ಬಾಲಕನ ಗುಪ್ತಾಂಗ ಸುಟ್ಟ ಶಿಕ್ಷಕಿ!

4 years ago

ತುಮಕೂರು:  ಪದೇ ಪದೇ ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದ ಎಂಬ ಕ್ಷುಲ್ಲಕ ಕಾರಣಕ್ಕೆ 3 ವರ್ಷದ ಬಾಲಕನ ಗುಪ್ತಾಂಗವನ್ನೇ ಸುಟ್ಟು ವಿಚಿತ್ರ ಮತ್ತು ಅಮಾನವೀಯ ಶಿಕ್ಷೆ ನೀಡಿದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ವರದಿಯಾಗಿದೆ.

ಚಡ್ಡಿಯಲ್ಲಿ ಮೂತ್ರ ವಿಸರ್ಜನೆ ತಡೆಯಲು ಬಾಲಕನನ್ನು ಹೆದರಿಸಲು ಅವನ ಗುಪ್ತಾಂಗವನ್ನೇ ಬೆಂಕಿ ಕಡ್ಡಿಯಿಂದ ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಸೇರಿಕೊಂಡು ಸುಟ್ಟಿದ್ದಾರೆ. ಘಟನೆಯಿಂದ ಬಾಲಕನ ಗುಪ್ತಾಂಗ ಮತ್ತು ತೊಡೆ ಬಳಿ ಸುಟ್ಟಗಾಯಗಳಾಗಿವೆ. ಸುದ್ದಿ ತಿಳಿಯುತ್ತಿದಗದಂತೆ ಜಿಲ್ಲಾ ಮಕ್ಕಳ ಹಕ್ಕು ರಕ್ಷಣಾ ಘಟಕದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮಗುವಿನ ಹೇಳಿಕೆ ದಾಖಲಿಸಿಕೊಂಡು ಮುಂದಿನ ಕ್ರಮಕ್ಕೆ ಸಜ್ಜಾಗಿದ್ದಾರೆ.

Leave a Reply