ಬೆಂಗಳೂರು: ರಾಜಧಾನಿ ಮಹಾನಗರ ಬೆಂಗಳೂರಿನಲ್ಲಿ ಹಾಡಹಗಲೇ ನಡೆದ ದರೋಡೆ ಪ್ರಕರಣದ ಬೆನ್ನು ಹತ್ತಿರುವ ಪೊಲೀಸರು ಮಹತ್ವದ ಪ್ರಗತಿ ಸಾಧಿಸಿದ್ದಾರೆ. ದರೋಡೆಗೆ ಬಳಸಿದ್ದು ಇನ್ನೋವಾ ಕಾರನ್ನು ತಿರುಪತಿಯಲ್ಲಿ ಪತ್ತೆ ಹಚ್ಚಿದ್ದು ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಜೆ.ಪಿ. ನಗರದ ಹೆಚ್‌ಡಿಎಫ್‌ಸಿ ಬ್ಯಾಂಕ್‌ನಿಂದ ಹಣ ಸಂಗ್ರಹಿಸಿ ಗೋವಿಂದಪುರ ಎಟಿಎಂ ಘಟಕಗಳಿಗೆ ತುಂಬಲು ಸಿಎಂಎಸ್ ಏಜೆನ್ಸಿಯ ನಾಲ್ವರು ಸಿಬ್ಬಂದಿ ತೆರಳುತ್ತಿದ್ದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಈ ಮಾರ್ಗ ಮಧ್ಯೆ ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ವಾಹನ ತಡೆಗಟ್ಟಿದ ಆರೋಪಿಗಳು ಪರಿಶೀಲನೆ ಹೆಸರಿನಲ್ಲಿ ಸಿಎಂಎಸ್ ವಾಹನದಲ್ಲಿದ್ದ ಹಣ ಮತ್ತು ಸಿಬ್ಬಂದಿಯನ್ನು ತಮ್ಮ ವಾಹನಕ್ಕೆ ವರ್ಗಾಯಿಸಿಕೊಂಡು ಆನಂತರ ದರೋಡೆ ಮಾಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಹಣ ದೊಂದಿಗೆ ಇನೋವಾ ಕಾರಿನಲ್ಲಿ ಹೊರಟ ದರೋಡೆಕೋರರು ಅಲ್ಲಲ್ಲಿ ಸುತ್ತಾಡಿ ಅಂತಿಮವಾಗಿ ತಿರುಪತಿ ತಲುಪಿದ್ದಾರೆ ಅಲ್ಲಿ ಹಣವನ್ನು ಮತ್ತೊಂದು ವಾಹನಕ್ಕೆ ವರ್ಗಾಯಿಸಿಕೊಂಡು ತಾವು ಬಂದಿದ್ದ ಇನ್ನೋವಾ ಕಾರನ್ನು ತಿರುಪತಿಯ ಬಳಿಯೇ ಕಾರು ಬಿಟ್ಟು ಹಣದ ಸಮೇತ ಪರಾರಿಯಾಗಿದ್ದಾರೆ. ಹೀಗಾಗಿ ಆರೋಪಿಗಳಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ತಿರುಪತಿ ಪೊಲೀಸರ ಜೊತೆ ದಕ್ಷಿಣ ವಿಭಾಗ ಪೊಲೀಸರು ಹೋಟೆಲ್, ಲಾಡ್ಜ್, ದೇವಸ್ಥಾನ ಬಳಿ ಮಪ್ತಿಯಲ್ಲಿ ಶೋಧ ನಡೆಸಲಾಗುತ್ತಿದೆ. ಈ ನಡುವೆ ದರೋಡೆ ಪ್ರಕರಣದ ಸಂಬಂಧ 20 ಕ್ಕೂ ಹೆಚ್ಚು ಮಂದಿಯನ್ನು ನಗರ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ಕೈಗೊಂಡಿದ್ದಾರೆ. ದರೋಡೆ ಪ್ರಕರಣದಲ್ಲಿ ಹಣ ವರ್ಗಾವಣೆ ಮಾಡುತ್ತಿದ್ದ ಸಿಎಂಎಸ್ ಸಿಬ್ಬಂದಿ ಕೂಡ ಶಾಮಿಲ್ ಆಗಿರಬಹುದು ಎಂಬ ಶಂಕೆ ಪೊಲೀಸರನ್ನು ಕಾಡುತ್ತಿದೆ ಅದಕ್ಕೆ ಪೂರಕವೆಂಬಂತೆ ಅನೇಕ ವಿದ್ಯಮಾನಗಳು ನಡೆದಿದ್ದು ಅದರ ಆಧಾರದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಹೆಚ್ ಡಿಎಫ್ ಸಿ ಬ್ಯಾಂಕ್ ಸಿಬ್ಬಂದಿ, ಸಿಎಂಎಸ್ ಸಿಬ್ಬಂದಿಯನ್ನು ತೀವ್ರ ವಿಚಾರಣೆ ಮಾಡಲಾಗಿದ್ದು,ಘಟನೆಯ ಸಮಯವನ್ನು ಆಧರಿಸಿ ಪ್ರಶ್ನೆ ಕೇಳಲಾಗುತ್ತಿದೆ. ಇನ್ನು ಪ್ರಕರಣದ ಪತ್ತೆಗೆ ರಚಿಸಲಾಗಿರುವ ವಿಶೇಷ ತಂಡಗಳು ದರೋಡೆಕೋರ ಪತ್ತೆಗೆ ಹಗಲಿರುಳು ಶ್ರಮಿಸುತ್ತಿದ್ದಾರೆ.
ಕೃತ್ಯವು ವೆಬ್ ಸೀರೀಸ್ ಪ್ರೇರಿತವಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಆರೋಪಿಗಳು ದರೋಡೆಗೆ ಹಲವು ದಿನಗಳಿಂದ ಸಂಚು ರೂಪಿಸಲಾಗಿತ್ತು, ಮೂರು ಠಾಣೆಗೆ ಸೇರುವ ಸ್ಥಳದಲ್ಲಿ ವಾಹನ ಬಿಡುವುದು ಕೂಡ ಯೋಜನೆ ಆಗಿತ್ತು ಎಂಬ ಅನುಮಾನ ವ್ಯಕ್ತವಾಗಿದೆ.
ಸಿಎಂಎಸ್ ವಾಹನ ಸಿಕ್ಕಿದ್ದ ಫ್ಲೈ ಓವರ್ ಮೂರು ಪೊಲೀಸ್ ಠಾಣೆಗಳಿಗೆ ಗಡಿಯಾಗಿದೆ. ನಿಮಾನ್ಸ್ನಿಂದ ಮೇಲ್ಭಾಗಕ್ಕೆ ಬಂದರೆ ಆಡುಗೋಡಿ ಠಾಣೆ ಸರಹದ್ದು, ವಾಹನದ ಎಡಬದಿಯಲ್ಲಿ ಸುದ್ದುಗುಂಟೆಪಾಳ್ಯ ಠಾಣಾ ವ್ಯಾಪ್ತಿ ಮತ್ತು ಕೃತ್ಯ ನಡೆದಿರುವುದು ಸಿದ್ದಾಪುರ ಠಾಣಾ ವ್ಯಾಪ್ತಿಯಲ್ಲಿ. ಆ ಪೈಕಿ ಸಿದ್ದಾಪುರ ಠಾಣೆ ದಕ್ಷಿಣ ವಿಭಾಗಕ್ಕೆ ಸೇರಿದರೆ ವಾಹನ ಸಿಕ್ಕಿದ್ದು ಸುದ್ದುಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ. ಈ ಠಾಣೆ ಸೌತ್ ಈಸ್ಟ್ ವಿಭಾಗಕ್ಕೆ ಸೇರಿದ್ದು. ಹೀಗಾಗಿ ವಾಹನ ಸಿಕ್ಕ ಬಳಿಕ ಮೊದಲು ಯಾವ ಠಾಣಾ ವ್ಯಾಪ್ತಿಗೆ ಘಟನೆ ಬರಲಿದೆ ಎಂಬ ಗೊಂದಲ ಉಂಟಾಗಿದೆ.




