ಗಣರಾಜ್ಯದ ಸಂಭ್ರಮದಲ್ಲಿರುವ ದೇಶದಲ್ಲಿ “ಹಿಂದೂ ರಾಷ್ಟ್ರ”ಕ್ಕೆ”ಸಂವಿಧಾನ” ಸಿದ್ಧಪಡಿಸಿರುವ ಆಘಾತಕಾರಿ ಹಾಗೂ ಅತ್ಯಂತ ಅಪಾಯಕಾರಿ ಬೆಳವಣಿಗೆ ನಡೆದಿರುವುದು ದೇಶ ಭಾರಿ ಗಂಡಾಂತರ ಎದುರಿಸುವ ಮುನ್ಸೂಚನೆಯಂತಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಜಾತ್ಯಾತೀತ ರಾಷ್ಟ್ರವೆಂದು ಒಪ್ಪಿಕೊಂಡ ದೇಶದ ಸಂವಿಧಾನದಲ್ಲಿ, ಹಿಂದೂ ರಾಷ್ಟ್ರ ಎಂದು ಘೋಷಿಸುವುದು, ಪ್ರತ್ಯೇಕ ಸಂವಿಧಾನ ರಚಿಸುವುದು ದೇಶದ್ರೋಹದ ಕೃತ್ಯ.
“ಸಂವಿಧಾನ ಬದಲಾಯಿಸುತ್ತೇವೆ”, “ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು”, “ನಮಗೆ ಗೌರವ ಕೊಡುವ ಸಂವಿಧಾನ ರಚಿಸಿಕೊಳ್ಳಬೇಕು.” ಇಂತಹ ಸಂವಿಧಾನ ವಿರೋಧಿ ಹೇಳಿಕೆಯ ಮುಂದುವರೆದ ಭಾಗವೇ “ಹಿಂದೂ ರಾಷ್ಟ್ರಕ್ಕಾಗಿ” “ಪ್ರತ್ಯೇಕ ಸಂವಿಧಾನ” ರಚಿಸಿರುವುದು ಸ್ಪಷ್ಟ.
ಮನುಸ್ಮೃತಿಯನ್ನೇ ಆಧಾರವಾಗಿಟ್ಟುಕೊಂಡು ಸಂವಿಧಾನ” ರಚಿಸಲಾಗಿದೆ ಎನ್ನಲಾಗಿರುವುದು, ಮಹಿಳೆಯರು ಹಾಗೂ ದಲಿತ, ಶೋಷಿತ ಸಮುದಾಯಗಳ ಮರಣ ಶಾಸನವೇ ಆಗಿರುವುದರಲ್ಲಿ ಯಾವ ಅನುಮಾನವೂ ಇಲ್ಲ.
ಗುರುಕುಲ ಪದ್ಧತಿ ಜಾರಿ ಸೇರಿದಂತೆ ಧರ್ಮ ಸಂಸತ್ತು, ವೇದಾಧ್ಯಯನವೇ ಚುನಾವಣೆಯ ಮಾನದಂಡ ಸೇರಿದಂತೆ ಅಪಾಯಕಾರಿ ಅಂಶಗಳನ್ನು ಚರ್ಚಿಸಿರುವುದು ದೇಶದ ಬಹುಸಂಖ್ಯಾತ ಸಮುದಾಯಗಳಿಗೆ ಮಾಡಿರುವ ಅಪಮಾನ.
“ಹಿಂದೂ ರಾಷ್ಟ್ರ” ಕ್ಕೆ “ಪ್ರತ್ಯೇಕ ಸಂವಿಧಾನ”ರಚನೆ ಮಾಡಲು ಗುಪ್ತವಾಗಿಯೇ ತಯಾರಿ ನಡೆದಂತಿದೆ.
ಫೆ.3ರಂದು ಸಂಪೂರ್ಣ 501 ಪುಟಗಳು ಬಹಿರಂಗವಾಗಲಿದೆ ಎನ್ನಲಾಗಿದ್ದು, ಕೂಡಲೇ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಯಾವ ಕಾರಣಕ್ಕೂ ಬಹಿರಂಗಗೊಳ್ಳದಂತೆ ಹಾಗೂ ದೇಶದ ಸ್ವಾಸ್ಥ್ಯವನ್ನು ಹಾಳುಗೆಡವದಂತೆ ಕ್ರಮ ತೆಗೆದುಕೊಳ್ಳಬೇಕಿದೆ.
ಪ್ರತಿಯೊಬ್ಬ ಭಾರತೀಯರ ಸ್ವಾಭಿಮಾನ, ಗೌರವ ಹಾಗೂ ಘನತೆಯ ಬದುಕಿನ ಹಕ್ಕು ನೀಡಿರುವ ಸಂವಿಧಾನವನ್ನೇ ಗೌಣಗೊಳಿಸುವ ಹಾಗೂ ಅಪಮಾನಗೊಳಿಸುವ ಪಟ್ಟಭದ್ರ ಹಿತಾಸಕ್ತಿಗಳ ವ್ಯವಸ್ಥಿತ ಸಂಚು ಹೊರ ಬರುತ್ತಲೇ ಇದೆ. ಇಂತಹ ಸಂವಿಧಾನ ವಿರೋಧಿ ದುಷ್ಕರ್ಮಿಗಳ ಕೃತ್ಯವನ್ನು ಹಿಮ್ಮೆಟ್ಟಿಸದಿದ್ದರೆ ಬಹುತ್ವ ಹಾಗೂ ಐಕ್ಯತೆಯ ಭಾರತ ಉಳಿಯುವುದಿಲ್ಲ.
– ಬಿ ಕೆ ಹರಿಪ್ರಸಾದ್, ವಿಧಾನ ಪರಿಷತ್ ಸದಸ್ಯ



