ಬೆಂಗಳೂರು: ಕೆಪಿಸಿಸಿ ಅಂಗ ಸಂಸ್ಥೆ INBCWF ನಿಂದ ಬಜೆಟ್ ನಲ್ಲಿ ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲಾಯಿತು.
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
INBCWF ಅಧ್ಯಕ್ಷ ಜಿ.ಆರ್.ದಿನೇಶ್ ಮತ್ತು ಸೇವಾದಳ ಅಧ್ಯಕ್ಷ ಎಂ.ರಾಮಚಂದ್ರ, ಜಾಕೀರ್ ಹುಸೇನ್, ಅಕ್ರಮ್ ಪಾಷಾ, ಪ್ರಸಾದ್ ಆರಾಧ್ಯ, ನಾಗರಾಜು, ಸಂಗೀತ ನಾಡಗೌಡ, ರಘು, ಗಿರೀಶ್, ಮಹಿಳಾ ಮುಖಂಡರು ರಾಜ್ಯ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಜಿ.ಆರ್.ದಿನೇಶ್ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 10 ವರ್ಷಗಳಿಂದ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡುತ್ತಾ ಬಂದಿದೆ. ಕಳೆದ ಲೋಕಸಭಾ ಚುನಾವಣೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟಕ್ಕೆ 19 ಲೋಕಸಭಾ ಸ್ಥಾನ ರಾಜ್ಯದ ಜನತೆ ನೀಡಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಎರಡು ಬಾರಿ ರಾಜ್ಯದಿಂದ ರಾಜ್ಯಸಭೆ ಆಯ್ಕೆಯಾಗಿದ್ದಾರೆ. ಐದು ಸಚಿವರು ಕೇಂದ್ರ ಸರ್ಕಾರದಲ್ಲಿ ಇದ್ದಾರೆ. ರಾಜ್ಯಕ್ಕೆ ಇವರ ಕೊಡುಗೆ ಏನು ಎಂಬುದು ರಾಜ್ಯದ ಜನರಿಗೆ ತಿಳಿಸಬೇಕು ಎಂದರು.
ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಜಿ.ಎಸ್.ಟಿ. ರೂಪದಲ್ಲಿ ಲಕ್ಷಾಂತರ ಕೋಟಿ ರೂಪಾಯಿ ಸಂಗ್ರಹ ಮಾಡುತ್ತದೆ. ಆದರೆ ರಾಜ್ಯಕ್ಕೆ ಅನುದಾನ ನೀಡುವುದಿಲ್ಲ. ದೇಶದಲ್ಲಿ ಎರಡನೇಯ ಅತಿಡೊಡ್ಡ ತೆರಿಗೆ ಪಾವತಿ ರಾಜ್ಯ ನಮ್ಮದು ಎಂದರು.
ಕೇಂದ್ರ ಸರ್ಕಾರ ತಾಯಿ ಸ್ಥಾನದಲ್ಲಿ ನಿಂತು ಎಲ್ಲ ರಾಜ್ಯಗಳಿಗೆ ನ್ಯಾಯ ಒದಗಿಸಬೇಕು. ಆದರೆ ಕರ್ನಾಟಕಕ್ಕೆ ಬಜೆಟ್ ನಲ್ಲಿ ಅನುದಾನ ನೀಡದೇ ತಾರತಮ್ಯ ಮಾಡಿದೆ ಮತ್ತು ಬಿಹಾರ ಮತ್ತು ಆಂಧ್ರಪ್ರದೇಶ ಹೆಚ್ಚಿನ ಅನುದಾನ ನೀಡಿದೆ. ಕೇಂದ್ರ ಸರ್ಕಾರ ರಾಜ್ಯದ ಮೇಲೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದರು.




