ಬೆಂಗಳೂರು: ಮಹಾನಗರ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ಪೊಲೀಸರು ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ, ಟೋಯಿಂಗ್ ಗೆ ಇಲಾಖೆಯ ವಾಹನ ಮತ್ತು ಸಿಬ್ಬಂದಿ ಬಳಸಲಾಗುತ್ತದೆ. ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ಅವಕಾಶ ನೀಡುವುದಿಲ್ಲ ಎಂದರು.
ಮೊದಲಿಗೆ ಹೆಚ್ಚು ಸಂಚಾರ ದಟ್ಟಣೆಯಿರುವ ರಸ್ತೆಗಳಲ್ಲಿ ಅಡ್ಡಾದಿಡ್ಡಿ ನಿಲ್ಲಿಸುವ ವಾಹನಗಳನ್ನು ಟೋಯಿಂಗ್ ಮಾಡಲು ಕ್ರಮಕೈಗೊಳ್ಳಲಾಗುವುದು. ಅತಿ ಹೆಚ್ಚು ದಟ್ಟಣೆಯಿರುವ ರಸ್ತೆಗಳಲ್ಲಿ ವ್ಯವಸ್ಥೆ ಜಾರಿಗೆ ಬರಲಿದೆ. ಇದಕ್ಕೆ ಪೊಲೀಸರು ಹಾಗೂ ಗೃಹರಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದರು.
ಮೊದಲು ಟೋಯಿಂಗ್‌ಗೆ ಬಾಡಿಗೆ ವಾಹನಗಳನ್ನು ಬಳಸಲಾಗುತ್ತಿತ್ತು. ಈಗ ಇಲಾಖೆಯ ವಾಹನಗಳನ್ನು ಬಳಸಿ ಯಾವುದೇ ಸಮಸ್ಯೆಗಳಿಗೆ ಎಡೆಮಾಡಿಕೊಡದೆ ಟೋಯಿಂಗ್ ನಿರ್ವಹಣೆ ಮಾಡಲಿದ್ದೇವೆ ಎಂದರು.
ಬಹಳಷ್ಟು ಜನ ಪೊಲೀಸ್ ಠಾಣೆಗಳಿಗೆ ತೆರಳಲು ಹಿಂದೇಟು ಹಾಕುತ್ತಾರೆ. ಆದ್ದರಿಂದ ಪೊಲೀಸ್ ಸಿಬ್ಬಂದಿಗಳೇ ನಿಗದಿತವಾಗಿ ಮನೆಮನೆಗೆ ತೆರಳಿ ಜನರ ಬಳಿ ಮಾತನಾಡಿ, ಸಹಾಯದ ಅಗತ್ಯ ತಿಳಿದು ಅಗತ್ಯವಿದ್ದರೆ ದೂರು ದಾಖಲಿಸಿಕೊಳ್ಳಲು ಮನೆಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮ ಜಾರಿಗೆ ತರಲಾಗುವುದು ಎಂದರು.
ಮನೆಗಳವು ವಾಹನಗಳವು, ಮಾದಕ ಪದಾರ್ಥಗಳ ದುಷ್ಪರಿಣಾಮಗಳು, ಸಂಚಾರ ನಿಯಮಗಳ ಕುರಿತು ಕೂಡ ಮನೆ ಮನೆಗೆ ತೆರಳುವ ಪೊಲೀಸರು ಅರಿವು ಮೂಡಿಸಲಿದ್ದಾರೆ ಎಂದರು.




