ದೆಹಲಿ: 2021-22ರ ಮೊದಲ ತ್ರೈಮಾಸಿಕದ ಅವಧಿಯಲ್ಲಿ ದೇಶದ ಆರ್ಥಿಕತೆ ಶೇ 20.1ರಷ್ಟು ಬೆಳವಣಿಗೆಯಾಗಿದೆ. ಹಿಂದಿನ ವರ್ಷದ ಅವಧಿಯ ಕಡಿಮೆ ಆಧಾರದಿಂದ ಇದು ಸಹಾಯಕವಾಗಿದೆ ಎಂದು ರಾಷ್ಟ್ರೀಯ ಅಂಕಿಅಂಶಗಳ ಕಚೇರಿ ಮಾಹಿತಿಯನ್ನು ಬಿಡುಗಡೆ ಮಾಡಿದೆ.
ಕೊರೊನಾ ಹಿನ್ನೆಲೆಯಲ್ಲಿ 2020ರ ಮಾರ್ಚ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ವರ್ಷದ ಮೊದಲ ತ್ರೈಮಾಸಿಕದಲ್ಲಿ, ಜಿಡಿಪಿ – 23.9ಗೆ ಕುಸಿದಿತ್ತು.




