ಭಾರತದ ಸ್ತ್ರೀ ಶಕ್ತಿಯ ಅನುಪಮ ಪ್ರತೀಕ ಇಂದಿರಾ ಗಾಂಧಿ:  ದಿನೇಶ್ ಗುಂಡೂರಾವ್

2 years ago

#IndiraGandhi #unparalleled #symbol #India #female #power #DineshGundurao

ಬೆಂಗಳೂರು: ದೇಶದ ಏಕೈಕ ಮಹಿಳಾ ಪ್ರಧಾನ ಮಂತ್ರಿಯಾಗಿ, ಭಾರತದ ಸ್ತ್ರೀ ಶಕ್ತಿಯ ಅನುಪಮ ಪ್ರತೀಕವಾಗಿರುವ ಇಂದಿರಾ ಗಾಂಧಿಯವರ ಬದುಕು ನಮಗೆಲ್ಲರಿಗೂ ಮಾದರಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಭಾರತದ ಮಾಜಿ ಪ್ರಧಾನ ಮಂತ್ರಿಗಳಾದ ಇಂದಿರಾ ಗಾಂಧಿ ಅವರ ಜೀವನ ಪಯಣದ ಕುರಿತು ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ಭಾರತೀಯ ಯುವ ಕಾಂಗ್ರೆಸ್ ಆಯೋಜಿಸಿದ್ದ ʻರಸಪ್ರಶ್ನೆ ಸ್ಪರ್ಧೆʼಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿರಾ ಗಾಂಧಿ ಅವರ ಜೀವನಗಾಥೆಯನ್ನು ವಿದ್ಯಾರ್ಥಿಗಳಿಗೆ ಪರಿಚಯ ಮಾಡಿಸುವ ಕಾರ್ಯ ಶ್ಲಾಘನೀಯ. ಇದಕ್ಕಾಗಿ ನಾನು ಭಾರತೀಯ ಯುವ ಕಾಂಗ್ರೆಸ್‌ನ ಪದಾಧಿಕಾರಿಗಳನ್ನು ಅಭಿನಂದಿಸುತ್ತೇನೆ ಎಂದರು.

ಮಹಾರಾಣಿ ಕಾಲೇಜು ಸೇರಿದಂತೆ ನಗರದ ವಿವಿಧ ಕಾಲೇಜಿನ ನೂರಾರು ವಿದ್ಯಾರ್ಥಿನಿಯರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಬಿವಿ ಶ್ರೀನಿವಾಸ್, ರಾಜ್ಯ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಮುಹಮ್ಮದ್ ಹ್ಯಾರಿಸ್ ನಲಪಾಡ್ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply