸಿದ್ದು ಅದಕ್ಕೆ ಎಲ್ಲ ಶಾಸಕರು ಬೆಂಬಲ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.
ಶಾಸಕರು ಮತ್ತು ಸಚಿವರ ಸಂಬಳ ಎಷ್ಟಾಗಲಿದೆ ಎಂಬ ವಿವರಗಳು ಸದ್ಯಕ್ಕೆ ಲಭ್ಯವಿಲ್ಲ. ಆದರೆ ಶೇಕಡ 50ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.
ಪ್ರಸ್ತುತ ಒಬ್ಬ ಶಾಸಕರ ತಿಂಗಳ ವೇತನ 40,000 ರೂ,
ಕ್ಷೇತ್ರ ಭತ್ಯೆ – 60,000 ರೂ.
ಪ್ರಯಾಣ ಭತ್ಯೆ – 60,000 ರೂ.
ಆಪ್ತ ಸಹಾಯಕರ ವೇತನ – 20,000 ರೂ.
ದೂರವಾಣಿ ವೆಚ್ಚ – 20,000 ರೂ.
ಅಂಚೆ ವೆಚ್ಚ – 5000 ರೂ.
ಒಟ್ಟು ಮೊತ್ತ – 2,05,000 ರೂ.



