75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ, ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ ಕಾರ್ಯಕ್ರಮ

4 years ago

ಬೆಂಗಳೂರು: 225ನೇ ವರ್ಷದ  ಕ್ರಾಂತಿ ವೀರ ಸಂಗೊಳ್ಳಿ ಜನ್ಮದಿನ ಮತ್ತು 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಶುಭದಿನ ಎಂದು ವಿ.ಸೋಮಣ್ಣ ಪ್ರತಿಷ್ಠಾನ ಅಧ್ಯಕ್ಷೆ ಶೈಲಜಾ ಸೋಮಣ್ಣ

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ವಿ.ಸೋಮಣ್ಣ ಪ್ರತಿಷ್ಠಾನ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತಾಡಿದ ಅವರು,  ಲಕ್ಷಾಂತರ ಜನರ ತ್ಯಾಗ, ಬಲಿದಾನದಿಂದ ಸ್ವಾತಂತ್ರ್ಯ ಲಭಿಸಿದೆ. ದೇಶದ ಜನರು ಸ್ವಾತಂತ್ರ್ಯ ಹೋರಾಟಗಾರರನ್ನ ಪ್ರತಿ ದಿನ ಸ್ಮರಣೆ ಮಾಡಬೇಕು ಎಂದು ಕರೆನೀಡಿದರು.

ಭಾರತ ದೇಶ ಆರ್ಥಿಕವಾಗಿ, ಸಾಮಾಜಿಕವಾಗಿ ದೇಶ ಇಂದು ಪ್ರಧಾನಿ ನರೇಂದ್ರಮೋದಿರವರ ನೇತೃತ್ವದಲ್ಲಿ ಸಮ್ಮದ್ದ, ಸಧೃಢವಾಗಿ ಸಾಗುತ್ತಿದೆ. ವಿ.ಸೋಮಣ್ಣ ಪ್ರತಿಷ್ಠಾನ ವತಿಯಿಂದ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡು ಬರುತ್ತಿದೆ. ಶ್ರೀ  ಶಿವಕುಮಾರ ಸ್ವಾಮೀಜಿ, ಶ್ರೀ ಬಾಲಗಂಗಾಧರನಾಥರವರ ಜನ್ಮದಿನಾಚರಣೆ ಪ್ರಯುಕ್ತ  ಮಕ್ಕಳಿಗೆ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿದೆ ಎಂದರು.

ಚಿಂತಕ ರಾಜಶೇಖರ ಮಠಪತಿ, ವಿ.ಸೋಮಣ್ಣ ಪ್ರತಿಷ್ಠಾನದ ಅಧ್ಯಕ್ಷೆ ಶೈಲಜಾ ಸೋಮಣ್ಣರವರು, ಕನ್ನಡ ಸಾಹಿತ್ಯ ಅಕಾಡೆಮಿ ರಿಜಿಸ್ಟಾರ್ ಕರಿಯಪ್ಪ, ರಾಜ್ಯ ಬಿ.ಜೆ.ಪಿ. ಯುವ ಮುಖಂಡ ಡಾ||ಅರುಣ್ ಸೋಮಣ್ಣರವರು ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣರವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.

Leave a Reply