ಕೇಂದ್ರ ಬಿಜೆಪಿ ಸರ್ಕಾರ ಬಡವರು, ಮಧ್ಯಮವರ್ಗದ ಜನರ ಹೊಟ್ಟೆಯ ಮೇಲೆ ಬರೆ ಎಳೆದಿದೆ: ಹೆಚ್.ಎಸ್.ಮಂಜುನಾಥ್ ಗೌಡ
ಬೆಂಗಳೂರು: ಫ್ರೀಡಂಪಾರ್ಕ್ ನಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ.ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹೆಚ್.ಎಸ್.ಮಂಜುನಾಥ್ ಗೌಡ ನೇತೃತ್ವದಲ್ಲಿ ವಿನೂತನವಾಗಿ ಎತ್ತಿನಗಾಡಿ ಮೂಲಕ ಬೃಹತ್ ಪ್ರತಿಭಟನೆ ಜರುಗಿತು. ಯುವ ಕಾಂಗ್ರೆಸ್ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಇದೇ ಸಂದರ್ಭದಲ್ಲಿ ಮಾತನಾಡಿದ ಹೆಚ್.ಎಸ್.ಮಂಜುನಾಥ್ ಗೌಡ, ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರ ಆದೇಶ ಮೇರೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರ ಮಾರ್ಗದರ್ಶನದಲ್ಲಿ ಕೇಂದ್ರ ಬಿಜೆಪಿ ಸರ್ಕರದ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ ಎಂದರು.
ಕೇಂದ್ರ ಬಿಜೆಪಿ ಸರ್ಕಾರ ದೇಶದ 140 ಕೋಟಿ ಜನರ ಹೊಟ್ಟೆಯ ಮೇಲೆ ಬರೆ ಎಳೆದಿದೆ. ಪೆಟ್ರೋಲ್, ಡಿಸೇಲ್ ಮತ್ತು ಎಲ್.ಪಿಜಿ. ಗ್ಯಾಸ್ ಬೆಲೆ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದವರು ಜೀವನ ಸಂಕಷ್ಟಕ್ಕೆ ತಳ್ಳಿದ್ದಾರೆ ಎಂದರು.
ಉದ್ಯೋಗವಿಲ್ಲ, ನಿರುದ್ಯೋಗ ಸಮಸ್ಯೆ ತಲೆದೋರಿದೆ, ಇದರ ಜೊತೆಯಲ್ಲಿ ಬೆಲೆ ಏರಿಕೆಯಿಂದ ಜನರ ಜೀವನ ನಡೆಸುವುದು ಹೇಗೆ? ಪ್ರಧಾನಿ ನರೇಂದ್ರ ಮೋದಿಯವರ 11ವರ್ಷಗಳ ದುರಾಡಳಿತದಿಂದ ದೇಶದ ಆರ್ಥಿಕ ಪರಿಸ್ಥಿತಿ ಕುಸಿದಿದೆ. ಅಚ್ಚೇದೀನ್ ಎಂದರೆ ಇದೇನಾ? ಎಂದು ಕೇಳಿದರು.
ಜನಸಾಮಾನ್ಯರ ನೋವಿಗೆ, ಸ್ಪಂದಿಸುವ ಕಾರ್ಯವನ್ನು ಯುವ ಕಾಂಗ್ರೆಸ್ ಮಾಡುತ್ತಿದೆ. ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಯುವ ಕಾಂಗ್ರೆಸ್ ಹೋರಾಟ ಮಾಡಲಿದೆ ಎಂದರು.
ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ದಿವ್ಯಾ, ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗೌಡ, ಕೇಂದ್ರ ಜಿಲ್ಲಾ ಯುವ ಕಾಂಗ್ರೆಸ್ ರಂಜೀತ್, ದಕ್ಷ್ಮಿಣ ಜಿಲ್ಲಾಧ್ಯಕ್ಷ ಮೌನೀಶ್ ರೆಡ್ಡಿ, ರಾಜ್ಯ ಪ್ರದಾನ ಕಾರ್ಯದರ್ಶಿಗಳಾದ ಚೇತನ್ ಕುಮಾರ್, ಶಂಶಾಕ್ ಗೌಡ, ವಿಧಾನಸಭಾ ಕ್ಷೇತ್ರ ಮತ್ತು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.








